ಸಾರಾಂಶ
ಸೆ.2ರಂದು ಹಮ್ಮಿಕೊಂಡಿರುವ ನಿಡಗಲ್ಲು ಉತ್ಸವಕ್ಕೆ ಎಲ್ಲರೂ ಭಾಗವಹಿಸಬೇಕು ಎಂದು ಶ್ರೀ ವಾಲ್ಮೀಕಿ ಸಂಸ್ಥಾನದ ಶ್ರೀ ಸಂಜಯ್ ಕುಮಾರ್ ಸ್ವಾಮೀಜಿ ಕರೆ ನೀಡಿದರು.
ಪಾವಗಡ: ಸೆ.2ರಂದು ಹಮ್ಮಿಕೊಂಡಿರುವ ನಿಡಗಲ್ಲು ಉತ್ಸವಕ್ಕೆ ಎಲ್ಲರೂ ಭಾಗವಹಿಸಬೇಕು ಎಂದು ಶ್ರೀ ವಾಲ್ಮೀಕಿ ಸಂಸ್ಥಾನದ ಶ್ರೀ ಸಂಜಯ್ ಕುಮಾರ್ ಸ್ವಾಮೀಜಿ ಕರೆ ನೀಡಿದರು.
ತಾಲೂಕಿನ ನಿಡಗಲ್ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮ ನಿಡಗಲ್ಲು ಸಂಸ್ಥಾನದ ಆಶ್ರಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿ ಮಾತನಾಡಿ, ಸೆ,2 ರಂದು ಗ್ರಾಮಸ್ಥರ ಸಹಕಾರ ಹಾಗೂ ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮ, ವಾಲ್ಮೀಕಿ ಜಾಗೃತಿ ವೇದಿಕೆ ವತಿಯಿಂದ ನಿಡಗಲ್ಲು ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದರು.ವಾಲ್ಮೀಕಿ ಜಾಗೃತಿ ವೇದಿಕೆಯ ತಾಲೂಕು ಅಧ್ಯಕ್ಷ ದೇವಲಕರೆ ಲೋಕೇಶ್ ಮಾತನಾಡಿ, ನಿಡಗಲ್ ಗ್ರಾಮದಲ್ಲಿ ಐತಿಹಾಸಿಕ ನಿಡುಗಲ್ಲು ದುರ್ಗದ ಉತ್ಸವವನ್ನು ಸರ್ಕಾರದ ವತಿಯಿಂದ ಆಚರಣೆ ಮಾಡಲು ಒತ್ತಾಯಿಸುತ್ತಿದ್ದು, ಬಾರಿ ಅದ್ದೂರಿಯಾಗಿ ಆಚರಿಸುತ್ತಿದ್ದು, ಉತ್ಸವಕ್ಕೆ ಶಾಸಕರು, ಸಂಸದರು ವಿಧಾನ ಪರಿಷತ್ ಸದಸ್ಯರು, ಮಾಜಿ ಸಚಿವರು, ಮಾಜಿ ಶಾಸಕರು ವಿವಿಧ ಕ್ಷೇತ್ರಗಳ ಗಣ್ಯರು ಆಗಮಿಸಲಿದ್ದಾರೆ. ನಿಡಗಲ್ಲು ಗ್ರಾಮದ ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮದಿಂದ ಗ್ರಾಮದ ಪ್ರಮುಖ ರಾಜ ಬೀದಿಯಲ್ಲಿ ಮೆರವಣಿಗೆಯೊಂದಿಗೆ ಸಾಗಿ ವಿವಿಧ ಕಲಾತಂಡಗಳೊಂದಿಗೆ ವಾದ್ಯ ಮೇಳಗಳೊಂದಿಗೆ ಉತ್ಸವದ ಮೆರವಣಿಗೆ ನಡೆಯುತ್ತದೆ ಎಂದರು.
ಗಿರಿಜಮ್ಮ ಶಿವಣ್ಣ ,ಕರವೇ ಲಕ್ಷ್ಮೀನಾರಾಯಣ ಉಪಸ್ಥಿತರಿದ್ದರು.