ಉಡುಪಿ: ಇಲ್ಲಿನ ಇಂದ್ರಾಳಿಯ ಶ್ರೀ ಪಂಚ ದುರ್ಗಾಪರಮೇಶ್ವರಿ ದೇವಾಲಯದ ಸನಿಹದಲ್ಲಿರುವ ಶ್ರೀ ಮುಖ್ಯಪ್ರಾಣ ಮತ್ತು ನಾಗ ದೇವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಏ.4ರಿಂದ 7ರವರೆಗೆ ನಡೆಯಲಿದೆ.
ಉಡುಪಿ: ಇಲ್ಲಿನ ಇಂದ್ರಾಳಿಯ ಶ್ರೀ ಪಂಚ ದುರ್ಗಾಪರಮೇಶ್ವರಿ ದೇವಾಲಯದ ಸನಿಹದಲ್ಲಿರುವ ಶ್ರೀ ಮುಖ್ಯಪ್ರಾಣ ಮತ್ತು ನಾಗ ದೇವರ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಏ.4ರಿಂದ 7ರವರೆಗೆ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ಶುಕ್ರವಾರ ಉಡುಪಿಯ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವದಿಸಿದರು.
ಶನಿವಾರ ಬೆಳಿಗ್ಗೆ 6.48 ಗಂಟೆಗೆ ಒದಗುವ ಮೀನ ಲಗ್ನ ಸುಮುಹೂರ್ತದಲ್ಲಿ ಅಷ್ಟಬಂಧ ಸಹಿತ ಶ್ರೀ ಮುಖ್ಯಪ್ರಾಣ ದೇವರ ಪ್ರತಿಷ್ಠೆ ನಡೆಯಲಿದೆ. ಸಂಜೆ 5.30ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಅದಮಾರು ಮಠದ ಕಿರಿಯ ಶ್ರೀ ಈಶಪ್ರಿಯ ತೀರ್ತ ಶ್ರೀಪಾದರು ಮತ್ತು ಸೋದೆ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಲಿದ್ದಾರೆ. ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮತ್ತು ಕಾರ್ಕಳ ಶಾಸಕ ಸುನಿಲ್ ಕುಮಾರ್ ಮುಖ್ಯ ಅತಿಥಿಗಳಾಗಿದ್ದು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸಲಿದ್ದಾರೆ.ಮಧ್ಯಾಹ್ನ 11 ಗಂಟೆಗೆ ವಿದುಷಿ ಸವಿತಾ ಮುರಳೀಧರ ಇವರ ಶಿಷ್ಯವೃಂದದಿಂದ ನೃತ್ಯ ವೈಭವ, 12 ಗಂಟೆಗೆ ಅನ್ನ ಸಂತರ್ಪಣೆ, ಮಧ್ಯಾಹ್ನ 2ರಿಂದ ಯಕ್ಷಗಾನ ಕಲಾ ಕ್ಷೇತ್ರ ಗುಂಡಿಬೈಲು ವತಿಯಿಂದ ಯಕ್ಷಗಾನ ತಾಳಮದ್ದಲೆ, ಸಂಜೆ 4 ಗಂಟೆಯಿಂದ ಉಷಾ ಹೆಬ್ಬಾರ್ ತಂಡದವರಿಂದ ಭಜನಾಮೃತಂ ನಡೆಯಲಿದೆ.