ಸಾರಾಂಶ
ಕನ್ನಡ ನಾಡು ಹಿತರಕ್ಷಣಾ ಸಮಿತಿಯ ವತಿಯಿಂದ ರಾಜ್ಯ ಮಟ್ಟದ ಅದ್ಧೂರಿ ಕನ್ನಡ ರಾಜ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನ.29ರಂದು ಇಲ್ಲಿನ ತಾಲೂಕು ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಸಮಿತಿಯ ರಾಜ್ಯಾಧ್ಯಕ್ಷ ಕೆ.ವಿ.ಕೃಷ್ಣಮೂರ್ತಿ ತಿಳಿಸಿದ್ದಾರೆ.
ಕನ್ನಡಪ್ರಭವಾರ್ತೆ ಚನ್ನಗಿರಿ
ಕನ್ನಡ ನಾಡು ಹಿತರಕ್ಷಣಾ ಸಮಿತಿಯ ವತಿಯಿಂದ ರಾಜ್ಯ ಮಟ್ಟದ ಅದ್ಧೂರಿ ಕನ್ನಡ ರಾಜ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನ.29ರಂದು ಇಲ್ಲಿನ ತಾಲೂಕು ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಸಮಿತಿಯ ರಾಜ್ಯಾಧ್ಯಕ್ಷ ಕೆ.ವಿ.ಕೃಷ್ಣಮೂರ್ತಿ ತಿಳಿಸಿದ್ದಾರೆ.ಬೆಳಗ್ಗೆ 11ಗಂಟೆಗೆ ಕನ್ನಡ ನಾಡಿನ ಇತಿಹಾಸ ಸಾರುವಂತಹ ಸ್ತಬ್ದ ಚಿತ್ರಗಳ ವಿವಿಧ ಜನಪದ ಕಲಾಮೇಳಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಿದ್ದು ಮೆರವಣಿಗೆಗೆ ಚಾಲನೆಯನ್ನು ಪಾಂಡೋಮಟ್ಟಿ ವಿರಕ್ತ ಮಠದ ಶ್ರೀ ಗುರುಬಸವ ಮಹಾಸ್ವಾಮಿಗಳು, ಇಲ್ಲಿನ ಹಿರೇಮಠದ ಶ್ರೀ ಕೇದಾರಲಿಂಗ ಶಿವಶಾಂತವೀರ ಶಿವಾಚಾರ್ಯ ಮಹಾಸ್ವಾಮಿಗಳು ನೆರವೇರಿಸಲಿದ್ದಾರೆ. ಮೆರವಣಿಗೆಯ ಅಧ್ಯಕ್ಷತೆಯನ್ನು ನಿವೃತ್ತ ಐಎಎಸ್ ಅಧಿಕಾರಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಸಿ.ಸೋಮಶೇಖರ್ ನೆರವೇರಿಸುವರು.
ಸಂಜೆ 5ಗಂಟೆಯಿಂದ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮದ ಉದ್ಘಾಟನೆಯನ್ನು ಅಮೇರಿಕಾದ ಪ್ರೊ.ಡಾ.ಸುಂದರರಾಜ ಸೀತಾರಾಮ ಅಯ್ಯಂಗಾರ್, ಶಾಸಕ ಬಸವರಾಜ ವಿ.ಶಿವಗಂಗಾ ಇವರು ನೆರವೇರಿಸಲಿದ್ದು ಸಮಾರಂಭದ ಅಧ್ಯಕ್ಷತೆಯನ್ನು ಸಮಿತಿಯ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಗೀತಾಗಿರಿಜ ವಹಿಸುವರು. ಮುಖ್ಯ ಅತಿಥಿಗಳಾಗಿ ಚಳ್ಳಕೆರೆ ಶಾಸಕ ರಘುಮೂರ್ತಿ, ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಉಪ ಪೊಲೀಸ್ ಮಹಾನಿರೀಕ್ಷಕ ರವಿ ಡಿ.ಚನ್ನಣ್ಣನವರ್, ಮಾಜಿ ಸಚಿವೆ ಬಿ.ಟಿ,ಲಲಿತನಾಯಕ್, ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್, ಜಿಪಂ ಕಾರ್ಯನಿರ್ವಾಣಾಧಿಕಾರಿ ಸುರೇಶ್ ಬಿ.ಇಟ್ನಾಳ್, ತಾಲೂಕು ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ್, ಜಿಪಂ ಮಾಜಿ ಸದಸ್ಯ ಹೊದಿಗೆರೆ ರಮೇಶ್, ಪತ್ರಕರ್ತ ರಮೇಶ್ ಹಿರೇಜಂಬೂರು, ಜಿ.ಚಂದ್ರಹಾಸ ಹಿರೇಮಳಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಕರ್ನಾಟಕ ಪ್ರಜಾಭೂಷಣ ಮತ್ತು ಕರ್ನಾಟಕ ಸೇವಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು.;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))