ಇಂದು ಮಾದಕ ವ್ಯಸನ ವಿರೋಧಿ ದಿನಾಚರಣೆ

| Published : Jun 27 2024, 01:16 AM IST

ಸಾರಾಂಶ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಮನೋವೈದ್ಯಕೀಯ ವಿಭಾಗ, ಚಿಗಟೇರಿ ಜಿಲ್ಲಾ ಆಸ್ಪತ್ರೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾರಾಗೃಹ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾ ಕಾರಾಗೃಹ ಸಭಾಂಗಣದಲ್ಲಿ ಜೂ.27 ರಂದು "ಸಾಕ್ಷಗಳು ಸ್ಪಷ್ಟವಾಗಿದೆ, ತಡೆಗಟ್ಟುವಲ್ಲಿ ಹೂಡಿಕೆ ಮಾಡಿ " ಘೋಷವಾಕ್ಯದೊಂದಿಗೆ ಅಂತರ ರಾಷ್ಟ್ರೀಯ ಮಾದಕ ವ್ಯಸನ ಹಾಗೂ ಅನಧಿಕೃತ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ "ಯನ್ನು ಆಯೋಜಿಸಲಾಗಿದೆ.

ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಮನೋವೈದ್ಯಕೀಯ ವಿಭಾಗ, ಚಿಗಟೇರಿ ಜಿಲ್ಲಾ ಆಸ್ಪತ್ರೆ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಕಾರಾಗೃಹ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾ ಕಾರಾಗೃಹ ಸಭಾಂಗಣದಲ್ಲಿ ಜೂ.27 ರಂದು "ಸಾಕ್ಷಗಳು ಸ್ಪಷ್ಟವಾಗಿದೆ, ತಡೆಗಟ್ಟುವಲ್ಲಿ ಹೂಡಿಕೆ ಮಾಡಿ " ಘೋಷವಾಕ್ಯದೊಂದಿಗೆ ಅಂತರ ರಾಷ್ಟ್ರೀಯ ಮಾದಕ ವ್ಯಸನ ಹಾಗೂ ಅನಧಿಕೃತ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ "ಯನ್ನು ಆಯೋಜಿಸಲಾಗಿದೆ. ಅಂದು ಬೆಳಗ್ಗೆ 9.30 ಗಂಟೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಕಾರಾಗೃಹ ಅಧೀಕ್ಷಕರಾದ ಕರ್ಣ ಬಿ. ಕ್ಷತ್ರಿಯ ಅಧ್ಯಕ್ಷತೆ ವಹಿಸುವರು. ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ. ಕರೆಣ್ಣವರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಷಣ್ಮುಖಪ್ಪ, ಡಾ.ಮಂಜುನಾಥ ಎಲ್. ಪಾಟೀಲ್ ಪಾಲ್ಗೊಳ್ಳುವರು. ಜಿಲ್ಲಾ ಮನೋವೈದ್ಯ ಡಾ. ಪಿ.ಎಂ. ಮರುಳಸಿದ್ದಪ್ಪ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸುವರು ಎಂದು ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಮಂಜುನಾಥ ಎಲ್. ಪಾಟೀಲ್ ತಿಳಿಸಿದ್ದಾರೆ.