ಜಿಲ್ಲಾಸ್ಪತ್ರೆಗೆ ಕಾಯಂ ಶಸ್ತ್ರಚಿಕಿತ್ಸಕರನ್ನು ನೇಮಿಸುವಂತೆರೈತ ಸಂಘ ಮನವಿ

| Published : Jan 26 2025, 01:31 AM IST

ಜಿಲ್ಲಾಸ್ಪತ್ರೆಗೆ ಕಾಯಂ ಶಸ್ತ್ರಚಿಕಿತ್ಸಕರನ್ನು ನೇಮಿಸುವಂತೆರೈತ ಸಂಘ ಮನವಿ
Share this Article
  • FB
  • TW
  • Linkdin
  • Email

ಸಾರಾಂಶ

ಎಸ್‌ಎನ್‌ಆರ್ ಜಿಲ್ಲಾಸ್ಪತ್ರೆಯಲ್ಲಿ ವರ್ಷದ ಹಿಂದೆ ನಿವೃತ್ತಿಯಾದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯ್ ಕುಮಾರ್ ನಂತರ ಕಾಯಂ ಶಸ್ತ್ರಚಿಕಿತ್ಸಕರನ್ನು ನೇಮಕ ಮಾಡದೆ ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಲಾಗದ ಜಿಲ್ಲೆಯ ಜನಪ್ರತಿನಿಧಿಗಳ ನೀತಿಯನ್ನು ಖಂಡಿಸಿ, ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಯ ಬೇಜವಾಬ್ದಾರಿಯಿಂದ ಆಸ್ಪತ್ರೆಯಲ್ಲಿ ರೋಗಿಗಳಿಂದ ಸುಲಿಗೆ ದಂಧೆ ಹೆಚ್ಚಾಗಿದೆ.

ಕೋಲಾರ: ಶ್ರೀ ನರಸಿಂಹರಾಜ ಜಿಲ್ಲಾಸ್ಪತ್ರೆಗೆ ಕಾಯಂ ಶಸ್ತ್ರಚಿಕಿತ್ಸಕರನ್ನು ನೇಮಿಸಿ ಹದಗೆಟ್ಟಿರುವ ವ್ಯವಸ್ಥೆಯನ್ನು ಸರಿಪಡಿಸಿ ಖಾಸಗಿ ಆ್ಯಂಬ್ಯುಲೆನ್ಸ್, ನಕಲಿ ವೈದ್ಯರಿಗೆ ಕಡಿವಾಣ ಹಾಕಲು ವಿಶೇಷ ತಂಡ ರಚನೆ ಮಾಡುವಂತೆ ರೈತಸಂಘದಿಂದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ರಿಗೆ ಮನವಿ ಸಲ್ಲಿಸಲಾಯಿತು.

ಕೋಲಾರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡುವ ಜೊತೆಗೆ ಕೆಜಿಎಫ್ ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿಗಳ ವಿತರಣೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಬಡವರ ಆರೋಗ್ಯದ ಜೊತೆ ಚೆಲ್ಲಾಟವಾಡುವ ಗಡಿಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರು ಮತ್ತು ಸಿಬ್ಬಂದಿ ವಿರುದ್ಧ ಕ್ರಮಕೈಗೊಳ್ಳುವಂತೆ ರೈತಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಸಚಿವರನ್ನು ಒತ್ತಾಯಿಸಿದರು.

ಎಸ್‌ಎನ್‌ಆರ್ ಜಿಲ್ಲಾಸ್ಪತ್ರೆಯಲ್ಲಿ ವರ್ಷದ ಹಿಂದೆ ನಿವೃತ್ತಿಯಾದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯ್ ಕುಮಾರ್ ನಂತರ ಕಾಯಂ ಶಸ್ತ್ರಚಿಕಿತ್ಸಕರನ್ನು ನೇಮಕ ಮಾಡದೆ ಆಸ್ಪತ್ರೆಯ ಅವ್ಯವಸ್ಥೆಯನ್ನು ಸರಿಪಡಿಸಲಾಗದ ಜಿಲ್ಲೆಯ ಜನಪ್ರತಿನಿಧಿಗಳ ನೀತಿಯನ್ನು ಖಂಡಿಸಿ, ಆಸ್ಪತ್ರೆ ವೈದ್ಯರು ಮತ್ತು ಸಿಬ್ಬಂದಿಯ ಬೇಜವಾಬ್ದಾರಿಯಿಂದ ಆಸ್ಪತ್ರೆಯಲ್ಲಿ ರೋಗಿಗಳಿಂದ ಸುಲಿಗೆ ದಂಧೆ ಹೆಚ್ಚಾಗಿದೆ ಎಂದು ಆರೋಪಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಆಸ್ಪತ್ರೆಯ ಅವ್ಯವಸ್ಥೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿ ಕಾಯಂ ಶಸ್ತ್ರಚಿಕಿತ್ಸಕರನ್ನು ನೇಮಕ ಮಾಡುವ ಜೊತೆಗೆ ಹದಗೆಟ್ಟಿರುವ ಗಡಿಭಾಗದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸರಿಪಡಿಸುವ ಭರವಸೆಯನ್ನು ನೀಡಿದರು.

ತಾಲೂಕು ಅಧ್ಯಕ್ಷ ಕದಿರಿನತ್ತ ಅಪ್ಪೋಜಿರಾವ್, ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ತಾ.ಅಧ್ಯಕ್ಷ ಶಿವಾರೆಡ್ಡಿ, ಮಂಗಸಂದ್ರ ತಿಮ್ಮಣ್ಣ, ಸುಪ್ರೀಂ ಚಲ, ಹೆಬ್ಬಣಿ ಆನಂದ್‌ರೆಡ್ಡಿ, ಕದಿರಿನತ್ತ ಲಕ್ಷ್ಮಣ್ ಇದ್ದರು.