ಸಾರಾಂಶ
Today's program is Heartful Ness Meditation
ಹಿರಿಯೂರು: ಚಿತ್ರದುರ್ಗ ಶ್ರೀರಾಮಚಂದ್ರ ಮಿಷನ್ ವತಿಯಿಂದ ಶನಿವಾರದಂದು ಬೆಳಿಗ್ಗೆ 10:30 ಕ್ಕೆ ಜ್ಞಾನಭಾರತಿ ಸಭಾಂಗಣದಲ್ಲಿ ಹಾರ್ಟ್ ಪುಲ್ ನೆಸ್ ಮೆಡಿಟೇಷನ್ ಕಾರ್ಯಕ್ರಮವನ್ನು ನಗರದ ಜ್ಞಾನಭಾರತಿ ಪ್ಯಾರಾ ಮೆಡಿಕಲ್ ಕಾಲೇಜ್ ನಲ್ಲಿ ಹಮ್ಮಿಕೊಳ್ಳಲಾಗಿದೆ. ಧ್ಯಾನ ಮತ್ತು ಮಾನಸಿಕ ಆರೋಗ್ಯ ಎಂಬ ವಿಷಯದ ಬಗ್ಗೆ ಉಪನ್ಯಾಸ ಮತ್ತು ಪ್ರಾತ್ಯಕ್ಷಿಕೆಯನ್ನು ಏರ್ಪಡಿಸಲಾಗಿದ್ದು, ಧ್ಯಾನವನ್ನು ಪ್ರಾಯೋಗಿಕವಾಗಿ ಕಲಿಯುವ ಆಸಕ್ತಿ ಇರುವವರಿಗೆ ಉಚಿತ ಪ್ರವೇಶವಿರುತ್ತದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಿರೀಶ್.ಡಿ ವಹಿಸಿಕೊಳ್ಳಲಿದ್ದು, ಜ್ಞಾನಭಾರತಿ ವಿದ್ಯಾಸಂಸ್ಥೆಯ ಅಧ್ಯಕ್ಷ ಡಾ.ವಿ.ಬಸವರಾಜ್ ಹಾಗೂ ಜ್ಞಾನಭಾರತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯ ಎನ್. ಧನಂಜಯ ಮತ್ತು ಪ್ಯಾರಾ ಮೆಡಿಕಲ್ ಹಾಗೂ ಬಿ.ಇಡಿ ಕಾಲೇಜಿನ ಉಪನ್ಯಾಸಕ ವರ್ಗದವರು ಉಪಸ್ಥಿತರಿರಲಿದ್ದಾರೆ ಎಂದು ಸಂಸ್ಥೆಯವರು ತಿಳಿಸಿದ್ದಾರೆ.
-----