- ಗುರು-ವಿರಕ್ತರು, ವಿವಿಧ ಸಮುದಾಯ- ಧರ್ಮಗಳ ಧಾರ್ಮಿಕ ನೇತಾರರ ಸಾನ್ನಿಧ್ಯ । ಅತಿಗಣ್ಯರು, ಹಾಲಿ-ಮಾಜಿ ಸಚಿವರು, ಶಾಸಕರು ಭಾಗಿ- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ, ಬಾಪೂಜಿ ವಿದ್ಯಾಸಂಸ್ಥೆ ಗೌರವ ಕಾರ್ಯದರ್ಶಿ, ದಾವಣಗೆರೆ ದಕ್ಷಿಣ ಶಾಸಕರಾಗಿದ್ದ, ಹಿರಿಯ ಕೈಗಾರಿಕೋದ್ಯಮಿ ಲಿಂಗೈಕ್ಯ ಡಾ.ಶಾಮನೂರು ಶಿವಶಂಕರಪ್ಪ ಅವರ ಶಿವಗಣಾರಾಧನೆ ಹಾಗೂ ನುಡಿನಮನ ಕಾರ್ಯಕ್ರಮ ಡಿ.26ರಂದು ನಗರದ ಆನೆಕೊಂಡ ಶ್ರೀ ಕಲ್ಲೇಶ್ವರ ಮಿಲ್‌ ಹಿಂಭಾಗದ ವಿಶಾಲ ಜಾಗದಲ್ಲಿ ನಡೆಯಲಿದೆ.

ಬೆಳಗ್ಗೆ 10.15ಕ್ಕೆ ಶಿವಗಣಾರಾಧನೆ ಹಾಗೂ ನುಡಿನಮನ ಕಾರ್ಯಕ್ರಮವು ರಂಭಾಪುರಿ ಡಾ.ಪ್ರಸನ್ನ ರೇಣುಕ ವೀರ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಉಜ್ಜಯಿನಿ ಶ್ರೀ ಸಿದ್ಧಲಿಂಗ ರಾಜದೇಶಿ ಕೇಂದ್ರ ಸ್ವಾಮೀಜಿ, ಕೇದಾರದ ಶ್ರೀ ಭೀಮಾಶಂಕರ ಶಿವಾಚಾರ್ಯ ಸ್ವಾಮೀಜಿ, ಕಾಶಿ ಡಾ.ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಸಿರಿಗೆರೆ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಸುತ್ತೂರು ಶ್ರೀ ವೀರ ಸಿಂಹಾಸನಾದೀಶ್ವರ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಮುರುಘಾ ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಆದಿಚುಂಚನ ಗಿರಿ ಡಾ.ನಿರ್ಮಲಾನಂದ ಸ್ವಾಮೀಜಿ, ಹರಿಹರ ಶ್ರೀ ವಚನಾನಂದ ಸ್ವಾಮೀಜಿ, ಕೂಡಲ ಸಂಗಮದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿ, ಹುಕ್ಕೇರಿ ಮಠದ ಶ್ರೀ ಸದಾಶಿವ ಸ್ವಾಮೀಜಿ, ಕನಕ ಪೀಠದ ಶ್ರೀ ನಿರಂಜನಾನಂದ ಪುರಿಸ್ವಾಮೀಜಿ, ಶ್ರೀ ಪಕ್ಕೀರ ದಿಂಗಾಲೇಶ್ವರ ಸ್ವಾಮೀಜಿ, ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ, ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಮೂರು ಸಾವಿರ ಮಠದ ಶ್ರೀ ರಾಜಯೋಗೀಂದ್ರ ಸ್ವಾಮೀಜಿ ಸೇರಿದಂತೆ ಸರ್ವ ಜಾತಿ, ಧರ್ಮೀಯ ಗುರುಗಳ ಸಾನ್ನಿಧ್ಯದಲ್ಲಿ ನಡೆಯಲಿದೆ.

ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಡಾ.ಶಿವರಾಜ ಪಾಟೀಲರ ಅಧ್ಯಕ್ಷತೆ ವಹಿಸಲಿದ್ದಾರೆ. ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸಮಾರಂಭ ಉದ್ಘಾಟಿಸುವರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ ನಿರ್ಮಿಸಿರುವ ಲಿಂಗೈಕ್ಯ ಶಾಮನೂರು ಶಿವಶಂಕರಪ್ಪ ಅವರ ಪುತ್ಥಳಿ ಅನಾವರಣಗೊಳಿಸುವರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕಿರುಹೊತ್ತಿಗೆ ಬಿಡುಗಡೆ ಮಾಡುವರು. ಸಾಕ್ಷ್ಯ ಚಿತ್ರವನ್ನು ಡಿಸಿಎಂ ಡಿ.ಕೆ.ಶಿವಕುಮಾರ ಬಿಡುಗಡೆ ಮಾಡುವರು.


ಎಸ್‌.ಎಸ್‌. ಮಲ್ಲಿಕಾರ್ಜುನ ಸ್ವಾಗತ ಮಾಡಲಿದ್ದು, ಡಾ.ಪ್ರಭಾ ಮಲ್ಲಿಕಾರ್ಜುನ ಪ್ರಾಸ್ತಾವಿಕವಾಗಿ ಮಾತನಾಡುವರು. ಎಸ್‌.ಎಸ್‌. ಗಣೇಶ ವಂದನಾರ್ಪಣೆ ಮಾಡುವರು. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಹಾರಾಷ್ಟ್ರದ ಮಾಜಿ ಸಿಎಂ ಸುಶೀಲಕುಮಾರ ಶಿಂಧೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ, ಮಾಜಿ ಸಿಎಂಗಳಾದ ಜಗದೀಶ ಶೆಟ್ಟರ್, ಎಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ನುಡಿನಮನ ಸಲ್ಲಿಸಲಿದ್ದಾರೆ.

ವಿಪ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಡಾ. ಜಿ.ಪರಮೇಶ್ವರ, ಎಚ್.ಕೆ.ಪಾಟೀಲ, ಕೆ.ಜೆ.ಜಾರ್ಜ್‌, ಕೆ.ಎಚ್. ಮುನಿಯಪ್ಪ, ರಾಮಲಿಂಗಾರೆಡ್ಡಿ, ಡಾ. ಎಚ್.ಸಿ.ಮಹದೇವಪ್ಪ, ಸತೀಶ ಜಾರಕಿಹೊಳಿ, ಪ್ರಿಯಾಂಕ ಖರ್ಗೆ, ಕೃಷ್ಣ ಬೈರೇಗೌಡ, ಶರಣಬಸಪ್ಪ ದರ್ಶನಾಪುರ, ಶಿವಾನಂದ ಎಸ್. ಪಾಟೀಲ, ಡಾ.ಶರಣ ಪ್ರಕಾಶ ಪಾಟೀಲ, ದಿನೇಶ ಗುಂಡೂರಾವ್‌, ಲಕ್ಷ್ಮೀ ಹೆಬ್ಬಾಳ್ಕರ್, ಬಿ.ಝೆಡ್. ಜಮೀರ್ ಅಹಮ್ಮದ್ ಖಾನ್‌, ರಹೀಂ ಖಾನ್, ಎನ್. ಚಲುವರಾಯ ಸ್ವಾಮಿ, ಎನ್.ಎಸ್. ಬೋಸರಾಜು, ತಿಮ್ಮಾಪುರ ರಾಮಪ್ಪ ಬಾಳಪ್ಪ, ಮಧು ಬಂಗಾರಪ್ಪ, ಬಿ.ಎಸ್.ಸುರೇಶ, ಡಿ.ಸುಧಾಕರ್‌, ಡಾ. ಎಂ.ಸಿ.ಸುಧಾಕರ್, ಬಿ.ಆರ್.ಪಾಟೀಲ, ಶಿವರಾಜ ತಂಗಡಗಿ, ಕೆ.ವಂಕಟೇಶ, ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ, ವಿಪ ಸದಸ್ಯ ಎನ್.ರವಿಕುಮಾರ, ವಿಪ ಮಾಜಿ ಮುಖ್ಯ ಸಚೇತಕ ಡಾ. ಎ.ಎಚ್. ಶಿವಯೋಗಿಸ್ವಾಮಿ, ಶಾಸಕರಾದ ಡಿ.ಜಿ. ಶಾಂತನಗೌಡ, ಡಿ.ದೇವೇಂದ್ರಪ್ಪ, ಕೆ.ಎಸ್. ಬಸವಂತಪ್ಪ, ಬಸವರಾಜ ವಿ.ಶಿವಗಂಗಾ, ಬಿ.ಪಿ.ಹರೀಶ, ಲತಾ ಮಲ್ಲಿಕಾರ್ಜುನ ಇತರರು ಭಾಗವಹಿಸುವರು.

- - -

(ಬಾಕ್ಸ್‌)

* ನುಡಿನಮನಕ್ಕೆ ಕ್ಷಣಗಣನೆ

- ಸುಮಾರು 200ಕ್ಕೂ ಹೆಚ್ಚು ಮಠಾಧೀಶರು, ವಿವಿಐಪಿಗೆ 3 ವಿಶಾಲ ವೇದಿಕೆಗಳು ಸಜ್ಜು.

- ಮುಖ್ಯ ವೇದಿಕೆ ಬಲಭಾಗದ ವೇದಿಕೆಯಲ್ಲಿ ಹರ-ಗುರು-ಚರಮೂರ್ತಿಗಳಿಗೆ ವ್ಯವಸ್ಥೆ

- ಎಡ ಭಾಗದಲ್ಲಿ ಕುಟುಂಬ ಸದಸ್ಯರು ಆಸೀನರಾಗಲು ವ್ಯವಸ್ಥೆ

- ಕಲ್ಲೇಶ್ವರ ಮಿಲ್‌ ಹಿಂಭಾಗದ ಸುಮಾರು 150 ಎಕರೆ ಜಾಗದಲ್ಲಿ ಕಾರ್ಯಕ್ರಮ

- 50 ಸಾವಿರಕ್ಕೂ ಅಧಿಕ ಜನ ಸೇರುವ ಸಾಧ್ಯತೆ, 25 ಸಾವಿರ ಕುರ್ಚಿಗಳ ವ್ಯವಸ್ಥೆ

- 90 ಊಟದ ಕೌಂಟರ್‌ಗಳ ಸ್ಥಾಪನೆ, ಅತಿಗಣ್ಯರು, ಗಣ್ಯರಿಗೆ ಪ್ರತ್ಯೇಕ ಕಡೆ ಕೌಂಟರ್‌

- ಸಮಸ್ತರಿಗೂ ಒಂದೇ ರೀತಿಯ ಊಟದ ವ್ಯವಸ್ಥೆ ಮಾಡಲಾಗಿದೆ - ಸ್ಥಳದಲ್ಲಿ ಕುಡಿಯುವ ನೀರು, ಆ್ಯಂಬುಲೆನ್ಸ್, ಅಗ್ನಿಶಾಮಕ ಸಿಬ್ಬಂದಿ ನಿಯೋಜನೆ

- ಬೇತೂರು ರಸ್ತೆ, ರಿಂಗ್ ರಸ್ತೆ, ಬಸಾಪುರ ರಿಂಗ್ ರಸ್ತೆಗಳ ಮೂಲಕ ಸಮಾರಂಭಕ್ಕೆ ಆಗಮಿಸಲು ಮಾರ್ಗ ನಿಗದಿ.

- - -

-25ಕೆಡಿವಿಜಿ8: ದಾವಣಗೆರೆ ಆನೆಕೊಂಡದ ಶ್ರೀ ಕಲ್ಲೇಶ್ವರ ಮಿಲ್ ಹಿಂಭಾಗದ ವಿಶಾಲ ಪೆಂಡಾಲ್‌, ವೇದಿಕೆ ನಿರ್ಮಾಣ.

-25ಕೆಡಿವಿಜಿ9: ದಾವಣಗೆರೆ ಆನೆಕೊಂಡದ ಶ್ರೀ ಕಲ್ಲೇಶ್ವರ ಮಿಲ್ ಹಿಂಭಾಗದ ವಿಶಾಲ ಪೆಂಡಾಲ್‌, ವೇದಿಕೆ ಬಳಿ ಪೊಲೀಸ್ ಬಂದೋಬಸ್ತ್.

-25ಕೆಡಿವಿಜಿ10: ದಾವಣಗೆರೆ ಆನೆಕೊಂಡದ ಶ್ರೀ ಕಲ್ಲೇಶ್ವರ ಮಿಲ್ ಹಿಂಭಾಗದ ವಿಶಾಲ ಪೆಂಡಾಲ್‌ನಲ್ಲಿ ಸುಮಾರು 25 ಸಾವಿರಕ್ಕೂ ಅಧಿಕ ಕುರ್ಚಿಗಳ ವ್ಯವಸ್ಥೆ.