ಸಾರಾಂಶ
ಕನ್ನಡಪ್ರಭ ವಾರ್ತೆ, ತುಮಕೂರುಶ್ರೀ ಸಿದ್ದಗಂಗಾ ತಾಂತ್ರಿಕ ಮಹಾವಿದ್ಯಾಲಯದ 16ನೇ ಪದವಿ ಪ್ರದಾನ ಸಮಾರಂಭ ನಗರದ ಎಸ್‌ಐಟಿ ಕಾಲೇಜಿನ ಆವರಣದಲ್ಲಿ ಸೆ. 6 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಸಿದ್ದಗಂಗಾ ಮಠದ ಹಿರಿಯ ಶ್ರೀಗಳಾದ ಲಿಂ. ಡಾ. ಶಿವಕುಮಾರ ಸ್ವಾಮೀಜಿಯವರ ಕೃಪಾಶೀರ್ವಾದ ಹಾಗೂ ಸಿದ್ದಗಂಗಾ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಸಿದ್ದಲಿಂಗ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ 16ನೇ ಪದವಿ ಪ್ರದಾನ ಸಮಾರಂಭ ಜರುಗಲಿದ್ದು, ಒಟ್ಟು 820 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದು ಶ್ರೀ ಸಿದ್ದಗಂಗಾ ಎಜ್ಯುಕೇಶನ್ ಸೊಸೈಟಿಯ ಜಂಟಿ ಕಾರ್ಯದರ್ಶಿ ಹಾಗೂ ಎಸ್‌ಐಟಿ ಸಿಇಓ ಡಾ. ಶಿವಕುಮಾರಯ್ಯ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.16ನೇ ಪದವಿ ಪ್ರದಾನ ಸಮಾರಂಭದಲ್ಲಿ ಎಂ.ಟೆಕ್ 27 ಅಭ್ಯರ್ಥಿಗಳು, ಬಿ.ಇ. ವಿಭಾಗಗಳ 764 ಅಭ್ಯರ್ಥಿಗಳು, ಬಿಆರ್ಕ್ 29 ಅಭ್ಯರ್ಥಿಗಳು ಪದವಿ ಪ್ರಮಾಣ ಪತ್ರಗಳನ್ನು ಪಡೆಯಲಿದ್ದಾರೆ ಎಂದರು. ಮುಖ್ಯ ಅತಿಥಿಗಳಾಗಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕ ಡಾ. ಡಿ. ಕೆ. ಸುನಿಲ್ ಭಾಗವಹಿಸಿ ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪದಕ ವಿತರಣೆ ಮತ್ತು ಪದವಿ ಪ್ರದಾನ ಸಮಾರಂಭದ ಭಾಷಣ ಮಾಡಲಿದ್ದಾರೆ ಎಂದರು. ಸಿದ್ದಗಂಗಾ ವಿದ್ಯಾಸಂಸ್ಥೆಯ ಮತ್ತು ಎಸ್.ಐ.ಟಿ. ಆಡಳಿತ ಮಂಡಳಿಯ ಅಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿ ಪದವಿ ಪ್ರಧಾನ ಸಮಾರಂಭದ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿ, ಅಕಾಡೆಮಿಕ್ ಕೌನ್ಸಿಲ್ ಸದಸ್ಯರು ಮತ್ತು ಉದ್ಯಮ ಮತ್ತು ಶಿಕ್ಷಣ ಕ್ಷೇತ್ರದ ಆಹ್ವಾನಿತರು, ವಿದ್ಯಾರ್ಥಿಗಳು ಮತ್ತು ಪದವೀಧರರ ಪೋಷಕರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.ಗಿರೀಶ್‌ಗೆ 5 ಚಿನ್ನದ ಪದಕ ನಮ್ಮ ಸಂಸ್ಥೆ ಮತ್ತು ದಾನಿಗಳಿಂದ 64 ಚಿನ್ನದ ಪದಕಗಳನ್ನು ಸ್ಥಾಪಿಸಲಾಗಿದೆ. ಬಿ.ಇ. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದಲ್ಲಿ ಎಂ.ಎಲ್. ಗಿರೀಶ್, ಸಿ.ಜಿ.ಪಿ.ಎ. 9.82 ಗಳಿಸಿ ಅಗ್ರಸ್ಥಾನ ಪಡೆದಿದ್ದು, ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಚಿನ್ನದ ಪದಕವನ್ನು ಸ್ವೀಕರಿಸಲಿದ್ದಾರೆ. ಜತೆಗೆ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ ವಿಭಾಗದಲ್ಲಿ ಅಗ್ರಸ್ಥಾನ ಪಡೆದಿರುವುದಕ್ಕಾಗಿ ಇನ್ನೂ ಐದು ಚಿನ್ನದ ಪದಕಗಳನ್ನು ಸ್ವೀಕರಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.ಜಾಗತಿಕ ಆರ್ಥಿಕ ಹಿಂಜರಿತದ ಹೊರತಾಗಿಯೂ ಎಸ್‌ಐಟಿ ಕ್ಯಾಂಪಸ್ ನೇಮಕಾತಿ ಡ್ರೆೈವ್‌ಗಳಿಗಾಗಿ 250ಕ್ಕೂ ಹೆಚ್ಚು ಕಂಪೆನಿಗಳು ಭಾಗವಹಿಸಿದ್ದವು. ಈ ಪರಿಣಾಮವಾಗಿ 2024-25ನೇ ಸಾಲಿಗೆ 1060ಕ್ಕೂ ಹೆಚ್ಚು ಉದ್ಯೋಗ ಅವಕಾಶಗಳು ಒದಗಿ ಬಂದಿದ್ದು, 140೦ ಕ್ಕೂ ಹೆಚ್ಚು ವಿದ್ಯಾರ್ಥಿಗಳು ೧೦ ಲಕ್ಷ ಮತ್ತು ಅದಕ್ಕಿಂತ ಹೆಚ್ಚಿನ ವೇತನ ಪ್ಯಾಕೇಜ್‌ಗಳನ್ನು ಪಡೆದಿದ್ದಾರೆ. ಎಲ್ಲಾ ವಿಭಾಗಗಳಿಂದ ಒಟ್ಟು 350 ವಿದ್ಯಾರ್ಥಿಗಳು ಪ್ರತಿಷ್ಠಿತ ಸಂಸ್ಥೆಗಳಿಂದ ಪರಿಹಾರದ ಇಂಟರ್ನ್ಶಿಪ್ ಸಹಾಯ ಧನ ರೂಪದಲ್ಲಿ ರೂ. 15,000 ರಿಂದ ರೂ.1.00 ಲಕ್ಷದವರೆಗಿನ ಅವಕಾಶಗಳನ್ನು ಪಡೆದಿದ್ದಾರೆ ಎಂದು ಹೇಳಿದರು.2025-26 ಸಾಲಿನ ನೇಮಕಾತಿಗಳು ಸಹ ಭರದಿಂದ ಆರಂಭವಾಗಿವೆ. 7ನೇ ಸೆಮಿಸ್ಟರ್ ಪ್ರಾರಂಭವಾಗುವ ಮೊದಲೇ, 50 ಕಂಪೆನಿಗಳು ಕ್ಯಾಂಪಸ್‌ಗೆ ಭೇಟಿ ನೀಡಿ, ೧೪೦ಕ್ಕೂ ಅಧಿಕ ಆಫರ್‌ಗಳನ್ನು ನೀಡಿವೆ ಎಂದರು.ಪತ್ರಿಕಾಗೋಷ್ಠಿಯಲ್ಲಿ ಎಸ್‌ಐಟಿ ಪ್ರಾಂಶುಪಾಲ ಪ್ರೊ. ದಿನೇಶ್ ಎಸ್.ವಿ. ಮತ್ತಿತರರು ಉಪಸ್ಥಿತರಿದ್ದರು.