ಸಾರಾಂಶ
ಸವದತ್ತಿ: ಸುಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ಮಾ.7ರಂದು ಬೆಳಗ್ಗೆ 10.30ಕ್ಕೆ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ರೇಣುಕಾ ಯಲ್ಲಮ್ಮಾ ದೇವಸ್ಥಾನದ ಅಭಿವೃದ್ಧಿಗಾಗಿ ಕೇಂದ್ರ ಪುರಸ್ಕೃತ ಪ್ರಸಾದ ಯೋಜನೆಯಡಿ ಮಂಜೂರಾದ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭ ನಡೆಯಲಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವರ್ಚುವಲ್ ಮುಖಾಂತರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಕೇಂದ್ರ ಪ್ರವಾಸೋದ್ಯಮ ಸಚಿವ ಜಿ.ಕಿಶನ್ ರೆಡ್ಡಿ, ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಆಗಮಿಸಲಿದ್ದು, ಶಾಸಕ ವಿಶ್ವಾಸ ವೈದ್ಯ ಅಧ್ಯಕ್ಷತೆ ವಹಿಸಲಿದ್ದಾರೆ.