ನಾಳೆ ಚಿತ್ರದುರ್ಗದಲ್ಲಿ ಶೋಷಿತರ ಜಾಗೃತಿಗಾಗಿ ಬೃಹತ್‌ ಸಮಾವೇಶ

| Published : Jan 27 2024, 01:18 AM IST

ನಾಳೆ ಚಿತ್ರದುರ್ಗದಲ್ಲಿ ಶೋಷಿತರ ಜಾಗೃತಿಗಾಗಿ ಬೃಹತ್‌ ಸಮಾವೇಶ
Share this Article
  • FB
  • TW
  • Linkdin
  • Email

ಸಾರಾಂಶ

ಕಾಂತರಾಜ್ ವರದಿ ಸ್ವೀಕೃತವಾಗಿಲ್ಲ, ವರದಿ ಅಧ್ಯಯನವೂ ಆಗಿಲ್ಲ. ಆದರೂ ಕೆಲ ಮುಂದುವರಿದ ಸಮುದಾಯದವರು ಕಾಂತರಾಜ್ ವರದಿಯನ್ನು ಸ್ವೀಕಾರ ಮಾಡಬೇಡಿ ಎಂದು ಪೂರ್ವಾಗ್ರಹ ಪೀಡಿತರಾಗಿ ಹೇಳುತ್ತಿರುವುದು ಏತಕ್ಕಾಗಿ? ಹಲವು ದಶಕಗಳ ಬೇಡಿಕೆಯಾದ ಕಾಂತರಾಜ್ ವರದಿ ಸರ್ಕಾರ ಕೂಡಲೇ ಸ್ವೀಕರಿಸಿ, ಅನುಷ್ಠಾನಗೊಳಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಒತ್ತಾಯಿಸಲು ಜ.28ರಂದು ಚಿತ್ರದುರ್ಗದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಹಲವು ಸಚಿವರು ಭಾಗಿಯಾಗುತ್ತಿದ್ದಾರೆ ಎಂದು ವಿಧಾನ ಪರಿಷತ್ತು ಮಾಜಿ ಸದಸ್ಯ ಆರ್.ಪ್ರಸನ್ನಕುಮಾರ್ ಶಿಕಾರಿಪುರದಲ್ಲಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ, ಶಿಕಾರಿಪುರ

ಕಾಂತರಾಜ್ ವರದಿ ಸ್ವೀಕೃತವಾಗಿಲ್ಲ, ವರದಿ ಅಧ್ಯಯನವೂ ಆಗಿಲ್ಲ. ಆದರೂ ಕೆಲ ಮುಂದುವರಿದ ಸಮುದಾಯದವರು ಕಾಂತರಾಜ್ ವರದಿಯನ್ನು ಸ್ವೀಕಾರ ಮಾಡಬೇಡಿ ಎಂದು ಪೂರ್ವಾಗ್ರಹ ಪೀಡಿತರಾಗಿ ಹೇಳುತ್ತಿರುವುದು ಏತಕ್ಕಾಗಿ ಎಂದು ವಿಧಾನ ಪರಿಷತ್ತು ಮಾಜಿ ಸದಸ್ಯ ಆರ್.ಪ್ರಸನ್ನಕುಮಾರ್ ಹೇಳಿದರು.

ಪಟ್ಟಣದ ಸುರಭಿ ಭವನದಲ್ಲಿ ರಾಜ್ಯ ಶೋಷಿತ ಸಮುದಾಯಗಳ ಮಹಾಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ವತಿಯಿಂದ "ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶ "ದ ಪೂರ್ವಭಾವಿ ಸಭೆ ಉದ್ದೇಶಿಸಿ ಅವರು ಮಾತನಾಡಿದರು.

ಹಲವು ದಶಕಗಳ ಬೇಡಿಕೆಯಾದ ಹಿಂದುಳಿದ ಸಮುದಾಯಗಳ ಹಕ್ಕೊತ್ತಾಯದ ಮೇರೆಗೆ ರಚಿತವಾದ ಕಾಂತರಾಜ್ ವರದಿಯನ್ನು ಸರ್ಕಾರ ಕೂಡಲೇ ಸ್ವೀಕರಿಸಬೇಕು ಮತ್ತು ಅದನ್ನು ಅನುಷ್ಠಾನಗೊಳಿಸಬೇಕು ಎಂದು ಜ.28 ರಂದು ಚಿತ್ರದುರ್ಗದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಹಲವು ಸಚಿವರು ಭಾಗಿಯಾಗುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್ ಮುಖಂಡ ಶ್ರೀಕಾಂತ್ ಮಾತನಾಡಿ, ಶೋಷಿತ ಸಮುದಾಯಗಳ ಏಳಿಗೆಗಾಗಿ ಕಾಂತರಾಜ್ ವರದಿಯು ಅವಶ್ಯಕವಾಗಿದೆ. ಜಿಲ್ಲೆಯಿಂದ 50 ಸಾವಿರ ಅಧಿಕ ಜನರು ಸಮಾವೇಶದಲ್ಲಿ ಪಾಲ್ಗೊಳ್ಳಬೇಕು ಎಂದರು.

ತಾಂಡ ಅಭಿವೃದ್ಧಿ ನಿಗಮ ಮಾಜಿ ನಿರ್ದೇಶಕ ಶಿವು ನಾಯ್ಕ ಮಾತನಾಡಿ, ಸಚಿವ ಸಂಪುಟದಲ್ಲಿ ಬಂಜಾರ ಸಮುದಾಯದಿಂದ ಒಬ್ಬರೂ ಸಚಿವರಿಲ್ಲ. ಮುಂದಿನ ದಿನಗಳಲ್ಲಿ ಸಮಾಜದ ನೋವು -ನಲಿವುಗಳನ್ನು ಹಂಚಿಕೊಳ್ಳಲು ಸಂಪುಟದಲ್ಲಿ ಕನಿಷ್ಠ ಒಬ್ಬರಾದರೂ ಬಣಜಾರ್ ಸಮುದಾಯದ ಸಚಿವರನ್ನು ನೇಮಕ ಮಾಡಬೇಕು ಆಗ್ರಹಿಸಿದರು.

ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹೇಶ್ ಹುಲ್ಮಾರ್ ವಹಿಸಿದ್ದರು. ಈ ಸಂದರ್ಭದಲ್ಲಿ ಕರಪತ್ರಗಳನ್ನು ಬಿಡುಗಡೆ ಗೊಳಿಸಲಾಯಿತು.

ಮುಖಂಡ ಗೋಣಿ ಮಾಲತೇಶ್, ತಾಲೂಕು ಕುರುಬ ಸಮಾಜದ ಅಧ್ಯಕ್ಷ ಕಬಾಡಿ ರಾಜಣ್ಣ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂಗನಾಥ್, ರಾಜ್ಯ ಕುರುಬ ಸಮಾಜದ ನಿರ್ದೇಶಕ ಡಾ.ಶರತ್ ಎಸ್.ಕೆ, ಮಾರವಳ್ಳಿ ಉಮೇಶ್, ಇಕ್ಕೇರಿ ರಮೇಶ್, ಭಂಡಾರಿ ಮಾಲತೇಶ್, ಮತ್ತಿಕೋಟೆ ಕರಿಬಸಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೊಡು ರತ್ನಾಕರ, ಮಂಜುನಾಥ್, ಎಸ್.ಟಿ. ಹಾಲಪ್ಪ, ಬನ್ನೂರು ಮಂಜಪ್ಪ ಮತ್ತಿತರರು ಉಪಸ್ಥಿತರಿದ್ದರು.

- - - -24ಕೆ.ಎಸ್.ಕೆಪಿ2:

ಶಿಕಾರಿಪುರದ ಸುರಭಿ ಭವನದಲ್ಲಿ ನಡೆದ ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಕರಪತ್ರಗಳನ್ನು ಬಿಡುಗಡೆ ಗೊಳಿಸಲಾಯಿತು.