ಇಂದು ಡಾ.ರಾಜಕುಮಾರ ಜನ್ಮ ದಿನ ಆಚರಣೆ

| Published : Apr 23 2025, 12:34 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಏ.24 ರಂದು ಡಾ.ರಾಜಕುಮಾರ ಅವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.

ಕನ್ನಡಪ್ರಭ ವಾರ್ತೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಏ.24 ರಂದು ಡಾ.ರಾಜಕುಮಾರ ಅವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ.

ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈ ಕುರಿತು ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು. ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಚರಿಸಲು ನಿರ್ಣಯಿಸಲಾಗಿದ್ದು, ಜನ್ಮದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.

ಕಾರ್ಯಕ್ರಮ ಸಿದ್ದತೆ

ಡಾ.ರಾಜಕುಮಾರ 97ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ರವಿಕುಮಾರ.ಎನ್, ಪರಿಷತ್ತಿನ ಶಾಸಕರಾದ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ, ಕೆಎಸ್‌ಡಿಎಲ್‌ ಅಧ್ಯಕ್ಷ ಹಾಗೂ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ ಹಾಗೂ ಡಾ.ಸುಧಾ ಮೂರ್ತಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ವಿಠ್ಠಲ ಕಟಕಧೋಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ ಹಾಗೂ ಕೇಶವ ಪ್ರಸಾದ.ಎಸ್, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ, ಧಾರವಾಡ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನಾನ್ ಮುಶ್ರೀಪ್ ಭಾಗವಹಿಸಲಿದ್ದಾರೆ.

ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಪಂ ಸಿಇಒ ರಿಷಿ ಆನಂದ ಹಾಗೂ ಎಸ್ಪಿ ಲಕ್ಷ್ಮಣ ನಿಂಬರಗಿ ಉಪಸ್ಥಿತರಿರಲಿದ್ದಾರೆ. ಜಿಲ್ಲೆಯ ಸಾರ್ವಜನಿಕರು, ವಿವಿಧ ಸಂಘಟನೆಯ ಪದಾಧಿಕಾರಿಗಳು ಹಾಗೂ ಎಲ್ಲ ಸಮಾಜದ ಗಣ್ಯರು ಭಾಗವಹಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಮನವಿ ಮಾಡಿದ್ದಾರೆ.