ಸಾರಾಂಶ
ಕನ್ನಡಪ್ರಭ ವಾರ್ತೆ ವಿಜಯಪುರ
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 16ನೇ ಘಟಿಕೋತ್ಸವನ್ನು ಜನೇವರಿ 9ರಂದು 12.30ಕ್ಕೆ ವಿವಿಯ ಜ್ಞಾನಶಕ್ತಿ ಆವರಣದ ಕ್ರೀಡಾ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಿವಿ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ತಿಳಿಸಿದರು.ವಿವಿಯ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲ ಮತ್ತು ಮಹಿಳಾ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾಗಿರುವ ಥಾವರ್ ಚಂದ್ ಗೆಹ್ಲೋಟ್ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ನವದೆಹಲಿಯ ರಾಷ್ಟ್ರೀಯ ಶೈಕ್ಷಣಿಕ ಯೋಜನೆ ಮತ್ತು ಆಡಳಿತ ಸಂಸ್ಥೆಯ ಕುಲಪತಿ ಪ್ರೊ.ಶಶಿಕಲಾ ವಂಜಾರಿ ಅವರು ಭಾಗವಹಿಸಿ ಘಟಿಕೋತ್ಸವ ಭಾಷಣ ಮಾಡಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಉಪಸ್ಥಿತರಿರುವರು ಎಂದರು.
*ಮೂವರಿಗೆ ಗೌರವ ಡಾಕ್ಟರೇಟ್ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಮೂವರು ಮಹನೀಯರಿಗೆ ಈ ಭಾರಿಯ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೆಟ್ ಪದವಿ ಪ್ರದಾನ ಮಾಡಲಾಗುವುದು. ಕಲಾಕ್ಷೇತ್ರದ ಸಾಧನೆಗಾಗಿ ಶಿಗ್ಗಾವಿಯ ಗೋಟಗೋಡಿಯ ರಾಕ್‌ಗಾರ್ಡನ್ ವೇದರಾಣಿ ದಾಸನೂರು, ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಕಲಬುರಗಿಯ ವಿಶ್ರಾಂತ ಪ್ರಾಧ್ಯಾಪಕಿ ಡಾ.ಮೀನಾಕ್ಷಿ ಬಾಳಿ ಮತ್ತು ಸಿನಿಮಾ ಕ್ಷೇತ್ರದ ಸಾಧನೆಗಾಗಿ ಬೆಂಗಳೂರಿನ ಖ್ಯಾತ ಚಲನಚಿತ್ರ ನಟಿ ತಾರಾ ಅವರಿಗೆ ಗೌರವ ಡಾಕ್ಟರೆಟ್ ನೀಡಲಾಗಿದೆ. ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಅವರು ಈ ಮೂವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡುವರು ಎಂದು ಮಾಹಿತಿ ನೀಡಿದರು.
ಚಿನ್ನದ ಪದಕಗಳ ಸಾಧನೆ:ಕರಾಅಮವಿವಿಯ ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ಗರಿಷ್ಠ ಅಂಕಗಳನ್ನು ಗಳಿಸಿ ತೇರ್ಗಡೆಯಾದ ಒಟ್ಟು 63 ವಿದ್ಯಾರ್ಥಿನಿಯರಿಗೆ 80 ಚಿನ್ನದ ಪದಕಗಳನ್ನು ಪ್ರದಾನ ಮಾಡಲಾಗುತ್ತಿದೆ. ಒಟ್ಟು 13,461 ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿನಿಯರು ಪದವಿ ಪಡೆಯಲು ಅರ್ಹರಾಗಿದ್ದಾರೆ. ಒಟ್ಟು 34 ವಿದ್ಯಾರ್ಥಿನಿಯರಿಗೆ ಪಿಎಚ್.ಡಿ ಪದವಿ ಪ್ರದಾನ ಮಾಡಲಾಗುವುದು. ಒಟ್ಟು 1,106 ವಿದ್ಯಾರ್ಥಿನಿಯರಿಗೆ ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ನೀಡಲಾಗುವುದು ಎಂದರು. ವಿಷಯವಾರು ಪದವೀಧರರು
ಎಂ.ಎ.- 365, ಎಂ.ಕಾಂ.- 296, ಎಂ.ಬಿ.ಎ.- 49, ಎಂ.ಎಸ್.ಸಿ.- 304, ಎಂ.ಈಡಿ- 9, ಎಂ.ಪಿ.ಈಡಿ- 9, ಎಂ.ಎಸ್.ಡಬ್ಲೂ- 20, ಎಂ.ಸಿ.ಎ.- 40 ಮತ್ತು ಎಂ.ಎಫ್.ಎA.- 14 ವಿದ್ಯಾರ್ಥಿನಿಯರು ಪದವಿಗೆ ಅರ್ಹರಾಗಿದ್ದಾರೆ. ಒಟ್ಟು 12,350 ವಿದ್ಯಾರ್ಥಿನಿಯರಿಗೆ ಸ್ನಾತಕ ಪದವಿ ಪ್ರದಾನ ಮಾಡಲಾಗುವದು. ಇದರಲ್ಲಿ ಬಿ.ಎ.– 5387, ಬಿ.ಎಸ್.ಡಬ್ಲೂ- 36, ಬಿ.ಈಡಿ -1663, ಬಿ.ಪಿ.ಈಡಿ - 15, ಬಿ.ಕಾಂ - 3536, ಬಿಬಿಎ - 122, ಬಿ.ಎಸ್.ಸಿ- 1413, ಬಿ.ಸಿ.ಎ-115, ಬಿ.ಎಫ್.ಟಿ- 63 ಮತ್ತು ಬಿ.ಎಫ್‌ಎಡಿ- 05 ವಿದ್ಯಾರ್ಥಿನಿಯರು ಸ್ನಾತಕ ಪದವಿ ಪಡೆಯಲು ಅರ್ಹರಾಗಿದ್ದಾರೆ.ಘಟಿಕೋತ್ಸವಕ್ಕೆ ಭರದ ಸಿದ್ಧತೆಮಹಿಳಾ ವಿಶ್ವವಿದ್ಯಾನಿಲಯದ 16ನೇ ಘಟಿಕೋತ್ಸವವನ್ನು ಯಶಸ್ವಿಯಾಗಿ ಸಂಘಟಿಸಲು ಈಗಾಗಲೇ ಹಲವಾರು ಸಮಿತಿಗಳನ್ನು ರಚಿಸಲಾಗಿದ್ದು, ಭರದಿಂದ ಸಿದ್ಧತೆಗಳು ನಡೆದಿವೆ. ಸುದ್ದಿಗೋಷ್ಠಿಯಲ್ಲಿ ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಂ.ಚಂದ್ರಶೇಖರ್, ಘಟಿಕೋತ್ಸವ ಸಂಯೋಜನಾಧಿಕಾರಿ ಪ್ರೊ.ಸಕ್ಪಾಲ್ ಹೂವಣ್ಣ, ಮಾಧ್ಯಮ ಸಮಿತಿ ಅಧ್ಯಕ್ಷ ಪ್ರೊ.ಓಂಕಾರ ಕಾಕಡೆ, ಮತ್ತಿತರರು ಉಪಸ್ಥಿತರಿದ್ದರು.