ಇಂದು 71ನೇ ಅಖಿಲ ಭಾರತ ಸಹಕಾರ ಸಪ್ತಾಹ

| Published : Nov 15 2024, 12:40 AM IST

ಸಾರಾಂಶ

Today is the 71st All India Cooperative Week

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಬೆಂಗಳೂರಿನ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ನಿಯಮಿತ, ಕರ್ನಾಟಕ ರಾಜ್ಯ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿ, ಕರ್ನಾಟಕ ರಾಜ್ಯ ಸಹಕಾರ ಕುಕ್ಕುಟ ಮಹಾಮಂಡಳಿ, ಕರ್ನಾಟಕ ರಾಜ್ಯ ನೂಲಿನ ಗಿರಣಿಗಳ ಮಹಾಮಂಡಳಿ, ಚಿತ್ರದುರ್ಗ ಜಿಲ್ಲಾ ನೂಲಿನ ಗಿರಣಿಗಳ ಮಹಾಮಂಡಳಿ, ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರ ಹಾಲು ಒಕ್ಕೂಟ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಹಾಗೂ ಜಿಲ್ಲೆಯ ಎಲ್ಲಾ ರೀತಿಯ ಸಹಕಾರಿ ಸಂಸ್ಥೆಗಳು, ಬ್ಯಾಂಕ್‌ಗಳು, ಸೌಹಾರ್ದ ಸಹಕಾರಿಗಳು ಮತ್ತು ಸಹಕಾರ ಇಲಾಖೆ ಸಹಯೋಗದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ನಗರದ ಶ್ರೀರಾಮ ಕಲ್ಯಾಣ ಮಂಟಪದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಹಕಾರ ಸಚಿವ ಕೆ.ಎನ್.ರಾಜಣ್ಣ ಕಾರ್ಯಕ್ರಮ ಉದ್ಘಾಟಿಸುವರು. ಯೋಜನೆ ಮತ್ತು ಸಾಂಖ್ಯಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಡಿ.ಸುಧಾಕರ್ ಸಹಕಾರ ಧ್ವಜಾರೋಹಣ ಮಾಡಲಿದ್ದಾರೆ. ಸಂಸದ ಗೋವಿಂದ. ಎಂ. ಕಾರಜೋಳ ವಸ್ತು ಪ್ರದರ್ಶನ ಉದ್ಘಾಟಿಸುವರು. ಶಾಸಕರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳಿ ಅಧ್ಯಕ್ಷ ಜಿ.ಟಿ.ದೇವೇಗೌಡ ಸಹಕಾರ ವಾರ ಪತ್ರಿಕೆ ವಿಶೇಷ ಸಂಚಿಕೆ ಬಿಡುಗಡೆ ಮಾಡುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು.

ಕಾರ್ಯಕ್ರಮದಲ್ಲಿ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕ ಅಭಿವೃದ್ಧಿ ನಿಗಮದ ಅಧ್ಯಕ್ಷ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚoದ್ರಪ್ಪ ಹಾಗೂ ವಿಧಾನ ಪರಿಷತ್ ಸದಸ್ಯ ಚಿದಾನಂದ. ಎಂ. ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿ ಅಧ್ಯಕ್ಷ ವೆಂಕಟರಾವ್ ನಾಡಗೌಡ ಸೇರಿದಂತೆ ಸಹಕಾರ ಮಂಡಳಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಆಡಳಿತ ಮಂಡಳಿ ಸದಸ್ಯರು, ವಿವಿಧ ಮಹಾಮಂಡಳಿಗಳು. ಜಿಲ್ಲಾ ಒಕ್ಕೂಟಗಳು ಮತ್ತು ಎಲ್ಲಾ ಸಹಕಾರ ಸಂಘ-ಸಂಸ್ಥೆಗಳು ಹಾಗೂ ಸಹಕಾರ ಇಲಾಖೆ ಅಧಿಕಾರಿ, ಸಿಬ್ಬಂದಿ ಇದ್ದರು.