ಸಾರಾಂಶ
ಮೈಸೂರಿನ ರೈಲು ನಿಲ್ದಾಣದ ಮುಂಭಾಗದ ವೃತ್ತದಲ್ಲಿರುವ ಡಾ. ಬಾಬು ಜಗಜೀವನ ರಾಂ ಅವರ ಪ್ರತಿಮೆ
ಕನ್ನಡಪ್ರಭ ವಾರ್ತೆ ಮೈಸೂರು
ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ 38ನೇ ಪುಣ್ಯತಿಥಿಯ ಅಂಗವಾಗಿ ಮೈಸೂರಿನ ರೈಲು ನಿಲ್ದಾಣದ ಮುಂಭಾಗದ ವೃತ್ತದಲ್ಲಿರುವ ಡಾ. ಬಾಬು ಜಗಜೀವನ ರಾಂ ಅವರ ಪ್ರತಿಮೆಗೆ ಜಿಲ್ಲಾಡಳಿತದಿಂದ ಶನಿವಾರ ಮಾಲಾರ್ಪಣೆ, ಪುಷ್ಪಾರ್ಚನೆ ನೆರವೇರಿಸಲಾಯಿತು.ಈ ವೇಳೆ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಕೆ.ಎಂ. ಗಾಯಿತ್ರಿ, ನಗರ ಪಾಲಿಕೆ ಆಯುಕ್ತ ಆಶಾದ್ ಉರ್ ರೆಹಮಾನ್ ಷರೀಫ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಂಗೇಗೌಡ, ಡಿಸಿಪಿ ಎಸ್. ಜಾಹ್ನವಿ, ರಾಜ್ಯ ಮುಕ್ತ ವಿವಿ ಕುಲಸಚಿವ ಪ್ರೊ.ಕೆ.ಬಿ. ಪ್ರವೀಣ್, ಡೀನ್ ಡಾ. ಲಕ್ಷ್ಮಿ ಮೊದಲಾದವರು ಇದ್ದರು.