ಸಾರಾಂಶ
ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್‌ರವರ 118 ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಏ. 5 ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 9.30 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಿಂದ ಡಾ. ಬಾಬು ಜಗಜೀವನ್ ರಾಮ್ ರವರ ಭಾವಚಿತ್ರದ ಮೆರವಣಿಗೆ ಹೊರಡಲಿದೆ. ಮಧ್ಯಾಹ್ನ 12.30 ಕ್ಕೆ ನಗರದ ಸರ್ಕಾರಿ ಪೇಟೆ ಪ್ರೈಮರಿ ಶಾಲೆ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸುವರು. ಸಂಸದ ಸುನೀಲ್ ಬೋಸ್ ಘನ ಉಪಸ್ಥಿತಿ ವಹಿಸುವರು. ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು ಜಿ. ಮಾದೇಗೌಡ, ಕೆ. ವಿವೇಕಾನಂದ, ಕಾವೇರಿ ಜಲಾನಯನ ಅಚ್ಚುಕಟ್ಟು ಪ್ರದೇಶಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಪಿ. ಮರಿಸ್ವಾಮಿ, ನಗರಸಭೆ ಅಧ್ಯಕ್ಷ ಎಸ್. ಸುರೇಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ವಿ. ಚಂದ್ರು, ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮದ್ ಅಸ್ಗರ್, ನಗರಸಭೆ ಉಪಾಧ್ಯಕ್ಷೆ ಮಮತ, ಸದಸ್ಯರಾದ ಎಂ. ಕಲಾವತಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಭೋಗಾಪುರ ಸರ್ಕಾರಿ ಪ್ರಥಮ ದರ್ಜೆ ವಸತಿ ಕಾಲೇಜಿನ ಪ್ರಾಂಶುಪಾಲ ಡಾ. ಪಿ. ದೇವರಾಜು ಅವರು ಮುಖ್ಯ ಭಾಷಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.