ಸಾರಾಂಶ
ಹೇಮಾವತಿ ಅಣೆಕಟ್ಟು ಭರ್ತಿಯಾಗಿರುವ ಹಿನ್ನೆಲೆಯಲ್ಲಿ ನವೆಂಬರ್ ೧ರಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣೇಗೌಡ ಅವರು ಹೇಮಾವತಿಗೆ ಬಾಗಿನ ಅರ್ಪಿಸುವುದಾಗಿ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಬನವಾಸೆ ರಂಗಸ್ವಾಮಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೆ ತಾಲೂಕಿನ ಗೊರೂರಿನಲ್ಲಿರುವ ಹೇಮಾವತಿ ಡ್ಯಾಂ ತುಂಬಿದ್ದು, ನವೆಂಬರ್ ೧ರಂದು ಕನ್ನಡ ರಾಜ್ಯೋತ್ಸವ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ಮಾಡಿದ ನಂತರ ಬಾಗಿನ ಅರ್ಪಿಸಲಿದ್ದಾರೆ.
ಕನ್ನಡಪ್ರಭ ವಾರ್ತೆ ಹಾಸನ
ಹೇಮಾವತಿ ಅಣೆಕಟ್ಟು ಭರ್ತಿಯಾಗಿರುವ ಹಿನ್ನೆಲೆಯಲ್ಲಿ ನವೆಂಬರ್ ೧ರಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣೇಗೌಡ ಅವರು ಹೇಮಾವತಿಗೆ ಬಾಗಿನ ಅರ್ಪಿಸುವುದಾಗಿ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಬನವಾಸೆ ರಂಗಸ್ವಾಮಿ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾತನಾಡಿ, ಈಗಾಗಲೆ ತಾಲೂಕಿನ ಗೊರೂರಿನಲ್ಲಿರುವ ಹೇಮಾವತಿ ಡ್ಯಾಂ ತುಂಬಿದ್ದು, ನವೆಂಬರ್ ೧ರಂದು ಕನ್ನಡ ರಾಜ್ಯೋತ್ಸವ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ಮಾಡಿದ ನಂತರ ಬಾಗಿನ ಅರ್ಪಿಸಲಿದ್ದಾರೆ. ಜಿಲ್ಲೆಯ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡರ ನೇತೃತ್ವದಲ್ಲಿ ನಡೆದ ೨೦೨೫ರ ಶ್ರೀ ಹಾಸನಾಂಬಾ ಹಾಗೂ ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸಲು ದಕ್ಷತೆಯಿಂದ ಕಾರ್ಯ ನಿರ್ವಹಿಸಿದ ಹಾಗೂ ಸಹಕರಿಸಿದವರಿಗೆ ಧನ್ಯವಾದಗಳನ್ನು ತಿಳಿಸುತ್ತೇವೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರು ವಿ. ಚಂದ್ರಶೇಖರ್, ಹರೀಶ್, ವೆಂಕಟೇಗೌಡ, ಪರ್‍ವೀಶ್ ಪಾಷಾ, ಬೂದೇಶ್, ಬಿ.ಕೆ. ಮಂಜುನಾಥ್, ಇತರರು ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))