ಸಾರಾಂಶ
ಯಾದಗಿರಿ: ಕೆ. ಹೊಸಳ್ಳಿ ಗ್ರಾಮಮ ಸಾಹಿತಿ ಡಾ. ವಿ.ಎಸ್. ಹಿರೇಮಠ ಅವರಿಗೆ ಬೆಂಗಳೂರಿನ ಪ್ರತಿಷ್ಠಿತ ಡೈಮಂಡ್ ಶಿಕ್ಷಣ ಸಂಸ್ಥೆ 2025ನೇ ಸಾಲಿನ ಶಿಕ್ಷಣ ಕುಸುಮ ಪ್ರಶಸ್ತಿ ನೀಡಿ ಗೌರವಿಸಲಿದೆ. ಫೆ.1 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಡೈಮಂಡ್ ಉತ್ಸವದಲ್ಲಿ ವಿಶ್ರಾಂತ ಲೋಕಾಯುಕ್ತ ಸಂತೋಷ ಹೆಗಡೆ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಬೆಂಗಳೂರಿನ ಮಿರಾಂಡಾ ಶಿಕ್ಷಣ ಮಹಾವಿದ್ಯಾಲಯದ ಪ್ರಾಧ್ಯಾಪಕ ಹಾಗೂ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಸಹ ಕಾರ್ಯದರ್ಶಿ ಡಾ.ವಿ.ಎಸ್.ಹಿರೇಮಠ ಅವರ ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಡೈಮಂಡ್ ಸಂಸ್ಥೆ 2025ನೇ ಸಾಲಿನ ಶಿಕ್ಷಣ ಕುಸುಮ ಪ್ರಶಸ್ತಿ ನೀಡಿ ಗೌರವಿಸಲಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಪ್ರೊ.ಅನಿಲ ಕುಮಾರ ಎನ್. ಜೋಷಿ ತಿಳಿಸಿದ್ದಾರೆ. ಡಾ.ವಿ.ಎಸ್. ಹಿರೇಮಠ ಅವರಿಗೆ ಈ ಪ್ರಶಸ್ತಿ ದೊರೆತಿರುವುದಕ್ಕೆ ಸರ್ಕಾರಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಸುಭಾಶ್ಚಂದ್ರ ಕೌಲಗಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ ಹಾಗೂ ಎಲ್ಲಾ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
------ಫೆ.4ರಂದು ಜಿಲ್ಲಾ ಮಟ್ಟದ ಸಿರಿಧಾನ್ಯ, ಸಾವಯವ ಹಬ್ಬ
ಯಾದಗಿರಿ:ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಹಬ್ಬ ಆಯೋಜಿಸಲಾಗಿದೆ ಎಂದು ಯಾದಗಿರಿ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯುವ ಹಬ್ಬದ ಅಂಗವಾಗಿ 2025ರ ಫೆ.4 ರಂದು ಮಂಗಳವಾರ ರೋಡ್ ಶೋ ಅನ್ನು ಬಸ್ ನಿಲ್ದಾಣದಿಂದ ಲಾಲ ಬಹಾದ್ದೂರ್ ಶಾಸ್ತ್ರಿ ವೃತ್ತ, ನೇತಾಜಿ ಸುಭಾಶ್ಚಂದ್ರ ಭೋಸ್ ವೃತ್ತದ ಮೂಲಕ ಯಾದಗಿರಿ ಸರ್ಕಾರಿ ಪದವಿ ಮಹಾವಿದ್ಯಾಲಯ ವರೆಗೆ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.---
ನೇರ ಪೋನ್‌ಇನ್ ಕಾರ್ಯಕ್ರಮಯಾದಗಿರಿ: ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಂಟಾಗುವ ಸಾರಿಗೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಪ್ರತಿ ತಿಂಗಳು ಮೊದಲನೆಯ ಸೋಮವಾರ ದಂದು ನೇರ ಫೋನ್ ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಯಾದಗಿರಿ ವಿಭಾಗ ವಿಭಾಗೀಯ ನಿಯಂತ್ರಣಾಧಿಕಾರಿ ಸುನೀಲಕುಮಾರ ಚಂದರಗಿ ತಿಳಿಸಿದ್ದಾರೆ. ಸಾರ್ವಜನಿಕರಿಗೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಂಟಾಗುವ ಸಾರಿಗೆ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಪ್ರತಿ ತಿಂಗಳು ಮೊದಲನೆಯ ಸೋಮವಾರ ನೇರ ಫೋನ್ ಇನ್ ಕಾರ್ಯಕ್ರಮ ಆಯೋಜಿಸಲು ವ್ಯವಸ್ಥಾಪಕ ನಿರ್ದೇಶಕರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೇಂದ್ರ ಕಚೇರಿ ಕಲಬುರಗಿ ಅವರ ಸೂಚನೆ ಅನ್ವಯ ಯಾದಗಿರಿ ಜಿಲ್ಲೆಯ ಸಾರ್ವಜನಿಕರಿಗೆ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಇರುವ ಸಾರಿಗೆ ಸಮಸ್ಯೆಗಳ ಕುರಿತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಯಾದಗಿರಿ ವಿಭಾಗದಿಂದ 2025ರ ಫೆಬ್ರವರಿ 3ರ ಸೋಮವಾರ ಮಧ್ಯಾಹ್ನ 3.30 ರಿಂದ ಸಂಜೆ 5.30 ರವರೆಗೆ ನೇರ ಫೋನ್ ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು, ವಿದ್ಯಾರ್ಥಿಗಳು ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ದೂರವಾಣಿ ಸಂಖ್ಯೆ 6366423882ಗೆ ಕರೆ ಮಾಡಿ ತಮ್ಮ ಸಾರಿಗೆ ವ್ಯವಸ್ಥೆ ಕುರಿತು ಇರುವ ಸಮಸ್ಯೆಗಳನ್ನು ತಿಳಿಸಿ ಪರಿಹಾರ ಕಂಡುಕೊಳ್ಳಬೇಕು. ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಯಾದಗಿರಿ ವಿಭಾಗ ಅವರು ಜಿಲ್ಲೆಯ ಸಾರಿಗೆ ಸಮಸ್ಯೆಗಳ ಕುರಿತು ಸಾರ್ವಜನಿಕರೊಂದಿಗೆ ನೇರವಾಗಿ ಮಾತನಾಡಲ್ಲಿದ್ದಾರೆ.