ಸಾರಾಂಶ
Today october 23 village administrative officer direct recruitment test meeting
ಯಾದಗಿರಿ: ಪರೀಕ್ಷೆಗಳ ಪರೀಕ್ಷಾ ಕಾರ್ಯನಿರತ ಅಧಿಕಾರಿಗಳ ಸಭೆಯು ಜಿಲ್ಲಾಧಿಕಾರಿ ಡಾ. ಬಿ. ಸುಶೀಲಾ ಅವರ ಅಧ್ಯಕ್ಷತೆಯಲ್ಲಿ ಅ.23 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶಕರು ಚನ್ನಬಸಪ್ಪ ಕುಳಗೇರಿ ಅವರು ತಿಳಿಸಿದ್ದಾರೆ. ಬೆಂಗಳೂರು ಕರ್ನಾಟಕ ಪರೀಕ್ಷಾ ಪ್ರಾಧಿಕಾರ 2024ರ ಅ.26 ರಿಂದ 27ರ ವರೆಗೆ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ನೇರ ನೇಮಕಾತಿ ಪರೀಕ್ಷೆ ನಡೆಸಲಾಗುತ್ತಿದ್ದು, ಈ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ನೇರ ನೇಮಕಾತಿ 2024ರ ಪರೀಕ್ಷೆಯನ್ನು ಅ.26 ರಿಂದ 27ರ ವರೆಗೆ 21 ಪರೀಕ್ಷೆ ಕೇಂದ್ರಗಳಲ್ಲಿ ಬೆಳಿಗ್ಗೆ 10 ರಿಂದ 12.30 ಗಂಟೆಯ ವರೆಗೆ ಹಾಗೂ ಮಧ್ಯಾಹ್ನ 2.30 ರಿಂದ ಸಂಜೆ 4.30 ಗಂಟೆಯ ವರೆಗೆ ನಡೆಸಲ್ಪಡುತ್ತದೆ ಎಂದು ಅವರು ತಿಳಿಸಿದ್ದಾರೆ.
-----