ಸಾರಾಂಶ
ದಾವಣಗೆರೆ: ಹಿರಿಯ ಮುತ್ಸದ್ಧಿ ರಾಜಕಾರಣಿ ಎಸ್.ಎ.ರವೀಂದ್ರನಾಥ ಅವರ ಜನ್ಮದಿನವನ್ನು ನ.26 ರಂದು ಹಬ್ಬದೋಪಾದಿಯಲ್ಲಿ ಆಚರಿಸಲು ಸ್ವಯಂಪ್ರೇರಿತರಾಗಿ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಆಗಮಿಸಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮನವಿ ಮಾಡಿದರು.
ದಾವಣಗೆರೆ: ಹಿರಿಯ ಮುತ್ಸದ್ಧಿ ರಾಜಕಾರಣಿ ಎಸ್.ಎ.ರವೀಂದ್ರನಾಥ ಅವರ ಜನ್ಮದಿನವನ್ನು ನ.26 ರಂದು ಹಬ್ಬದೋಪಾದಿಯಲ್ಲಿ ಆಚರಿಸಲು ಸ್ವಯಂಪ್ರೇರಿತರಾಗಿ ಪಕ್ಷದ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಆಗಮಿಸಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮನವಿ ಮಾಡಿದರು.ಎಸ್.ಎ.ರವೀಂದ್ರನಾಥ್ ಅವರ ಜನ್ಮದಿನದ ಪ್ರಯುಕ್ತ ಶಿರಮಗೊಂಡನಹಳ್ಳಿಯ ಎಸ್.ಎ.ರವೀಂದ್ರನಾಥ್ ಅವರ ನಿವಾಸದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಪಕ್ಷದ ಮುಖಂಡರುಗಳ ಪೂರ್ವ ಭಾವಿ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಯನ್ನು ಬೇರು ಮಟ್ಟದಿಂದ ಸಂಘಟಿಸಿ ಇಂದು ಪಕ್ಷವು ಜಿಲ್ಲೆಯಲ್ಲಿ ಹೆಮ್ಮರವಾಗಿ ಬೆಳೆಯಲು ಅವರ ಶ್ರಮ ಅಪಾರವಾಗಿದೆ ಎಂದರು.
ಎಸ್.ಎ.ರವೀಂದ್ರನಾಥ್ ಅವರ ಹುಟ್ಟುಹಬ್ಬವನ್ನು ಸುಧಾ ವೀರೇಂದ್ರ ಪಾಟೀಲ್ ಸಮುದಾಯ ಭವನದಲ್ಲಿ ನ.26ರ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಆಯೋಜಿಸಲಾಗಿದ್ದು, ಪಕ್ಷದ ಮುಖಂಡರುಗಳು, ಕಾರ್ಯಕರ್ತರುಗಳು ಅಭಿಮಾನ ಪೂರ್ವಕವಾಗಿ ತಮ್ಮ ಕುಟುಂಬದ ಕಾರ್ಯಕ್ರಮದಂತೆ ಭಾವಿಸಿ ಸ್ವಯಂ-ಪ್ರೇರಿತವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ವಿನಂತಿಸಿದರು.ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದು, ಎಲ್ಲರನ್ನೂ ಮುಕ್ತವಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸುವ ಮೂಲಕ ವಿಜೃಂಭಣೆಯಿಂದ ಅವರ ಜನ್ಮದಿನವನ್ನು ಆಚರಿಸಬೇಕು ಎಂದರು.ಸಭೆಯಲ್ಲಿ ಮಾಜಿ ಸಚಿವ ಎಸ್.ಎ.ರವೀಂದ್ರನಾಥ್, ಮಾಜಿ ಶಾಸಕರಾದ ಬಸವರಾಜ್ ನಾಯ್ಕ್, ಬಿಜೆಪಿ ಜಿಲ್ಲಾಧ್ಯಕ್ಷ ರಾಜೇಶ್, ಮಾಜಿ ಮೇಯರ್ ಅಜಯ್ ಕುಮಾರ್, ಮುಖ್ಯ ಸಚೇತಕರಾದ ಕಲ್ಲೇಶ್, ಸೋಮೇಶ್ವರ ಶಾಲೆಯ ಮಾಲೀಕರಾದ ಸುರೇಶ್, ಮುಖಂಡರುಗಳಾದ ಮಾಡಾಳ್ ಮಲ್ಲಿಕಾರ್ಜುನ್, ಚಂದ್ರಶೇಖರ್ ಪೂಜಾರ್ ಮತ್ತಿತರರು ಉಪಸ್ಥಿತರಿದ್ದರು.