ಸಾರಾಂಶ
ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮದ ಮೂಲಕ ಕಾಲೇಜು ಬೆಳೆದು ಬಂದ ಹಾದಿಯನ್ನು ಪರಿಚಯಿಸುವ ಉದ್ದೇಶವನ್ನು ಹೊಂದಲಾಗಿದ್ದು, ಕಾಲೇಜಿನಲ್ಲಿ ಹೊಸದಾಗಿ ಇನರ್ಮೇಷನ್ ಸೈನ್ಸ್ ಅಂಡ್ ಎಂಜಿನಿಯರಿಂಗ್ ವಿಭಾಗವನ್ನು ಸ್ನಾತಕೋತ್ತರ ಪದವಿ ಎಂ.ಸಿ.ಎ ಕೋರ್ಸ್‌ನ್ನು ಪ್ರಾರಂಭಿಸಲಾಗಿದೆ.
ಕನ್ನಡಪ್ರಭ ವಾರ್ತೆ ಮಂಡ್ಯ
ಕಾವೇರಿ ತಾಂತ್ರಿಕ ಮಹಾ ವಿದ್ಯಾಲಯದ ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮ ಡಿ.೧೬ರ ಬೆಳಿಗ್ಗೆ ೧೧ ಗಂಟೆಗೆ ಕಾಲೇಜಿನ ಆವರಣದಲ್ಲಿ ನಡೆಯಲಿದೆ ಎಂದು ಕಾವೇರಿ ಎಜುಕೇಷನ್ ಅಂಡ್ ರಿಸರ್ಚ್ ಟ್ರಸ್ಟ್‌ನ ಅಧ್ಯಕ್ಷ ಡಾ.ಎಚ್.ಪಿ.ರಾಜು ತಿಳಿಸಿದರು.ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ದಶಮಾನೋತ್ಸವ ಸಂಭ್ರಮ ಕಾರ್ಯಕ್ರಮದ ಮೂಲಕ ಕಾಲೇಜು ಬೆಳೆದು ಬಂದ ಹಾದಿಯನ್ನು ಪರಿಚಯಿಸುವ ಉದ್ದೇಶವನ್ನು ಹೊಂದಲಾಗಿದ್ದು, ಕಾಲೇಜಿನಲ್ಲಿ ಹೊಸದಾಗಿ ಇನರ್ಮೇಷನ್ ಸೈನ್ಸ್ ಅಂಡ್ ಎಂಜಿನಿಯರಿಂಗ್ ವಿಭಾಗವನ್ನು ಸ್ನಾತಕೋತ್ತರ ಪದವಿ ಎಂ.ಸಿ.ಎ ಕೋರ್ಸ್‌ನ್ನು ಪ್ರಾರಂಭಿಸಲಾಗಿದೆ ಎಂದರು.
ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಮಹಾಸ್ವಾಮಿಗಳು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಆದಿಚುಂಚನಗಿರಿ ಕೊಮ್ಮೇರಹಳ್ಳಿ ಶಾಖಾ ಮಠದ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ ಭಾಗವಹಿಸುವರು ಎಂದರು.ಕಾವೇರಿ ಎಜುಕೇಷನ್ ಅಂಡ್ ರಿಸರ್ಚ್ ಟ್ರಸ್ಟ್‌ನ ಅಧ್ಯಕ್ಷ ಡಾ.ಎಚ್.ಪಿ.ರಾಜು ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಕಾರ್ಯದರ್ಶಿ ಪ್ರೊ.ಟಿ.ನಾಗೇಂದ್ರ ಉಪಸ್ಥಿತರಿರಲಿದ್ದಾರೆ ಎಂದು ವಿವರಿಸಿದರು.
ಕಾಲೇಜಿನ ವಿದ್ಯಾರ್ಥಿಗಳಿಗೆ ಕೇವಲ ಶಿಕ್ಷಣವನ್ನಷ್ಟೇ ಅಲ್ಲದೇ, ಪ್ರತಿಷ್ಠಿತ ಕಂಪನಿಗಳಿಂದ ತರಬೇತಿಯನ್ನು ಕೊಡಿಸಿ ಉದ್ಯೋಗ ದೊರಕಿಸುವ ಕೆಲಸವನ್ನೂ ಮಾಡಲಾಗುತ್ತಿದೆ. ಎರಡನೇ ಸೆಮಿಸ್ಟರ್ ಹಂತದಲ್ಲೇ ೬ ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ಆಯ್ಕೆಯಾಗಿರುವುದು ಸಂಸ್ಥೆಯ ಹೆಗ್ಗಳಿಕೆಯಾಗಿದೆ. ಕಂಪ್ಯೂಟರ್‌ಸೈನ್ಸ್, ಎಲೆಕ್ಟ್ರಾನಿಕ್ ಅಂಡ್ ಕಮ್ಯುನಿಕೇಷನ್, ಸಿವಿಲ್, ಮೆಕ್ಯಾನಿಕಲ್, ಇನ್‌ಫಾರ್‌ಮೇಷನ್ ಸೈನ್ಸ್ ವಿಭಾಗಗಳಿದ್ದು, ಸ್ನಾತಕೋತ್ತರ ಪದವಿ ಎಂಸಿಎ ಕೋರ್ಸ್‌ನ್ನೂ ಆರಂಭಿಸಲಾಗಿದೆ. ಸಿಇಆರ್‌ಟಿ ಟ್ರಸ್ಟ್‌ನಿಂದ ಪದವಿ ಕಾಲೇಜನ್ನೂ ಆರಂಭಿಸಿ ಬಿಸಿಎ ಮತ್ತು ಬಿಕಾಂ ಕೋರ್ಸ್‌ಗಳನ್ನು ನಡೆಸುತ್ತಿರುವುದಾಗಿ ಹೇಳಿದರು.ಮುಂದಿನ ಸಾಲಿನಲ್ಲಿ ಎಲೆಕ್ಟ್ರಾನಿಕ್ ಅಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ಮತ್ತು ರಸಾಯನಶಾಸ್ತ್ರ ವಿಭಾಗದಲ್ಲಿ ಸಂಶೋಧನಾ ಕೇಂದ್ರಗಳನ್ನು ಆರಂಭಿಸಲು ಯೋಜನೆಗಳನ್ನು ರೂಪಿಸಿದ್ದೇವೆ ಎಂದು ನುಡಿದರು.
ಕಾಲೇಜಿನ ಪ್ರಾಂಶುಪಾಲ ಶ್ರೀಕಂಠಪ್ಪ, ಟ್ರಸ್ಟ್‌ನ ಕಾರ್ಯದರ್ಶಿ ಪ್ರೊ.ಟಿ.ನಾಗೇಂದ್ರ ಹಾಜರಿದ್ದರು.