ಇಂದು ಡಾ.ಬಾಲಗಂಗಾಧರನಾಥ ಸ್ವಾಮೀಜಿ ಸಂಸ್ಮರಣೋತ್ಸವ

| Published : Jan 18 2024, 02:05 AM IST

ಸಾರಾಂಶ

ರಾಮನಗರ: ಬಿಜಿಎಸ್ ಸೇವಾ ಸಮಿತಿ ವತಿಯಿಂದ ಜ.18ರಂದು ಬಿಡದಿಯಲ್ಲಿ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ 11ನೇ ವರ್ಷದ ಸಂಸ್ಮರಣಾ ಮಹೋತ್ಸವ ಹಾಗೂ 79ನೇ ಜಯಂತ್ಯುತ್ಸವ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಸಿ.ಉಮೇಶ್ ತಿಳಿಸಿದರು.

ರಾಮನಗರ: ಬಿಜಿಎಸ್ ಸೇವಾ ಸಮಿತಿ ವತಿಯಿಂದ ಜ.18ರಂದು ಬಿಡದಿಯಲ್ಲಿ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ 11ನೇ ವರ್ಷದ ಸಂಸ್ಮರಣಾ ಮಹೋತ್ಸವ ಹಾಗೂ 79ನೇ ಜಯಂತ್ಯುತ್ಸವ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಸಿ.ಉಮೇಶ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುಂಚನಗಿರಿ ಮಠ ರಾಮನಗರ ಶಾಖೆಯ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಬಿಜಿಎಸ್ ವೃತ್ತದಲ್ಲಿರುವ ಪೂಜ್ಯ ಶ್ರೀಗಳ ಪುತ್ಥಳಿಗೆ ವಿಶೇಷ ಪೂಜೆ, ಮಹಾ ಮಂಗಳಾರತಿ ನೆರವೇರಿಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್, ಶಾಸಕ ಎಚ್ .ಸಿ.ಬಾಲಕೃಷ್ಣ, ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಂ.ಲಿಂಗಪ್ಪ, ಮಾಜಿ ಶಾಸಕ ಎ.ಮಂಜುನಾಥ್, ಕೆಎಂಎಫ್ ಮಾಜಿ ಅಧ್ಯಕ್ಷ ಪಿ.ನಾಗರಾಜು, ಬಿಜೆಪಿ ಮುಖಂಡ ಪ್ರಸಾದ್ ಗೌಡ, ಕಾಂಗ್ರೆಸ್ ಮುಖಂಡ ಎಲ್.ಚಂದ್ರಶೇಖರ್ ಸೇರಿದಂತೆ ಅನೇಕ ರಾಜಕಾರಣಿಗಳು, ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಬಾನಂದೂರು ಗ್ರಾಮದ ಮುಖಂಡರು, ಪುರಸಭಾ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು, ಬಿಡದಿ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷರು, ನಿರ್ದೇಶಕರು, ಬಿಡದಿ ರೋಟರಿ ಸೆಂಟ್ರಲ್ ಪದಾಧಿಕಾರಿಗಳು, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪುರಸಭೆ, ಪೊಲೀಸ್ ಇಲಾಖೆ, ಬೆಸ್ಕಾಂ ಅಧಿಕಾರಿಗಳು, ಸಮಾಜ ಸೇವಕರು ಹಾಗೂ ಬಿಜಿಎಸ್ ಭಕ್ತರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದು ತಿಳಿಸಿದರು.

ರೋಟರಿ ಬಿಡದಿ ಸೆಂಟ್ರಲ್ ಸಹಯೋಗದೊಂದಿಗೆ ರಕ್ತದಾನ ಶಿಬಿರ ಏರ್ಪಡಿಸಿದ್ದು, ಆಸಕ್ತರು ರಕ್ತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಸಮಾರಂಭದಲ್ಲಿ ಪಾಲ್ಗೊಳ್ಳುವ ಸಹಸ್ರಾರು ಭಕ್ತರಿಗೆ ಅನ್ನದಾಸೋಹ ಏರ್ಪಡಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಬಿ.ಎಂ.ರಾಜಶೇಖರ್, ಖಜಾಂಚಿ, ನರಸಿಂಹಯ್ಯ, ನಿರ್ದೇಶಕರಾದ ಸಿ.ಮಂಜುನಾಥ್, ಬಿ.ಸಿ.ಶಿವಲಿಂಗಯ್ಯ, ಬಿ.ಸುರೇಶ್ ಬಾಬು, ಬಿ.ಎನ್.ಪ್ರಸನ್ನ, ಶ್ರೀನಿವಾಸ್ ಇತರರಿದ್ದರು.

ಬಾಕ್ಸ್ ................

ನಲ್ಲಿಗುಡ್ಡೆ ಕೆರೆಯಲ್ಲಿ ಶ್ರೀಗಳ ಪುತ್ಥಳಿ ಸ್ಥಾಪನೆ

ಚುಂಚನಗಿರಿ ಮಠಾಧೀಶರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು ಬಿಡದಿಯ ಬಿಜಿಎಸ್ ವೃತ್ತದಲ್ಲಿ ಈಗಿರುವ ಶ್ರೀಗಳ ಪ್ರತಿಮೆ ಜಾಗದಲ್ಲಿ ಪುತ್ಥಳಿ ಸ್ಥಾಪಿಸಲು ಚಿಂತನೆ ನಡೆಸಿದ್ದರೆ, ಬಿಡದಿ ಸಮೀಪದ ನಲ್ಲಿಗುಡ್ಡೆ ಕೆರೆಯನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸಿ ಅಲ್ಲಿ ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗಳ ಪುತ್ಥಳಿ ಸ್ಥಾಪಿಸಲು ಶಾಸಕ ಎಚ್.ಸಿ.ಬಾಲಕೃಷ್ಣರವರು ಕಾರ್ಯೋನ್ಮುಖರಾಗಿದ್ದಾರೆ. ಇದಕ್ಕೆ ಬೇಕಾದ ಅಗತ್ಯ ಸಿದ್ಧತೆಗಳು ನಡೆದಿವೆ ಎಂದು ಸಿ.ಉಮೇಶ್ ಸುದ್ದಿಗಾರರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

17ಕೆಆರ್ ಎಂಎನ್ 1.ಜೆಪಿಜಿ

ಬಿಜಿಎಸ್ ಸೇವಾ ಸಮಿತಿ ಅಧ್ಯಕ್ಷ ಸಿ.ಉಮೇಶ್ ಹಾಗೂ ಪದಾಧಿಕಾರಿಗಳು ಸುದ್ದಿಗೋಷ್ಠಿಯಲ್ಲಿ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದರು.