ತಂಬಾಕು ಬಳಕೆ ಆರೋಗ್ಯಕ್ಕೆ ಹಾನಿಕರ

| Published : Jun 02 2024, 01:45 AM IST

ಸಾರಾಂಶ

ಧೂಮಪಾನ ಸೇವನೆ ಆರೋಗ್ಯಕ್ಕೆ ಹಾನಿಕರ ಎಂಬುದಾಗಿ ತಿಳಿದಿದ್ದರೂ ಸಹ ಇಂತಹ ದುಶ್ಚಟಗಳಿಗೆ ಯುವ ಜನತೆ ದಾಸರಾಗಿ ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುವುದಲ್ಲದೆ ಪರಿಸರವನ್ನು ಸಹ ಹಾಳು ಮಾಡುತ್ತಿದ್ದಾರೆ

ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ

ತಂಬಾಕು ಉತ್ಪನ್ನಗಳ ಸೇವನೆಯಿಂದ ದೂರಸರಿದಾಗ ಮಾತ್ರ ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂದು ಜೆಎಂಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶ ಜೆ.ರಂಗಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.

ಪಟ್ಟಣದ ಎಕ್ಸ್‌ಪರ್ಟ್‌ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಆರೋಗ್ಯ ಇಲಾಖೆ, ಕಾರ್ಮಿಕ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ವಿಶ್ವ ತಂಬಾಕು ನಿಷೇಧ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಆರೋಗ್ಯಕ್ಕೆ ಅಪಾಯಕಾರಿ

ಇತ್ತೀಚಿನ ದಿನಗಳಲ್ಲಿ ಯುವ ಜನತೆ ತಂಬಾಕು ಸೇವನೆ, ಮದ್ಯಪಾನ ಇತ್ಯಾದಿ ದುಶ್ಚಟಗಳಿಗೆ ದಾಸರಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದ ಅವರು ಸಿಗರೇಟ್, ಬೀಡಿ, ಮದ್ಯಪಾನ ಇತ್ಯಾಧಿ ಮಾದಕ ಪದಾರ್ಥಗಳನ್ನು ಸೇವನೆ ಮಾಡುವುದರಿಂದ ಆರೋಗ್ಯ ಹಾಳಾಗಿ ಚಿಕ್ಕ ವಯಸಿನಲ್ಲಿಯೇ ಸಾವೀಗಿಡಾಗುತ್ತಿದ್ದಾರೆ ಎಂದರು.

ಧೂಮಪಾನ ಸೇವನೆ ಆರೋಗ್ಯಕ್ಕೆ ಹಾನಿಕರ ಎಂಬುದಾಗಿ ತಿಳಿದಿದ್ದರೂ ಸಹ ಇಂತಹ ದುಶ್ಚಟಗಳಿಗೆ ಯುವ ಜನತೆ ದಾಸರಾಗಿ ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುವುದಲ್ಲದೆ ಪರಿಸರವನ್ನು ಸಹ ಹಾಳು ಮಾಡುತ್ತಿದ್ದಾರೆ ಎಂದರು.

ಜನಜಾಗೃತಿ ಮೂಡಿಸಿ

ತಂಬಾಕು ಉತ್ಪನ್ನಗಳ ಸೇವನೆಗಳನ್ನು ತ್ಯೆಜಿಸಿದಾಗ ಮಾತ್ರ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ. ಅಲ್ಲದೆ ತಂಬಾಕು, ಮದ್ಯಪಾನ ಇತ್ಯಾಧಿ ದುಶ್ಚಟಗಳ ವಿರುದ್ಧ ಜನಜಾಗೃತಿ ಮೂಡಿಸುವಂತಹ ಕೆಲಸಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕೆಂದರು.

ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಸತ್ಯನಾರಾಯಣರೆಡ್ಡಿ, ವಕೀಲರ ಸಂಘದ ಅಧ್ಯಕ್ಷ ಎ.ನಂಜುಂಡ, ಉಪಾಧ್ಯಕ್ಷ ರಾಮಾಂಜಿ, ಕಾರ್ಯದರ್ಶಿ ಪ್ರಸನ್ನಕುಮಾರ್, ಖಜಾಂಚಿ ಮಂಜುನಾಥ್, ಹಿರಿಯ ವಕೀಲರಾದ ಫಯಾಜ್ ಬಾಷಾ, ವೆಂಕಟೇಶ್,ವೆಂಕಟನಾರಾಯಣ ಮತ್ತಿತರರು ಇದ್ದರು.