ಸಾರಾಂಶ
ಚನ್ನಪಟ್ಟಣ: ಹಿರಿಯರ ಮಾರ್ಗದರ್ಶನ ಇಂದಿನ ಯುವ ಸಮೂಹಕ್ಕೆ ಅಗತ್ಯ ಎಂದು ಶುಭೋದಯ ಸಾಂಸ್ಕೃತಿಕ ಬಳಗದ ಅಧ್ಯಕ್ಷ ಎಂ.ಶಿವಮಾದು ಹೇಳಿದರು.
ಚನ್ನಪಟ್ಟಣ: ಹಿರಿಯರ ಮಾರ್ಗದರ್ಶನ ಇಂದಿನ ಯುವ ಸಮೂಹಕ್ಕೆ ಅಗತ್ಯ ಎಂದು ಶುಭೋದಯ ಸಾಂಸ್ಕೃತಿಕ ಬಳಗದ ಅಧ್ಯಕ್ಷ ಎಂ.ಶಿವಮಾದು ಹೇಳಿದರು.
ಪಟ್ಟಣದಲ್ಲಿ ಶುಭೋದಯ ಸಾಂಸ್ಕೃತಿಕ ಬಳಗದ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರು ತಮ್ಮ ತಂದೆ-ತಾಯಿಯನ್ನು ಪ್ರೀತಿ ವಿಶ್ವಾಸದಿಂದ ನೋಡಿಕೊಳ್ಳಬೇಕು. ಇಂದಿನ ಆಧುನಿಕ ಯುಗದಲ್ಲಿ ಮಕ್ಕಳು ತಂದೆ ತಾಯಿ ಸರಿಯಾಗಿ ನೋಡಿಕೊಳ್ಳದೇ ವೃದ್ಧಾಶ್ರಮಕ್ಕೆ ಸೇರಿಸುತ್ತಿರುವುದು ದುರಂತ. ಹಿರಿಯರು ಜೀವನದಲ್ಲಿ ಅಳವಡಿಸಿಕೊಂಡ ಮೌಲ್ಯಗಳು, ಸಂಸ್ಕಾರ ಹಾಗೂ ಜೀವನಾನುಭವಗಳು ಎಲ್ಲರಿಗೂ ದಾರಿದೀಪ ಎಂದರು.ನಿವೃತ್ತ ಉಪನ್ಯಾಸಕ ಟಿ.ಜೆ.ರಾಮಸ್ವಾಮಿ ಮಾತನಾಡಿ, ಭಾರತ ವಿಕಾಸ ಪರಿಷತ್ತು ಇಂದಿನ ಯುವಪೀಳಿಗೆಯಲ್ಲಿ ಸಂಸ್ಕೃತಿ, ಸಂಸ್ಕಾರ ಬಿತ್ತರಿಸುವ ಕೆಲಸ ಮಾಡುತ್ತಿದೆ. ಇಂದಿನ ದಿನಮಾನಗಳಲ್ಲಿ ಹಿರಿಯರನ್ನು ವೃದ್ಧಾಶ್ರಮಕ್ಕೆ ಸೇರಿಸುವ ಪರಿಪಾಠ ಹೆಚ್ಚಾಗಿದೆ. ತನ್ನ ಕುಟುಂಬದ ಏಳಿಗೆಗೆ ಹಗಲಿರುಳು, ದುಡಿದು ಬದುಕಿನ ಸಂಧ್ಯಾಕಾಲದಲ್ಲಿರುವ ಹಿರಿಯರಿಗೆ ಪ್ರೀತಿ, ಗೌರವಗಳಿಂದ ನೋಡಿಕೊಳ್ಳಬೇಕು ಎಂದರು.
ಇದೇ ವೇಳೆ ಹಿರಿಯ ನಾಗರಿಕರಾದ ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ದಪ್ಪ ಅವರನ್ನು ಸನ್ಮಾನಿಸಲಾಯಿತು. ಬಳಗದ ಸಂಘಟನಾ ಕಾರ್ಯದರ್ಶಿ ಯೋಗೇಶ್ ಚಕ್ಕೆರೆ ಕಾರ್ಯಕ್ರಮ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ರಾಂಪುರ ಮಲ್ಲೇಶ್, ಗೌರವಾಧ್ಯಕ್ಷ ಪುಟ್ಟಲಿಂಗಯ್ಯ, ಚಂದು ಎಲೆಕ್ಟ್ರಾನಿಕ್ಸ್ ಮಾಲೀಕ ಮಹೇಶ್ವರ್, ಖಜಾಂಚಿ ಸಿ.ಎಸ್. ಶ್ರೀಕಂಠಯ್ಯ, ಸೋಗಲ ರಾಮು, ಸಮಾಜಸೇವಕ ಆರ್.ಕೆ. ರಾಮಕೃಷ್ಣೇಗೌಡ, ಮಾಜಿ ಅಧ್ಯಕ್ಷ ಎಚ್.ಕೆ ರಾಮಚಂದ್ರು, ನಿವೃತ್ತ ತೋಟಗಾರಿಕಾ ಅಧಿಕಾರಿ ಎಚ್ .ಆರ್. ರಾಮಚಂದ್ರಯ್ಯ, ನಿವೃತ್ತ ಶಿಕ್ಷಕರಾದ ಸಿದ್ದಪ್ಪ, ನಿವೃತ್ತ ಸಿಡಿಪಿಒ ಪುಟ್ಟಸ್ವಾಮಿ, ಪ್ರಕಾಶ್ ರೆಡ್ಡಿ, ಚಿಕ್ಕೇಗೌಡ, ರಾಂಪುರ ಮಲವೇಗೌಡ, ಪೂರ್ಣಿಮಾ ಕಾರಂತ್, ವೀರೇಂದ್ರಕುಮಾರ್ ಇತರರಿದ್ದರು.ಪೊಟೋ೧೫ಸಿಪಿಟಿ೧:
ಚನ್ನಪಟ್ಟಣದಲ್ಲಿ ಶುಭೋದಯ ಸಾಂಸ್ಕೃತಿಕ ಬಳಗದ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯಲ್ಲಿ ಎಪಿಎಂಸಿ ಮಾಜಿ ಅಧ್ಯಕ್ಷ ಸಿದ್ದಪ್ಪ ಅವರನ್ನು ಸನ್ಮಾನಿಸಲಾಯಿತು.