ಛತ್ರಪತಿ ಶಿವಾಜಿ ಮಹರಾಜರ 399ನೇ ಜಯಂತಿ ಕಾರ್ಯಕ್ರಮ ಫೆ.19ರ ಗುರುವಾರ ಪಟ್ಟಣದ ಗುರುಭವನದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಎಂದು ಛತ್ರಪತಿ ಶಿವಾಜಿ ಮಹರಾಜರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನೆಲಹೊನ್ನೆ ದೇವರಾಜ್ ಹೇಳಿದ್ದಾರೆ.

- ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರಿಗೆ ಆಹ್ವಾನ ಪತ್ರಿಕೆ

- - -

ಹೊನ್ನಾಳಿ: ಛತ್ರಪತಿ ಶಿವಾಜಿ ಮಹರಾಜರ 399ನೇ ಜಯಂತಿ ಕಾರ್ಯಕ್ರಮ ಫೆ.19ರ ಗುರುವಾರ ಪಟ್ಟಣದ ಗುರುಭವನದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಎಂದು ಛತ್ರಪತಿ ಶಿವಾಜಿ ಮಹರಾಜರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನೆಲಹೊನ್ನೆ ದೇವರಾಜ್ ಹೇಳಿದರು.

ಛತ್ರಪತಿ ಶಿವಾಜಿ ಮಹಾರಾಜರ 399ನೇ ಜಯಂತಿ ಕಾರ್ಯಕ್ರಮಕ್ಕೆ ಆಗಮಿಸಲು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರಿಗೆ ಅಹ್ವಾನ ಪತ್ರಿಕೆ ನೀಡಿ ಅವರು ಮಾತನಾಡಿದರು. ಗುರುವಾರ ಬೆಳಗ್ಗೆ ತಾಲೂಕು ಕಚೇರಿಯಿಂದ ಟಿ.ಬಿ. ವೃತ್ತದ ಗುರು ಭವನದವರೆಗೆ ಶಿವಾಜಿ ಮಹರಾಜರ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದೆ. ಬಳಿಕ ಗುರು ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ಮರಾಠ ಸಮಾಜದ ಅಧ್ಯಕ್ಷ ಎ.ಆರ್. ಚಂದ್ರಶೇಖರ್ ವಹಿಸುವರು. ಉದ್ಘಾಟನೆಯನ್ನು ಶಾಸಕ ಡಿ.ಜಿ.ಶಾಂತನಗೌಡ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಬಯಲುಸೀಮೆ ಅಭಿವೃದ್ಧಿ ನಿಗಮ ಮಂಡಲಿ ಅಧ್ಯಕ್ಷ ಎಚ್.ಬಿ.ಮಂಜಪ್ಪ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಹೊನ್ನಾಳಿ ಉಪವಿಭಾಗಾಧಿಕಾರಿ ಎಚ್.ಬಿ. ಚನ್ನಪ್ಪ, ಸಂಘದ ಅಧ್ಯಕ್ಷ ನೆಲಹೊನ್ನೆ ದೇವರಾಜ್, ತಹಸೀಲ್ದಾರ್ ರಾಜೇಶ್‌ಕುಮಾರ್, ಪೊಲಿಸ್‌ ಇನ್‌ಸ್ಪೆಕ್ಟರ್‌ ಸುನೀಲ್‌ಕುಮಾರ್ ಭಾಗವಹಿಸುವರು ಎಂದು ತಿಳಿಸಿದರು.

ಪಿಡಿಒ ಶಿವಾಜಿ ರಾವ್ ಬಿಸ್ಲೆ ಉಪನ್ಯಾನ ನೀಡಲಿದ್ದಾರೆ. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ. ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕಿನ ಸಮಾಜ ಬಾಂಧವರು ಹಾಗೂ ಇತರ ಸಮಾಜಗಳ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಈ ಸಂದರ್ಭ ಬಿಜೆಪಿ ನಿಕಟಪೂರ್ವ ತಾಲೂಕು ಅಧ್ಯಕ್ಷ ಜೆ.ಕೆ. ಸುರೇಶ್, ಹರೀಶ್, ಸುಭಾಷ್‌ ಹಾಗೂ ಅಶೋಕ್ ಇದ್ದರು.

- - -

-17ಎಚ್.ಎಲ್.ಐ1.ಜೆಪಿಜಿ:

ಛತ್ರಪತಿ ಶಿವಾಜಿ ಮಹರಾಜರ 399 ನೇ ಜಯಂತಿಯಲ್ಲಿ ಭಾಗವಹಿಸಲು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಅವರಿಗೆ ಆಹ್ವಾನ ಪತ್ರಿಕೆ ನೀಡಲಾಯಿತು. ಸಂಘದ ಅಧ್ಯಕ್ಷ ನೆಲಹೊನ್ನೆ ದೇವರಾಜ್ ಮತ್ತಿತರ ಸದಸ್ಯರು ಇದ್ದರು.