ಸಾರಾಂಶ
ಸ್ಪೀಕರ್ ಯು.ಟಿ.ಖಾದರ್ ಉದ್ಘಾಟಿಸಲಿದ್ದಾರೆ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮತ್ತಿತರರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಆಶಾ ಕಾರ್ಯಕರ್ತರಿಗೆ, ಪೌರ ಕಾರ್ಮಿಕರಿಗೆ ಗೌರವಾರ್ಪಣೆ, ಪುಸ್ತಕ ವಿತರಣೆ ನಡೆಯಲಿದೆ.
ಕನ್ನಡಪ್ರಭ ವಾರ್ತೆ ಬಂಟ್ವಾಳ
ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ, ವಿಟ್ಲ ಸಿಟಿ ಲಯನ್ಸ್ ಕ್ಲಬ್, ಜೆಸಿಐ, ರೋಟರಿ ಕ್ಲಬ್, ಜಮಾತೆ ಇಸ್ಲಾಮಿ ಹಿಂದ್, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ, ದ.ಕ. ಗ್ಯಾರೇಜ್ ಮಾಲಕರ ಸಂಘ ವಿಟ್ಲ ವಲಯ, ನ್ಯೂ ಶೈನ್ ಮ್ಯೂಸಿಕಲ್ಸ್ ಆಶ್ರಯದಲ್ಲಿ ಏ.20ರಂದು ವಿಟ್ಲ ವಿಠಲ ಪ.ಪೂ. ಕಾಲೇಜಿನ ಸುವರ್ಣ ರಂಗ ಮಂದಿರದಲ್ಲಿ ಜಿಲ್ಲಾಮಟ್ಟದ 18ನೇ ವರ್ಷದ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ, ಸಾಧಕರಿಗೆ ಸನ್ಮಾನ, ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದು ಬಿ.ಕೆ.ಸೇಸಪ್ಪ ಬೆದ್ರಕಾಡು ತಿಳಿಸಿದರು.ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸ್ಪೀಕರ್ ಯು.ಟಿ.ಖಾದರ್ ಉದ್ಘಾಟಿಸಲಿದ್ದಾರೆ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮತ್ತಿತರರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಆಶಾ ಕಾರ್ಯಕರ್ತರಿಗೆ, ಪೌರ ಕಾರ್ಮಿಕರಿಗೆ ಗೌರವಾರ್ಪಣೆ, ಪುಸ್ತಕ ವಿತರಣೆ ನಡೆಯಲಿದೆ ಎಂದು ಹೇಳಿದರು.ಕಾರ್ಯಾಧ್ಯಕ್ಷ ಚಂದ್ರಶೇಖರ ಯು., ಉಪಾಧ್ಯಕ್ಷ ಪ್ರಸಾದ್ ಬೊಳ್ಮಾರು, ಮಹಿಳಾ ಘಟಕಾಧ್ಯಕ್ಷೆ ವಿಮಲಾ ಮುಳಿಯ, ಸದಸ್ಯ ಕಾರ್ತಿಕ್ ಉಪಸ್ಥಿತರಿದ್ದರು.