ಕನ್ನಡಪ್ರಭ ವಾರ್ತೆ ಮದ್ದೂರು

ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಅವರ ಹುಟ್ಟುಹಬ್ಬದ ಅಂಗವಾಗಿ ಜೂ.1ರಂದು ತಾಲೂಕಿನ ಕೊಪ್ಪ 1 ಮತ್ತು 2ನೇ ವೃತ್ತದ ಅವರ ಅಭಿಮಾನಿ ಬಳಗದಿಂದ ಗ್ರಾಮದ ಶ್ರೀಪಟ್ಟಲದಮ್ಮ ದೇವಸ್ಥಾನ ಹಾಗೂ ಶ್ರೀಯಂಬಾರ್ಜಿಯರ್ ಮಹಾತ್ಮರ ಮಠದ ಆವರಣದಲ್ಲಿ ವಿವಿಧ ಸಮಾಜ ಮುಖಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಾಗಮಂಗಲ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಶ್ರೀಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆಯಲ್ಲಿ ನುರಿತ ತಜ್ಞ ವೈದ್ಯ ತಂಡದಿಂದ ನಡೆಯುವ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರವನ್ನು ಶ್ರೀ ಆದಿಚುಂಚನಗಿರಿ ಮಠದ ಕಿರಿಯ ಸ್ವಾಮಿಜಿ ಶ್ರೀಸತ್ಕೀರ್ತಿನಾಥಸ್ವಾಮಿ ಉದ್ಘಾಟಿಸುವರು. ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳೀಗೌಡ, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದಾರೆ. ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.

ಇದೇ ವೇಳೆ ಆರೋಗ್ಯ ಇಲಾಖೆ ಶುಶ್ರೂಷಕಿಯರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಸಂಜೆ ಮನರಂಜನೆ ಕಾರ್ಯಕ್ರಮ:


ಸಂಜೆ 7 ಗಂಟೆಗೆ ಜೀ ಕನ್ನಡ ವಾಹಿನಿ ಖ್ಯಾತಿಯ ಸಾಗರ್ ತುರುವೇಕೆರೆ ತಂಡದ ಪ್ರಸಿದ್ದ ಕಲಾವಿದರಾದ ಚಂದ್ರಪ್ರಭ ಮತ್ತು ವಿನೋದ್ ಗೊಬ್ಬಗಾಲ ಅವರಿಂದ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ ಎಂದರು.

ಸುದ್ದಿಗೋಷ್ಟಿಯಲ್ಲಿ ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಸಿ.ಜೋಗೀಗೌಡ, ಮನ್ಮುಲ್ ಮಾಜಿ ನಿರ್ದೇಶಕ ಕುಮಾರ್ ಕೊಪ್ಪ, ತಾಪಂ ಮಾಜಿ ಉಪಾಧ್ಯಕ್ಷ ಬಿ.ಎಂ.ರಘು, ಮಾಜಿ ಸದಸ್ಯ ತೋಯಜಾಕ್ಷ, ವಿಎಸ್ ಎಸ್ ಎನ್ ಬಿ ಅಧ್ಯಕ್ಷ ಶಿವಲಿಂಗಯ್ಯ, ಗ್ರಾಪಂ ಮಾಜಿ ಸದಸ್ಯರಾದ ರಮೇಶ್ ಗೌಡ, ಪರ್ವೇಜ್ ಅಹಮದ್, ಗಿರೀಶ್, ನವೀನ್ ಕುಮಾರ್, ಸಂತೋಷ್ ಕೊಟ್ಟಿಗೆಯಾರ್, ಸುರೇಶ್, ರುದ್ರೇಶ್, ಮುಖಂಡ ಕಿರಂಗೂರು ಅಪ್ಪಾಜಪ್ಪ ಇದ್ದರು.ಶಾಸಕ ಚಲುವರಾಯಸ್ವಾಮಿ ಹುಟ್ಟುಹಬ್ಬ ಇಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಮಂಡ್ಯ: ಮಾಜಿ ಸಚಿವ, ಶಾಸಕ ಎನ್.ಚಲುವರಾಯಸ್ವಾಮಿ ಜನ್ಮದಿನದ ಅಂಗವಾಗಿ ಜೂ.1ರಂದು ನಗರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ನಡಯಲಿದೆ ಎಂದು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುಂಡಹಳ್ಳಿ ಮಂಜುನಾಥ್ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಎನ್.ಚಲುವರಾಯಸ್ವಾಮಿ ಅಭಿಮಾನಿಗಳ ಬಳಗದ ಸಹಯೋಗದಲ್ಲಿ ನಡೆಯುವ ಸಮಾರಂಭಕ್ಕೂ ಮುನ್ನ ಬೆಳಗ್ಗೆ 7.30ಕ್ಕೆ ನಗರದ ವಿದ್ಯಾಗಣಪತಿ ದೇವಸ್ಥಾನದಲ್ಲಿ ಚಲುವರಾಯಸ್ವಾಮಿ ಅವರ ಒಳಿತಿಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಲಾಗುವುದು. ಮಧ್ಯಾಹ್ನ ಜಿಲ್ಲಾ ಆಸ್ಪತ್ರೆ ಮಮತೆಯ ಮಡಿಲು ಕೇಂದ್ರದಲ್ಲಿ ರೋಗಿಗಳಿಗೆ ಗಂಜಿ ವಿತರಣೆ , ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಹಾಗೂ ಸೇವಾ ಕಿರಣ ವೃದ್ಧಾಶ್ರಮದ ಹಿರಿಯ ನಾಗರಿಕರಿಗೆ ಊಟ ತಿಂಡಿ ವ್ಯವಸ್ಥೆ ಮಾಡಲಾಗಿದೆ ಎಂದರು.

ಬೆಳಗ್ಗೆ 10.30ಕ್ಕೆ ನಗರದ ಗಾಂಧಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿರುವ ಸುಮಾರು 100 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿವಿಧ ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿರುವ ಸಾಧಕರನ್ನು ಅಭಿನಂದಿಸಲಾಗುವುದು ಎಂದರು.ಸಮಾರಂಭವನ್ನು ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚ್ಚಿನ್ ಚಲುವರಾಯಸ್ವಾಮಿ ಉದ್ಘಾಟಿಸುವರು. ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಅಧ್ಯಕ್ಷತೆ ವಹಿಸುವರು. ನಿವೃತ್ತ ಪ್ರಾಂಶುಪಾಲ ರಾಮಕೃಷ್ಣ ಮಾತನಾಡಲಿದ್ದಾರೆ ಎಂದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಪ್ರಸನ್ನಕುಮಾರ್ ಕೆರಗೋಡು(ಶಿಕ್ಷಣ ಕ್ಷೇತ್ರ), ಡಾ.ಮುರಳಿ ಮೋಹನ್.ಆರ್( ವೈದ್ಯಕೀಯ ಕ್ಷೇತ್ರ), ಉಮೇಶ್ ಶಿವಾರ( ಜನಪದ ಕ್ಷೇತ್ರ), ಮಧುಕುಮಾರ್ ಕಾರೆಕಟ್ಟೆ( ಕೃಷಿಕ್ಷೇತ್ರ) ಹಾಗೂ ಉಪನ್ಯಾಸಕಿ ಡಾ.ದೇವಿಕಾ.ಎನ್.ಎಸ್( ಜನಪದ ಸಾಹಿತ್ಯ) ಅಭಿನಂದಿಸಲಾಗುವುದು ಎಂದು ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಸಿ.ಎಂ.ದ್ಯಾವಪ್ಪ, ಮೇಲುಕೋಟೆ ಕಿಸಾನ್ ಘಟಕದ ಅಧ್ಯಕ್ಷ ಚಿನಕುರಳಿ ಸಿ.ಆರ್.ರಮೇಶ್, ಪರಿಶಿಷ್ಟ ವಿಭಾಗದ ಅಧ್ಯಕ್ಷ ವಿಜಯ್‌ಕುಮಾರ್, ಹಿಂದುಳಿದ ವರ್ಗಗಳ ಅಧ್ಯಕ್ಷ ಸಾತನೂರು ಕೃಷ್ಣ, ಉದಯ್ ಕುಮಾರ್, ಗುರುರಾಜು ಇದ್ದರು.