ಸಾರಾಂಶ
ಮತಕ್ಷೇತ್ರದಲ್ಲಿನ ಪದವೀಧರ ಯುವಕ ಹಾಗೂ ಯುವತಿಯರಿಗೆ ಉದ್ಯೋಗ ಒದಗಿಸುವ ಉದ್ದೇಶದಿಂದ ಶ್ರೀದೇವಿಕಾ ಸುಬ್ಬರಾವ ಫೌಂಡೇಶನ್ ನೇತೃತ್ವದಲ್ಲಿ ಫೆ.೧೭ ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೪ ಗಂಟೆಯವರಿಗೆ ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ದೇವಿಕಾ ಸುಬ್ಬರಾವ್ ಫೌಂಡೇಷನ್ ಮುಖ್ಯಸ್ಥೆ ಪಲ್ಲವಿ ನಾಡಗೌಡ ಮಾಹಿತಿ ನೀಡಿದರು.
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ
ಮತಕ್ಷೇತ್ರದಲ್ಲಿನ ಪದವೀಧರ ಯುವಕ ಹಾಗೂ ಯುವತಿಯರಿಗೆ ಉದ್ಯೋಗ ಒದಗಿಸುವ ಉದ್ದೇಶದಿಂದ ಶ್ರೀದೇವಿಕಾ ಸುಬ್ಬರಾವ ಫೌಂಡೇಶನ್ ನೇತೃತ್ವದಲ್ಲಿ ಫೆ.೧೭ ರಂದು ಬೆಳಿಗ್ಗೆ ೯ ಗಂಟೆಯಿಂದ ಸಂಜೆ ೪ ಗಂಟೆಯವರಿಗೆ ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ದೇವಿಕಾ ಸುಬ್ಬರಾವ್ ಫೌಂಡೇಷನ್ ಮುಖ್ಯಸ್ಥೆ ಪಲ್ಲವಿ ನಾಡಗೌಡ ಮಾಹಿತಿ ನೀಡಿದರು.ಶುಕ್ರವಾರ ಪಟ್ಟಣದ ವಿಬಿಸಿ ಹೈಸ್ಕೂಲ್ ಆವರಣದಲ್ಲಿ ನಡೆಯಲಿರುವ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮ ವೇದಿಕೆ ಸ್ಥಳ ಪರಿಶೀಲಿಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಪೂರ್ವದಲ್ಲಿ ಮತಕ್ಷೇತ್ರದಲ್ಲಿರುವ ಯುವಕ-ಯುವತಿಯರಿಗೆ ಉದ್ಯೋಗ ಒದಗಿಸುವ ಭರಸವೆ ನೀಡಲಾಗಿತ್ತು. ಅದರಂತೆ ನಮ್ಮ ತಂದೆಯವರ ಕನಸು ನನಸು ಮಾಡಲು ನಮ್ಮ ತಂದೆ ಅವರಾದ ಶಾಸಕ ಹಾಗೂ ಕರ್ನಾಟಕ ಸಾಬೂನ್ ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷ ಸಿ ಎಸ್ ನಾಡಗೌಡ(ಅಪ್ಪಾಜಿ) ಅವರ ನಮ್ಮ ಮತಕ್ಷೇತ್ರದ ಯುವಕರಿಗೆ ಉದ್ಯೋಗ ಒದಗಿಸಬೇಕು ಎಂಬ ಸಾಮಾಜಿ ಕಳಕಳಿಯ ಜವಾಬ್ದಾರಿ ಹೊತ್ತು ಅವರ ಮಾರ್ಗದರ್ಶನ ಹಾಗೂ ಸಲಹೆ ಸೂಚನೆ ಆಶೀರ್ವಾದದೊಂದಿಗೆ ನಮ್ಮ ಶ್ರೀ ದೇವಿಕಾ ಸುಬ್ಬರಾವ್ ಫೌಂಡೇಷನ್ ಸಂಸ್ಥೆಯಿಂದ ಬ್ರಹತ್ ಉದ್ಯೋಗ ಮೇಳೆ ಆಯೋಜಿಸಲಾಗಿದೆ. ಇದರ ಸದುಪಯೋಗವನ್ನು ಯುವ ಸಮುದಾಯ ಪಡೆದುಕೊಳ್ಳಬೇಕು ಎಂದು ಹೇಳಿದರು.