33 ವರ್ಷಗಳ ನಂತರ ಅಪ್ಪನ ಬದಲು ಮಗನ ಸ್ಪರ್ಧೆ

| Published : Mar 24 2024, 01:36 AM IST

ಸಾರಾಂಶ

ಈ ಕ್ಷೇತ್ರದಿಂದ ಡಾ.ಮಹದೇವಪ್ಪ ಅವರೇ ಕಣಕ್ಕಿಳಿಯಬೇಕು ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್‌ಅವರ ಆಶಯವಾಗಿತ್ತು. ಇಲ್ಲದಿದ್ದರೆ ಮಾಜಿ ಸಂಸದ ದಿ.ಆರ್‌. ಧ್ರುವನಾರಾಯಣ ಅವರ ಪುತ್ರ, ಹಾಲಿ ನಂಜನಗೂಡು ಶಾಸಕ ದರ್ಶನ್‌ಅವರಿಗೆ ಟಿಕೆಟ್‌ನೀಡುವ ಉದ್ದೇಶವಿತ್ತು. ಆದರೆ ದರ್ಶನ್‌ಸ್ಪರ್ಧೆಗೆ ಆಸಕ್ತಿ ತೋರಲಿಲ್ಲ. ಇದಲ್ಲದೇ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಅರ್ಧದಷ್ಟು ಕಡೆ ಕಾಂಗ್ರೆಸ್‌ಸಚಿವರು, ಶಾಸಕರ ಸಂಬಂಧಿಕರಿಗೆ ಟಿಕೆಟ್‌ನೀಡಿದೆ. ಹೀಗಾಗಿ ಇಲ್ಲಿ ಕೂಡ ತಮ್ಮ ಪುತ್ರನಿಗೆ ಟಿಕೆಟ್‌ನೀಡಬೇಕು ಎಂದು ಮಹದೇವಪ್ಪ ಪಟ್ಟು ಹಿಡಿದಿದ್ದರು. ಕೊನೆಗೆ ಸಫಲರಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಮೈಸೂರು

ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕೊನೆಗೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರ ಪುತ್ರ ಸುನಿಲ್‌ಬೋಸ್‌ಗೆ ಕಾಂಗ್ರೆಸ್‌ ಟಿಕೆಟ್‌ ನೀಡಲಾಗಿದೆ. ಅಧಿಕೃತ ಪ್ರಕಟಣೆಯಷ್ಟೇ ಬಾಕಿ ಇದೆ.

ಕಾಂಗ್ರೆಸ್‌ ಟಿಕೆಟ್‌ಗೆ ಕೊಳ್ಳೇಗಾಲ ಕ್ಷೇತ್ರದ ಮಾಜಿ ಶಾಸಕ ಜಿ.ಎನ್‌. ನಂಜುಂಡಸ್ವಾಮಿ ಅವರ ಪ್ರಬಲ ಪೈಪೋಟಿ ಒಡ್ಡಿದ್ದರು. ನಂಜುಂಡಸ್ವಾಮಿ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಟ್ಟಾ ಬೆಂಬಲಿಗರು.

ಈ ಕ್ಷೇತ್ರದಿಂದ ಡಾ.ಮಹದೇವಪ್ಪ ಅವರೇ ಕಣಕ್ಕಿಳಿಯಬೇಕು ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್‌ಅವರ ಆಶಯವಾಗಿತ್ತು. ಇಲ್ಲದಿದ್ದರೆ ಮಾಜಿ ಸಂಸದ ದಿ.ಆರ್‌. ಧ್ರುವನಾರಾಯಣ ಅವರ ಪುತ್ರ, ಹಾಲಿ ನಂಜನಗೂಡು ಶಾಸಕ ದರ್ಶನ್‌ಅವರಿಗೆ ಟಿಕೆಟ್‌ನೀಡುವ ಉದ್ದೇಶವಿತ್ತು. ಆದರೆ ದರ್ಶನ್‌ಸ್ಪರ್ಧೆಗೆ ಆಸಕ್ತಿ ತೋರಲಿಲ್ಲ. ಇದಲ್ಲದೇ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಅರ್ಧದಷ್ಟು ಕಡೆ ಕಾಂಗ್ರೆಸ್‌ಸಚಿವರು, ಶಾಸಕರ ಸಂಬಂಧಿಕರಿಗೆ ಟಿಕೆಟ್‌ನೀಡಿದೆ. ಹೀಗಾಗಿ ಇಲ್ಲಿ ಕೂಡ ತಮ್ಮ ಪುತ್ರನಿಗೆ ಟಿಕೆಟ್‌ನೀಡಬೇಕು ಎಂದು ಮಹದೇವಪ್ಪ ಪಟ್ಟು ಹಿಡಿದಿದ್ದರು. ಕೊನೆಗೆ ಸಫಲರಾಗಿದ್ದಾರೆ.

1991 ರಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಮಹದೇವಪ್ಪ ಜನತಾದಳ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ಇದೀಗ 33 ವರ್ಷಗಳ ನಂತರ ಅವರ ಪುತ್ರ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಸುನಿಲ್‌ಬೋಸ್‌ಪರಿಚಯ

ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರ ಹಿರಿಯ ಪುತ್ರರಾದ ಸುನಿಲ್‌ಬೋಸ್‌ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಿರಿಯ ಪುತ್ರ ರಾಕೇಶ್‌ಅವರ ಪರಮಾಪ್ತ ಸ್ನೇಹಿತರು. ಇಬ್ಬರು ಕ್ರಮವಾಗಿ ಟಿ. ನರಸೀಪುರ ಹಾಗೂ ವರುಣ ಕ್ಷೇತ್ರದಲ್ಲಿ ತಂದೆಯವರ ಪರ ಪ್ರಚಾರ ಮಾಡುತ್ತಿದ್ದರಲ್ಲದೇ ಅಭಿವೃದ್ಧಿ ಕಾರ್ಯಗಳ ಉಸ್ತುವಾರಿ ನೋಡಿಕೊಳ್ಳುತ್ತಿದ್ದರು. ರಾಕೇಶ್‌ಅವರನ್ನು ತಮ್ಮ ಉತ್ತರಾಧಿಕಾರಿ ಮಾಡಬೇಕು ಎಂದು ಸಿದ್ದರಾಮಯ್ಯ ಕೂಡ ಬಯಸಿದ್ದರು. ಆದರೆ ಅವರು ನಿಧನರಾದರು. ಹೀಗಾಗಿ ಕಿರಿಯ ಪುತ್ರ ಡಾ.ಎಸ್. ಯತೀಂದ್ರ 2018 ರಲ್ಲಿ ವರುಣ ಕ್ಷೇತ್ರದ ಶಾಸಕರಾದರು.

ಆದರೆ ಸುನಿಲ್‌ಬೋಸ್‌ಗೆ ಟಿಕೆಟ್‌ಸಿಗಲಿಲ್ಲ. ಸುನಿಲ್‌2017ರ ಏಪ್ರಿಲ್‌ನಲ್ಲಿ ನಡೆದ ನಂಜನಗೂಡು ವಿಧಾನಸಭಾ ಕ್ಷೇತ್ರದ ಟಿಕೆಟ್‌ಗೆ ಯತ್ನಿಸಿದ್ದರು. ಆದರೆ ಟಿಕೆಟ್‌ಜೆಡಿಎಸ್‌ನಿಂದ ಬಂದ ಕಳಲೆ ಕೇಶವಮೂರ್ತಿ ಅವರ ಪಾಲಾಗಿತ್ತು. 2023ರ ಚುನಾವಣೆಯಲ್ಲಿ ಮಹದೇವಪ್ಪ ಅವರು ನಂಜನಗೂಡಿನಿಂದ, ಸುನಿಲ್‌ಬೋಸ್‌ನಂಜನಗೂಡಿನಿಂದ ಟಿಕೆಟ್‌ಬಯಸಿದ್ದರು. ನಂಜನಗೂಡಿನ ಟಿಕೆಟ್‌ಆಕಾಂಕ್ಷಿಯಾಗಿದ್ದ ಆರ್. ಧ್ರುವನಾರಾಯಣ ನಿಧನರಾಗಿದ್ದರಿಂದ ಅವರ ಪುತ್ರ ದರ್ಶನ್‌ಗೆ ಟಿಕೆಟ್‌ನೀಡಲಾಯಿತು. ಇದರಿಂದ ಮಹದೇವಪ್ಪ ಅನಿವಾರ್ಯವಾಗಿ ಟಿ. ನರಸೀಪುರದಿಂದಲೇ ಸ್ಪರ್ಧಿಸಬೇಕಾಯಿತು. ಸುನಿಲ್‌ಕ್ಷೇತ್ರವಿಲ್ಲದೇ ನಿರಾಶರಾಗಿದ್ದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ಅಧಿಕಾರಕ್ಕೆ ಬಂದ ನಂತರ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಸುನಿಲ್‌ಬಯಸಿದ್ದರು. ಕೆಲವರು ಅಡ್ಡಗಾಲು ಹಾಕಿದರೂ ಅಂತಿಮವಾಗಿ ಟಿಕೆಟ್‌ಗಿಟ್ಟಿಸಿದ್ದಾರೆ.