ಸಾರಾಂಶ
ಮಾಜಿ ರಾಷ್ಟ್ರಪತಿ, ಶಿಕ್ಷಕ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನ ಪ್ರಯುಕ್ತ ಆಚರಿಸುವ ಶಿಕ್ಷಕರ ದಿನಾಚರಣೆ ಅಂಗವಾಗಿ ಶಾಲಾ ಶಿಕ್ಷಣ ಇಲಾಖೆಯಿಂದ 2025-26ನೇ ಸಾಲಿನ ರಾಯಚೂರು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ, ಶಿಕ್ಷಕರ ದಿನಾಚರಣೆಯು ಸೆ.6ರ ಬೆಳಗ್ಗೆ 10.30ಕ್ಕೆ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರ ಹಮ್ಮಿಕೊಳ್ಳಲಾಗಿದೆ.
ಕನ್ನಡಪ್ರಭ ವಾರ್ತೆ ರಾಯಚೂರು
ಮಾಜಿ ರಾಷ್ಟ್ರಪತಿ, ಶಿಕ್ಷಕ ಡಾ.ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನ ಪ್ರಯುಕ್ತ ಆಚರಿಸುವ ಶಿಕ್ಷಕರ ದಿನಾಚರಣೆ ಅಂಗವಾಗಿ ಶಾಲಾ ಶಿಕ್ಷಣ ಇಲಾಖೆಯಿಂದ 2025-26ನೇ ಸಾಲಿನ ರಾಯಚೂರು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ, ಶಿಕ್ಷಕರ ದಿನಾಚರಣೆಯು ಸೆ.6ರ ಬೆಳಗ್ಗೆ 10.30ಕ್ಕೆ ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರ ಹಮ್ಮಿಕೊಳ್ಳಲಾಗಿದೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಉಮ್ಮಿ ಸಲ್ಮಾ, ದೇವದುರ್ಗದ ದರ್ಬಾರ ಓಣಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಗೋವಿಂದರಾಜ, ಲಿಂಗಸೂಗುರು ತಾಲೂಕಿನ ಹುಲಿಗುಡ್ಡ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕ ಶಿವಯೋಗಿ ಗುಂಜುಟಗಿ, ಮಾನವಿ ತಾಲೂಕಿನ ಲಕ್ಕಂದಿನ್ನಿ ಗ್ರಾಮದ ಅಂಬೇಡ್ಕರ ನಗರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಗುರುಮೂರ್ತಿ ಎಂ.ಜಿ., ರಾಯಚೂರು ತಾಲೂಕಿನ ಕೊರತೀಪ್ಲಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಸುಖಲತಾ ಅವರು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಲಿಂಗಸೂಗೂರು ತಾಲೂಕಿನ ಹೂವಿನಬಾವಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಅಮರೇಗೌಡ ಮಾಲಿ ಪಾಟೀಲ್, ಮಾನವಿ ತಾಲೂಕಿನ ಕವಿತಾಳ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಹಲಿಯಾ ಬೇಗಂ, ಮಾನವಿ ತಾಲೂಕಿನ ರಾಜೋಳ್ಳಿ ಗ್ರಾಮದ ಸರ್ಕಾರಿ ಉನ್ನತೀಕರಿಸದ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಅನ್ವರ, ಸಿಂಧನೂರು ತಾಲೂಕಿನ ಚನ್ನಳ್ಳಿ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ಮುಖ್ಯಶಿಕ್ಷಕ ಅನಂತರಾವ್, ರಾಯಚೂರು ತಾಲೂಕಿನ ಯಕ್ಲಾಸಪೂರಿನ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ನರಸುಬಾಯಿ ಅವರು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಪ್ರೌಢಶಾಲಾ ವಿಭಾಗದಲ್ಲಿ ದೇವದುರ್ಗ ತಾಲೂಕಿನ ಗಾಣಧಾಳ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕರಾದ ಗೋವಿಂದ, ಲಿಂಗಸುಗೂರು ತಾಲೂಕಿನ ಮುದಗಲ್ ಗ್ರಾಮದ ಬಾಲಕಿಯರ ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕರಾದ ಅಮರೇಗೌಡ ಅಗಸಿಮುಂದಿನ, ಮಾನವಿ ತಾಲೂಕಿನ ಕೋನಾಪೂರಪೇಟ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ಸಂಜೀವಪ್ಪ ಕೆ., ಸಿಂಧನೂರು ತಾಲೂಕಿನ ತಿಡಿಗೋಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕ ನಾಗಪ್ಪ, ರಾಯಚೂರು ತಾಲೂಕಿನ ಗುಂಜಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕಿ ರಾಧಾ ಕೆ. ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಆಯ್ಕೆಯಾದ ಎಲ್ಲ ಶಿಕ್ಷಕರಿಗೆ ವಿವಿಧ ಗಣ್ಯರಿಂದ ಸನ್ಮಾನಿಸಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಆಡಳಿತ ವಿಭಾಗದ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.