ಸಾರಾಂಶ
ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಪರಿಹರಿಸಲು ಗದಗ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಡಿಸೆಂಬರ್ 27ರಿಂದ 29ರ ವರೆಗೆ ಕ್ಯಾಂಪ್‍ಗಳನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ಕ್ಯಾಂಪ್‍ಗಳನ್ನು ಆಯೋಜಿಸಲಾಗುವುದು.
ಗದಗ: ಗೃಹಲಕ್ಷ್ಮೀ ಯೋಜನೆಗೆ ಈಗಾಗಲೇ ಚಾಲನೆ ದೊರೆತಿದೆ. ಈ ಪ್ರಕ್ರಿಯೆಯಲ್ಲಿ 2.5 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡದೇ ಇರುವುದು ಮತ್ತು ಸುಮಾರು 70,000 ನಿಷ್ಕ್ರಿಯ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡಿರುವುದು ಕಂಡುಬಂದಿದೆ. ಈ ಫಲಾನುಭವಿಗಳು ಹೊಸ ಬ್ಯಾಂಕ್ ಖಾತೆ ತೆರೆಯಲು ಇಚ್ಛಿಸಿರುವುದು ಕಂಡು ಬಂದಿದೆ. ಬಹಳಷ್ಟು ಫಲಾನುಭವಿಗಳು ನೇರ ನಗದು ವರ್ಗಾವಣೆ ಪ್ರಕ್ರಿಯೆಯನ್ನು ಸುಗಮಗೊಳಿಸಲು ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡಬೇಕಾಗಿದೆ.
ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಪರಿಹರಿಸಲು ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಡಿಸೆಂಬರ್ 27ರಿಂದ 29ರ ವರೆಗೆ ಕ್ಯಾಂಪ್‍ಗಳನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ಕ್ಯಾಂಪ್‍ಗಳನ್ನು ಆಯೋಜಿಸಲಾಗುವುದು. ಯೋಜನೆಗೆ ಸಂಬಂಧಿಸಿದ ಎಲ್ಲ ತಾಂತ್ರಿಕ ಮತ್ತು ಬ್ಯಾಂಕ್ ಸಂಬಂಧಿಸಿದ ಸಮಸ್ಯೆಗಳನ್ನು ಈ ಕ್ಯಾಂಪ್‍ಗಳಲ್ಲಿ ಪರಿಹರಿಸಲಾಗುವುದು. ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಗಣಕ ಯಂತ್ರ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು ಮತ್ತು ಎಲೆಕ್ಟ್ರಾನಿಕ್ಸ್ ಡಿಲೆವರಿ ಆಫ್ ಸಿಟಿಝನ್ ಸರ್ವಿಸಸ್ (ಇಸಿಡಿಎಸ್)ತಂಡಗಳು, ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್‍ನ ಪ್ರತಿನಿಧಿಗಳು ಮತ್ತು ಇತರೆ ಬ್ಯಾಂಕ್ ಪ್ರತಿನಿಧಿಗಳು ಈ ಕ್ಯಾಂಪ್‍ಗಳಲ್ಲಿ ಭಾಗವಹಿಸುವರು. ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳು ಹಾಗೂ ತೊಂದರೆಗಳಿದ್ದಲ್ಲಿ ಕೂಡಲೇ ತಮ್ಮ ವ್ಯಾಪ್ತಿಯಲ್ಲಿರುವ ಗ್ರಾ.ಪಂ. ಮಟ್ಟದಲ್ಲಿನ ಶಿಬಿರ (ಕ್ಯಾಂಪ್) ಗಳಿಗೆ ಅಗತ್ಯ ದಾಖಲಾತಿಗಳೊಂದಿಗೆ ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಗದಗ ಜಿಪಂ ಪ್ರಭಾರ ಸಿಇಓ ವೈಶಾಲಿ ಎಂ.ಎಲ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.