ವಿಶ್ವ ಹೃದಯ ದಿನದ ಅಂಗವಾಗಿ ಕಾರ್ಕಳದ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿತ ಕಾಯಿಲೆಗಳ ಅಪಾಯವನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವ ಉದ್ದೇಶದಿಂದ ಸಮಗ್ರ ಹೃದಯ ಆರೋಗ್ಯ ತಪಾಸಣಾ ಪ್ಯಾಕೇಜ್‌ನ್ನು ಪರಿಚಯಿಸಲಾಗಿದೆ.

ಕಾರ್ಕಳ: ವಿಶ್ವ ಹೃದಯ ದಿನದ ಅಂಗವಾಗಿ ಕಾರ್ಕಳದ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿತ ಕಾಯಿಲೆಗಳ ಅಪಾಯವನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವ ಉದ್ದೇಶದಿಂದ ಸಮಗ್ರ ಹೃದಯ ಆರೋಗ್ಯ ತಪಾಸಣಾ ಪ್ಯಾಕೇಜ್‌ನ್ನು ಪರಿಚಯಿಸಲಾಗಿದೆ.₹ 3,000 ದರದ ಈ ಪ್ಯಾಕೇಜ್‌ನಲ್ಲಿ ಇಸಿಜಿ, ಎಕೋ/ಟಿಎಂ‌ಟಿ, ಎಫ್‌ಬಿಎಸ್‌ (ಶುಗರ್) ಪರೀಕ್ಷೆ, ಲಿಪಿಡ್ ಪ್ರೊಫೈಲ್, ಕಿಡ್ನಿ ಫಂಕ್ಷನ್ ಟೆಸ್ಟ್ ಸೇರಿದಂತೆ ಅಗತ್ಯ ರಕ್ತ ಪರೀಕ್ಷೆಗಳು ಹಾಗೂ ಹೃದ್ರೋಗ ತಜ್ಞರ ಸಮಾಲೋಚನೆ ಒಳಗೊಂಡಿದೆ.ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಸಂಜಯ್ ಕುಮಾರ್ ಕೆ.ಆರ್. ಮಾತನಾಡಿ, ಹೃದಯ ಸಂಬಂಧಿತ ಅಪಾಯಗಳು ಕೆಲವೊಮ್ಮೆ ಯಾವುದೇ ಸ್ಪಷ್ಟ ಲಕ್ಷಣಗಳಿಲ್ಲದೆಯೇ ಕಾಣಿಸಿಕೊಳ್ಳಬಹುದು. ನಿಯಮಿತ ಆರೋಗ್ಯ ತಪಾಸಣೆಯ ಮೂಲಕ ಇಂತಹ ಅಪಾಯಗಳನ್ನು ಆರಂಭಿಕ ಹಂತದಲ್ಲೇ ಗುರುತಿಸಿ, ಅಗತ್ಯ ಮುನ್ನೆಚ್ಚರಿಕೆ ಹಾಗೂ ವೈದ್ಯಕೀಯ ಸಲಹೆ ಪಡೆಯಲು ಸಾಧ್ಯವಿದೆ. ಹೀಗಾಗಿ ಪ್ರತಿಯೊಬ್ಬರೂ ಹೃದಯದ ಆರೋಗ್ಯದ ಬಗ್ಗೆ ಜಾಗೃತರಾಗಿರಬೇಕು ಎಂದು ತಿಳಿಸಿದರು.ಅಧಿಕ ರಕ್ತದೊತ್ತಡ, ಮಧುಮೇಹ, ಅಧಿಕ ಕೊಲೆಸ್ಟ್ರಾಲ್, ಕುಟುಂಬದಲ್ಲಿ ಹೃದಯ ಕಾಯಿಲೆಯ ಹಿನ್ನೆಲೆ ಹೊಂದಿರುವವರು, ಧೂಮಪಾನ ಮಾಡುವವರು ಹಾಗೂ ಜಡ ಜೀವನಶೈಲಿ ಹೊಂದಿರುವವರಿಗೆ ಈ ತಪಾಸಣೆ ವಿಶೇಷವಾಗಿ ಉಪಯುಕ್ತವಾಗಲಿದೆ. ತಮ್ಮ ಹೃದಯ ಆರೋಗ್ಯದ ಬಗ್ಗೆ ತಿಳಿದುಕೊಳ್ಳಲು ಬಯಸುವವರೂ ಇದರ ಪ್ರಯೋಜನ ಪಡೆಯಬಹುದು.ತಪಾಸಣಾ ಪ್ಯಾಕೇಜ್ ಅಪಾಯಿಂಟ್‌ಮೆಂಟ್ ಆಧಾರದ ಮೇಲೆ ಮಾತ್ರ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ 9731601150 ಅಥವಾ 08258-230583 ಸಂಪರ್ಕಿಸುವಂತೆ ಆಸ್ಪತ್ರೆ ತಿಳಿಸಿದೆ.