ಸಾರಾಂಶ
ಸೆಪ್ಟೆಂಬರ್ 15 ರಂದು ಬೆಳಿಗ್ಗೆ 8 ಗಂಟೆಗೆ 10 ಮೋಟರ್ ಬೈಕ್ ಗಳ ರ್‍ಯಾಲಿಗೆ ಚಾಲನೆ ನೀಡಲಾಗುತ್ತದೆ. ರ್‍ಯಾಲಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಚೇರಿಯಿಂದ ಆರಂಭವಾಗಿ ಬೆಂಗಳೂರಿನ ವಿಧಾನ ಸೌಧದ ವರೆಗೆ ಸಾಗಿ ಅಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸೇರ್ಪಡೆ ಆಗಲಿದೆ
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಜಿಲ್ಲಾಡಳಿತ ಭವನದಲ್ಲಿ ಸೆ. 15 ರಂದು ನಡೆಯುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಹಾಗೂ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗುವ ರ್‍ಯಾಲಿ ಕಾರ್ಯಕ್ರಮಗಳನ್ನು ಎಲ್ಲ ಇಲಾಖೆಗಳ ಸಹಯೋಗದಲ್ಲಿ ಅರ್ಥ ಪೂರ್ಣವಾಗಿ ಆಚರಿಸಿ ಯಶಸ್ವಿಗೊಳಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು.ವಿಧಾನಸೌಧಕ್ಕೆ ಬೈಕ್ ರ್‍ಯಾಲಿ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪೂರ್ವಬಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸೆಪ್ಟೆಂಬರ್ 15 ರಂದು ಬೆಳಿಗ್ಗೆ 8 ಗಂಟೆಗೆ 10 ಮೋಟರ್ ಬೈಕ್ ಗಳ ರ್‍ಯಾಲಿಗೆ ಚಾಲನೆ ನೀಡಲಾಗುತ್ತದೆ. ರ್‍ಯಾಲಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಚೇರಿಯಿಂದ ಆರಂಭವಾಗಿ ಬೆಂಗಳೂರಿನ ವಿಧಾನ ಸೌಧದ ವರೆಗೆ ಸಾಗಿ ಅಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಸೇರ್ಪಡೆ ಆಗಲಿದೆ ಎಂದರು.ನಗರದಲ್ಲಿ ಸೈಕಲ್ ರ್‍ಯಾಲಿ
ಸೈಕಲ್ ರ್‍ಯಾಲಿ ನಗರದ ಜಿಲ್ಲಾಡಳಿತ ಭವನದಿಂದ ಬೆಳಿಗ್ಗೆ 8.30ಕ್ಕೆ ಪ್ರಾರಂಭಗೊಂಡು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಕನ್ನಡ ಭವನವರೆಗೆ ಸಾಗಿ ಜಿಲ್ಲಾಡಳಿತ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯುವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ವೇದಿಕೆ ಕಾರ್ಯಕ್ರಮದವರೆಗೆ ಸಾಗಿ ಮುಕ್ತಾಯಗೊಳ್ಳುತ್ತದೆ. ಈ ಕಾರ್ಯಕ್ರಮಗಳಲ್ಲಿ ಸುಮಾರು 1000 ಕೂ ಹೆಚ್ಚು ಜನರು ಪಾಲ್ಗೊಳ್ಳಲಿದ್ದಾರೆ.ಅಂದು ಕಾರ್ಯಕ್ರಮದಲ್ಲಿ ಭಾಗವಹಿಸುವವರಿಗೆ ಕುಡಿಯುವ ನೀರು, ಲಘು ಉಪಹಾರ, ಆಸನ ವ್ಯವಸ್ಥೆ, ಪೊಲೀಸ್ ಬಂದೋಬಸ್ತ್, ಅರೋಗ್ಯ ಸೇವೆ, ಆ್ಯಂಬುಲೆನ್ಸ್ ನಿಲುಗಡೆ, ಸಂಚಾರ ವ್ಯವಸ್ಥೆ, ವಾಹನ ನಿಲುಗಡೆ ವ್ಯವಸ್ಥೆ ಹಾಗೂ ಮೂಲಭೂತ ಸೌರ್ಕಯಗಳನ್ನು ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾರ್ವಜನಿಕರಿಗೆ ಆಹ್ವಾನಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ನೆಡೆಯುವ ಈ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಸಮಸ್ತ ನಾಗರಿಕರು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಸದಸ್ಯರು, ಪದಾಧಿಕಾರಿಗಳು ಭಾಗವಹಿಸಲು ಈ ವೇಳೆ ಜಿಲ್ಲಾಧಿಕಾರಿಗಳು ಮನವಿ ಮಾಡಿದರು. ಜಿಲ್ಲಾಡಳಿತದ ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಕಾರ್ಯಕ್ರಮ ದಲ್ಲಿ ಭಾಗವಹಿಸಲು ಕಟ್ಟು ನಿಟ್ಟಿನ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕುಶಲ್ ಚೌಕ್ಸೆ, ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ತೇಜಾನಂದ ರೆಡ್ಡಿ, ಜಿಲ್ಲಾ ಅರೋಗ್ಯಮತ್ತು ಕುಟುಂಬ ಕಲ್ಯಾಣಧಿಕಾರಿ ಡಾ.ಎಸ್.ಎಸ್. ಮಹೇಶ್ ಕುಮಾರ್ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.