ಇಂದು ಗುರು ಶಿಷ್ಯರ ಸಮ್ಮಿಲನ, ಸ್ನೇಹ ಸಂಗಮ

| Published : Jan 19 2025, 02:15 AM IST

ಸಾರಾಂಶ

ಸುಂಟಿಕೊಪ್ಪ ಜಿಎಂಪಿ ಸರ್ಕಾರಿ ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜು ಹಳೆ ವಿದ್ಯಾರ್ಥಿಗಳ ಸಂಘಟನೆ ವತಿಯಿಂದ ಗುರು ಶಿಷ್ಯರ ಸಮ್ಮಿಲನ ಮತ್ತು ಸ್ನೇಹ ಸಂಗಮ ಕಾರ್ಯಕ್ರಮ ಜ.19ರಂದು ಶಾಲಾ ಮೈದಾನದಲ್ಲಿ ನಡೆಯಲಿದೆ.

ಸುಂಟಿಕೊಪ್ಪ: ಜಿಎಂಪಿ ಸರ್ಕಾರಿ ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜು ಹಳೆ ವಿದ್ಯಾರ್ಥಿಗಳ ಸಂಘಟನೆ ವತಿಯಿಂದ ಗುರು ಶಿಷ್ಯರ ಸಮ್ಮಿಲನ ಮತ್ತು ಸ್ನೇಹ ಸಂಗಮ ಕಾರ್ಯಕ್ರಮ ಜ.19ರಂದು ಶಾಲಾ ಮೈದಾನದಲ್ಲಿ ನಡೆಯಲಿದೆ.ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ವೈ.ಶಿವರಾಮಯ್ಯ ಧ್ವಜಾರೋಹಣ ಮಾಡುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಲಿದೆ. ನಂತರ ವಿದ್ಯೆ ಕಲಿಸಿದ ಹಿರಿಯ ಗುರುಗಳನ್ನು ವಿವಿಧ ಸಾಂಸ್ಕೃತಿಕ ಕಲಾ ತಂಡಗಳ ಮೂಲಕ ಮೆರವಣಿಗೆಯಲ್ಲಿ ಸಭಾ ಕಾರ್ಯಕ್ರಮಕ್ಕೆ ಕರೆತರಲಾಗುವುದು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಹಳೆ ವಿದ್ಯಾರ್ಥಿ, ಹಾಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಂ.ಜಿ.ಸುಕುರೆ ಕುಮಾರ್ ವಹಿಸಲಿದ್ದಾರೆ.ಸಂಜೆ ಸಮಾರೋಪ ಸಭೆ ನಡೆಯಲಿದ್ದು, ಶಾಲೆಯ ಹಳೆ ವಿದ್ಯಾರ್ಥಿ, ಬೆಂಗಳೂರು ಬಿಬಿಎಂಪಿಯ ಸಹಾಯಕ ಆಯುಕ್ತರಾದ ಪಿ.ಎಸ್.ಮಹೇಶ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಶಾಲೆಗೆ ಸ್ಥಳದಾನ ಮಾಡಿದ, ಶಾಲಾ ಕೊಠಡಿಗಳನ್ನು ಕಟ್ಟಿಸಿಕೊಟ್ಟ ದಾನಿಗಳಾದ ಮಾಜಿ ಶಾಸಕ ಕೆ.ಎಂ.ಇಬ್ರಾಹಿಂ, ಬೆಟ್ಟಗೇರಿ ಸಮೂಹ ತೋಟಗಳ ಮಾಲಕ ಡಿ.ವಿನೋದ್ ಶಿವಪ್ಪ, ಪನ್ಯ ತೋಟದ ಮಾಲಕ ಆನಂದ್ ಬಸಪ್ಪ, ಜವರಯ್ಯ, ಪಾಂಡಂಡ ಕುಟುಂಬದ ಹಿರಿಯರು ಮತ್ತು ಪಟ್ಟೆಮನೆ ಕುಟುಂಬಸ್ಥರನ್ನು ಸನ್ಮಾನಿಸಲಾಗುತ್ತದೆ ಪ್ರಕಟಣೆ ತಿಳಿಸಿದೆ.ಚಿತ್ರ.2: ಗುರು ಶಿಷ್ಯರ ಸಮ್ಮಿಲನ ಮತ್ತು ಸ್ನೇಹ ಸಂಗಮ ಕಾರ್ಯಕ್ರಮಕ್ಕೆ ಸಜ್ಜುಗೊಳ್ಳುತ್ತಿರುವ ವೇದಿಕೆ.