ಪ್ರಜಾಪ್ರಭುತ್ವ ದೇಶದಲ್ಲಿ ಮತದಾರರೇ ಪ್ರಭುಗಳು: ಡಾ.ಎಂ.ಎಸ್. ಪಾಟೀಲ

| Published : Jan 26 2024, 01:46 AM IST

ಪ್ರಜಾಪ್ರಭುತ್ವ ದೇಶದಲ್ಲಿ ಮತದಾರರೇ ಪ್ರಭುಗಳು: ಡಾ.ಎಂ.ಎಸ್. ಪಾಟೀಲ
Share this Article
  • FB
  • TW
  • Linkdin
  • Email

ಸಾರಾಂಶ

ಗುಳೇದಗುಡ್ಡ: ಇಲ್ಲಿನ ಭಂಡಾರಿ ಮತ್ತು ರಾಠಿ ಮಹಾವಿದ್ಯಾಲಯದಲ್ಲಿ ಜರುಗಿದ ರಾಷ್ಟ್ರೀಯ ಮತದಾರರ ದಿನಾಚರಣೆ ಹಾಗೂ ಭಾರತೀಯ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರದ ಅಧ್ಯಕ್ಷತೆ ವಹಿಸಿ ಮಾತನಾಡಿ ಡಾ.ಎಂ.ಎಸ್. ಪಾಟೀಲ, ಪ್ರಜಾಪ್ರಭುತ್ವ ದೇಶದಲ್ಲಿ ಪ್ರಜೆಗಳ ಮತದಾನಕ್ಕೆ ಮಹತ್ವದ ಸ್ಥಾನವಿದೆ. ದೇಶದ ಅಭಿವೃದ್ಧಿ ಮತ್ತು ಕಲ್ಯಾಣದ ಹಿದೃಷ್ಟಿಯಿಂದ ಮತದಾರರು ರಾಷ್ಟ್ರದ ಆಸ್ತಿಯಾಗಿದ್ದಾರೆಂದು ಹೇಳಿದರು.

ಕನ್ನಡಪ್ರಭವಾರ್ತೆ ಗುಳೇದಗುಡ್ಡ

ಪ್ರಜಾಪ್ರಭುತ್ವ ದೇಶದಲ್ಲಿ ಪ್ರಜೆಗಳ ಮತದಾನಕ್ಕೆ ಮಹತ್ವದ ಸ್ಥಾನವಿದೆ. ದೇಶದ ಅಭಿವೃದ್ಧಿ ಮತ್ತು ಕಲ್ಯಾಣದ ಹಿದೃಷ್ಟಿಯಿಂದ ಮತದಾರರು ರಾಷ್ಟ್ರದ ಆಸ್ತಿಯಾಗಿದ್ದಾರೆಂದು ಡಾ.ಎಂ.ಎಸ್. ಪಾಟೀಲ ಹೇಳಿದರು.

ಗುರುವಾರ ಇಲ್ಲಿನ ಭಂಡಾರಿ ಮತ್ತು ರಾಠಿ ಮಹಾವಿದ್ಯಾಲಯದಲ್ಲಿ ಜರುಗಿದ ರಾಷ್ಟ್ರೀಯ ಮತದಾರರ ದಿನಾಚರಣೆ ಹಾಗೂ ಭಾರತೀಯ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆ ಇರುವ ಭಾರತದಂತಹ ದೇಶಗಳಲ್ಲಿ ಮತದಾರರೇ ಪ್ರಭುಗಳು. ದೇಶದ ಅಭಿವೃದ್ಧಿ ದೃಷ್ಟಿಯಿಂದ ಯುವಮತದಾರರು ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಿ ಕಳಿಸಲು ಮತದಾನ ಮಾಡಬೇಕಾಗುತ್ತದೆ. ಹೀಗಾಗಿ ರಾಷ್ಟ್ರದ ಆಸ್ತಿ ಯುವಕರಾಗಿದ್ದಾರೆ. ದೇಶ ಹಾಗೂ ನಮ್ಮ ಹಿತ ಗಮನದಲ್ಲಿಟ್ಟುಕೊಂಡು ಯೋಗ್ಯ ಜನಪ್ರತಿನಿಧಿಗಳಿಗೆ ಮತ ಹಾಕಬೇಕು. ಯಾವುದೇ ಆಸೆ, ಆಕಾಂಕ್ಷೆ, ಜಾತಿ, ಮತ, ಧರ್ಮ, ಭಾಷೆ ಇವುಗಳ ವ್ಯಾಮೋಹಕ್ಕೆ ಒಳಗಾಗದೆ ಒಳಗಾಗಿದೆ ದೇಶದ ಹಿತದೃಷ್ಟಿಯಿಂದ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಹೇಳಿದರು. ಹಾಗೂ ಪ್ರವಾಸೋದ್ಯಮದ ಕುರಿತು ಮಾತನಾಡಿದರು.

ಸಭೆಯಲ್ಲಿ ವಿದ್ಯಾರ್ಥಿಗಳು ಹಾಗೂ ಗಣ್ಯರು ಪ್ರತಿಜ್ಞಾವಿಧಿ ಸ್ವೀಕರಿಸಿದರು. ಡಾ.ಎಸ್.ಎಸ್. ಯಂಡಿಗೇರಿ, ಪಿಯುಸಿ ವಿಭಾಗದ ಪ್ರಾಚಾರ್ಯೆ ದೊಡ್ಡಮನಿ, ಜಿ.ಐ. ಮುಲ್ಲಾ. ಡಾ.ಐ.ಜೆ. ಬೆಳನ್ನವರ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕ ಪ್ರೊ.ಎಂ.ಎಂ. ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ.ಬಸವರಾಜ ಚವಡಿ ಸ್ವಾಗತಿಸಿದರು. ಶಿವಕುಮಾರ ಮುಂಡಾಸದ ನಿರೂಪಿಸಿದರು. ಗಾಯತ್ರಿ ಕಲ್ಯಾಣಿ ಪ್ರತಿಜ್ಞಾವಿಧಿ ಬೋಧಿಸಿ ವಂದಿಸಿದರು.