ಸಾರಾಂಶ
ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಪುತ್ರ ವಿವೇಕ ಹೆಬ್ಬಾರ್ ಹಾಗೂ ಸಾವಿರಾರು ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ
ಶಿರಸಿ: ಯಲ್ಲಾಪುರ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಅವರ ಪುತ್ರ ವಿವೇಕ ಹೆಬ್ಬಾರ್ ಹಾಗೂ ಅವರ ನೂರಾರು ಬೆಂಬಲಿಗರು ಗುರುವಾರ ಬನವಾಸಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು.
ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜಾ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವ್ಕರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬಳಿಕ, ಮುಂಡಗೋಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವೇಕ ಹೆಬ್ಬಾರ ನೇತೃತ್ವದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್ ಸೇರಿದರು.
ವಿವೇಕ ಹೆಬ್ಬಾರ್ ಮಾತನಾಡಿ, ನಮ್ಮ ಕಾರ್ಯಕರ್ತರನ್ನು ಮತ್ತು ಮುಖಂಡರನ್ನು ನಡೆಸಿಕೊಂಡ ರೀತಿಯಿಂದ ಬೇಸರಗೊಂಡು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ ಗೆಲುವಿಗೆ ಶ್ರಮಿಸುತ್ತೇವೆ ಎಂದರು.