ಕರ್ನಾಟಕ ಲೋಕಸೇವಾ ಆಯೋಗವು ನ. ೧೫ರಂದು ಗೆಜೆಟೆಡ್ ಪ್ರೊಬೆಷನರ್ ಗ್ರೂಪ್ ''ಎ'' ಮತ್ತು ''ಬಿ'' ವೃಂದದ ಒಟ್ಟು ೩೧೯ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆ ಜಿಲ್ಲೆಯ ಕೇಂದ್ರಗಳಲ್ಲಿ ನಡೆಯಲಿದ್ದು ೬,೩೧೬ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಧಾರವಾಡ:

ಕರ್ನಾಟಕ ಲೋಕಸೇವಾ ಆಯೋಗವು ನ. ೧೫ರಂದು ಗೆಜೆಟೆಡ್ ಪ್ರೊಬೆಷನರ್ ಗ್ರೂಪ್ ''''ಎ'''' ಮತ್ತು ''''ಬಿ'''' ವೃಂದದ ಒಟ್ಟು ೩೧೯ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆ ಜಿಲ್ಲೆಯ ಕೇಂದ್ರಗಳಲ್ಲಿ ನಡೆಯಲಿದ್ದು ೬,೩೧೬ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್., ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರೀಕ್ಷೆಯು ಎರಡು ಅಧಿವೇಶನಗಳಲ್ಲಿ ನಡೆಯಲಿದ್ದು ಮೊದಲನೇ ಅಧಿವೇಶನದ ಪತ್ರಿಕೆ-೧ ಬೆಳಗ್ಗೆ ೧೦ರಿಂದ ಮಧ್ಯಾಹ್ನ ೧೨ರ ವರೆಗೆ ಹಾಗೂ ಎರಡನೇ ಅಧಿವೇಶನದ ಪತ್ರಿಕೆ-೨ ಪರೀಕ್ಷೆಯು ಮಧ್ಯಾಹ್ನ ೨ರಿಂದ ಸಂಜೆ ೪ರ ವರೆಗೆ ನಡೆಯಲಿದೆ. ಪರೀಕ್ಷೆಗಳು ಸುಗಮ ಮತ್ತು ಯಶಸ್ವಿಯಾಗಿ ನಡೆಯಲು ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಒಟ್ಟು ೧೮ ಪರೀಕ್ಷಾ ಕೇಂದ್ರಗಳಿಗೆ ಸ್ಥಳೀಯ ನಿರೀಕ್ಷಣಾಧಿಕಾರಿಗಳು, ವಸ್ತ್ರ ಸಂಹಿತೆ ಅಧಿಕಾರಿಗಳು ಹಾಗೂ ಪ್ರಶ್ನೆಪತ್ರಿಕೆ ಪಾಲಕರ ನೇಮಕ, ಪ್ರತಿ 5 ಪರೀಕ್ಷಾ ಕೇಂದ್ರಗಳಿಗೆ ಒಬ್ಬರಂತೆ ವೀಕ್ಷಕರನ್ನು ನಿಯೋಜಿಸಲಾಗಿದೆ. ಪರೀಕ್ಷಾ ಗೌಪ್ಯ ಸಾಮಗ್ರಿಗಳ ಸಾಗಣೆಗೆ ನಾಲ್ಕು ಮಾರ್ಗ ಗುರುತಿಸಿ, ಪ್ರತಿ ಮಾರ್ಗಕ್ಕೆ ಇಬ್ಬರಂತೆ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಹೇಳಿದ್ದಾರೆ.