ಸಂವಿಧಾನದ ಆಶಯಗಳನ್ನು ಕಾಪಾಡುವುದರಲ್ಲಿ ಅಧಿಕಾರಿಗಳು ಹಾಗೂ ಎಲ್ಲ ಸಾರ್ವಜನಿಕರು ಮುಂದೆ ಬರಬೇಕು ಎಂದು ಆಮ್ ಆದ್ಮಿ ಪಾರ್ಟಿ ತುಮಕೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್. ರಾಮಾಂಜಿನಪ್ಪ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ಪಾವಗಡ

ಸಂವಿಧಾನದ ಆಶಯಗಳನ್ನು ಕಾಪಾಡುವುದರಲ್ಲಿ ಅಧಿಕಾರಿಗಳು ಹಾಗೂ ಎಲ್ಲ ಸಾರ್ವಜನಿಕರು ಮುಂದೆ ಬರಬೇಕು ಎಂದು ಆಮ್ ಆದ್ಮಿ ಪಾರ್ಟಿ ತುಮಕೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್. ರಾಮಾಂಜಿನಪ್ಪ ಕರೆ ನೀಡಿದರು.

ಸಂವಿಧಾನ ದಿನಾಚರಣೆ ಅಂಗವಾಗಿ ಬುಧವಾರ ಪಟ್ಟಣದ ಟೊಲ್ ಗೇಟ್ ನ ಡಾ‌.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆ ಓದಿದ ನಂತರ ಮಾತನಾಡಿದ ಅವರು, ಸಂವಿಧಾನದ ಆಶಯ ಈಡೇರಿಸುವತ್ತ ಸರ್ಕಾರಗಳು ಬದ್ಧತೆ ತೋರಬೇಕು. ಸಮಾನತೆ ಮತ್ತು ಸರ್ಕಾರ ಸೌಲಭ್ಯ ಅರ್ಹರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯನ್ಮುಖರಾಗುವಂತೆ ಅಧಿಕಾರಿ ಹಾಗೂ ಜನಪ್ರತಿನಿಧಿಗಳಿಗೆ ಒತ್ತಾಯಿಸಿದರು.

ಎಎಪಿಯ ತಾಲೂಕು ಅಧ್ಯಕ್ಷ ಆರ್.ತಿಪ್ಪೇಸ್ವಾಮಿ ಮಾತನಾಡಿ, ಸಂವಿಧಾನದ ಕೆಳಗೆ ಇರುವ ನಾವು ಎಲ್ಲರೂ ಸಂವಿಧಾನಕ್ಕೆ ತಲೆಭಾಗಬೇಕು. ಎಲ್ಲರನ್ನು ಗೌರವಿಸಬೇಕು ಜನರ ಹಿತದೃಷ್ಟಿಯಿಂದ ಒಳ್ಳೆ ಕಾರ್ಯಕ್ರಮ ರೂಪಿಸುವಲ್ಲಿ ಸರ್ಕಾರಕ್ಕೆ ಒತ್ತಾಯಿಸಿ ಉತ್ತಮ ಸಮಾಜ ನಿರ್ಮಾಣದಲ್ಲ ಕೈ ಜೋಡಿಸಬೇಕು ಎಂದರು.

ಇದೇ ವೇಳೆ ಮಹಿಳಾ ಘಟಕದ ಅಧ್ಯಕ್ಷೆ ಅಕ್ಕಮ್ಮ, ಹನುಮಂತಪ್ಪ, ಪೆಮ್ಮನಹಳ್ಳ, ಸಣ್ಣಹನುಮಂತರಾಯಪ್ಪ, ಅಂಜನ್, ರವಿ ಬ್ಯಾಡನೂರು, ಈರಪ್ಪ, ಗೋವಿಂದಪ್ಪ, ಶಿವಕುಮಾರ್, ಕೃಷ್ಣ, ವೊಲೆ ನಾಯ್ಕ, ಮತ್ತು ಆಮ್ ಆದ್ಮಿ ಪಾರ್ಟಿಯ ಕಾರ್ಯಕಾರಿ ಸಮಿತಿ ಸದಸ್ಯರು ಹಾಜರಿದ್ದರು.