ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ಸ್ವಾಗತ

ಕನ್ನಡಪ್ರಭ ವಾರ್ತೆ ಮೈಸೂರು

ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಸರ್ಕಾರವು 4 ಪಟ್ಟಣ ಪಂಚಾಯತ್, 1 ನಗರಸಭೆ ಹಾಗೂ 8 ಗ್ರಾಮ ಪಂಚಾಯಿತಿಗಳನ್ನು ಒಳಗೊಂಡಂತೆ ಮೈಸೂರು ಮಹಾನಗರ ಪಾಲಿಕೆಯನ್ನು ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೆರಿಸಲು ತೀರ್ಮಾನಿಸಿರುವುದಕ್ಕೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ಸ್ವಾಗತಿಸಿ, ಸರ್ಕಾರವನ್ನು ಅಭಿನಂದಿಸಿದ್ದಾರೆ. ಈ ಹಿಂದೆ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 4 ಪಟ್ಟಣ ಪಂಚಾಯತ್ ಹಾಗೂ 1 ನಗರಸಭೆಯನ್ನು ಮೇಲ್ದರ್ಜೆ ಗೆರಿಸಲಾಗಿತ್ತು. ಈಗ ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೆರಿಸಲು ಸಚಿವ ಸಂಪುಟ ತೀರ್ಮಾನಿಸಿರುವುದಕ್ಕಾಗಿ ವಿಶೇಷವಾಗಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಎಲ್ಲ ಸಹದ್ಯೋಗಿಗಳಿಗೆ ಅವರು ತುಂಬು ಹೃದಯದ ಅಭಿನಂದನೆ ಸಲ್ಲಿಸಿದ್ದಾರೆ.