ಸಾರಾಂಶ
ಪಟ್ಟಣದ ಪ್ರತಿಷ್ಠಿತ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ನಿಯಮಿತದ ೨೦೨೩-೨೪ ನೇ ಸಾಲಿನ ೨೭ನೇ ವಾರ್ಷಿಕ ಮಹಾಸಭೆ ಸೆ.8ರಂದು ಬೆಳಿಗ್ಗೆ 11 ಗಂಟೆಗೆ ಬೀಳಗಿಯ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯಲಿದೆ ಎಂದು ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ನ ಸಂಸ್ಥಾಪಕ ಅಧ್ಯಕ್ಷರು, ಮಾಜಿ ಸಚಿವ ಎಸ್.ಆರ್.ಪಾಟೀಲ ತಿಳಿಸಿದರು.
ಕನ್ನಡಪ್ರಭ ವಾರ್ತೆ ಬೀಳಗಿ
ಪಟ್ಟಣದ ಪ್ರತಿಷ್ಠಿತ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ನಿಯಮಿತದ ೨೦೨೩-೨೪ ನೇ ಸಾಲಿನ ೨೭ನೇ ವಾರ್ಷಿಕ ಮಹಾಸಭೆ ಸೆ.8ರಂದು ಬೆಳಿಗ್ಗೆ 11 ಗಂಟೆಗೆ ಬೀಳಗಿಯ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯಲಿದೆ ಎಂದು ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ನ ಸಂಸ್ಥಾಪಕ ಅಧ್ಯಕ್ಷರು, ಮಾಜಿ ಸಚಿವ ಎಸ್.ಆರ್.ಪಾಟೀಲ ತಿಳಿಸಿದರು.ತಾಲೂಕಿನ ಬಾಡಗಂಡಿ ಗ್ರಾಮದ ಎಸ್.ಆರ್.ಪಾಟೀಲ ಮೆಡಿಕಲ್ ಕಾಲೇಜು ಸಭಾಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೧೯೯೭ರಲ್ಲಿ ಕೇವಲ ₹೧೧.೬೦ ಲಕ್ಷಗಳ ಶೇರು ಬಂಡವಾಳದೊಂದಿಗೆ ವಿಜಯಪುರದ ಸಿದ್ದೇಶ್ವರ ಮಹಾಸ್ವಾಮಿಗಳ ಅಮೃತ ಹಸ್ತದಿಂದ ಆರಂಭಗೊಂಡಿದ್ದ ಬ್ಯಾಂಕ್ ಇಂದು ₹೮೨೬ ಕೋಟಿ ದುಡಿಯುವ ಬಂಡವಾಳ ಹೊಂದಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ೧೮ ಶಾಖೆಗಳನ್ನು ಹೊಂದಿದ್ದು, ಪ್ರಸಕ್ತ ಸಾಲಿನಲ್ಲಿ ₹೨.೬೫ ಕೋಟಿ ನಿವ್ವಳ ಲಾಭಗಳಿಸುವಲ್ಲಿ ಯಶಸ್ವಿಯಾಗಿದೆ. ಸದ್ಯ ಬ್ಯಾಂಕ್ ೧೬೨೭೩ ಜನ ಸದಸ್ಯರನ್ನು ಹೊಂದಿ ₹೧೯.೫೨ ಕೋಟಿ ಶೇರು ಬಂಡವಾಳ ಹೊಂದಿದೆ ಎಂದರು.
ಬ್ಯಾಂಕಿನ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿಯವರ ನಿರಂತರ ಶ್ರಮದಿಂದ ಬ್ಯಾಂಕ್ ಇಷ್ಟು ಬೃಹತ್ ಮಟ್ಟದಲ್ಲಿ ಬೆಳೆಯಲು ಸಾಧ್ಯವಾಗಿದೆ. ಸಾರ್ವಜನಿಕ ಕ್ಷೇತ್ರದಲ್ಲಿ ಮೊದಲ ಸಹಕಾರಿ ಸಂಸ್ಥೆಯಾಗಿರುವ ಬ್ಯಾಂಕ್ ಬರುವ ತಿಂಗಳು ಬ್ಯಾಂಕಿನ ಕಟ್ಟಡದ ರಜತ ಮಹೋತ್ಸವ ಆಚರಣೆ ಅದ್ಧೂರಿಯಾಗಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೇ ಬ್ಯಾಂಕಿನ ಇನ್ನು ಹಲವು ಜಿಲ್ಲೆಗಳಲ್ಲಿ ಶಾಖೆಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ. ಬ್ಯಾಂಕಿನ ಗ್ರಾಹಕರು, ಹಿತೈಸಿಗಳು,ಸದಸ್ಯರು ಮತ್ತು ಎಲ್ಲ ಶಾಖೆಗಳ ಸಿಬ್ಬಂದಿ ಆಡಳಿತ ಮಂಡಳಿ ಸದಸ್ಯರು ವಾರ್ಷಿಕ ಮಹಾಸಭೆಗೆ ಆಗಮಿಸಬೇಕು ಎಂದು ವಿನಂತಿಸಿದರು.ಈ ಸಂದರ್ಭದಲ್ಲಿ ಬ್ಯಾಂಕಿನ ಉಪಾಧ್ಯಕ್ಷ ಸತ್ಯಪ್ಪ ಮೇಲ್ನಾಡ, ನಿರ್ದೇಶಕ ಹೇಮಾದ್ರಿ ಕೊಪ್ಪಳ, ಕೆ.ಎಸ್.ಪತ್ರಿ, ಎಸ್.ಎ.ನೀರಲಗಿ, ಬಿ.ಎಸ್.ಮೊಖಾಶಿ, ಜಿ.ಎಸ್.ಕೆರೂರ, ಎಂ.ಎಲ್.ಕೆಂಪಲಿಂಗಣ್ಣವರ, ಬ್ಯಾಂಕಿನ ಪ್ರದಾನ ವ್ಯವಸ್ಥಾಪಕಾರದ ಎಸ್ ಬಿ ಕುರ್ತಕೋಟಿ ಸೇರಿದಂತೆ ಇತರರು ಇದ್ದರು.