ಸಾರಾಂಶ
ಏ.೧೨ರಂದು ಶನಿವಾರ ಮುಂಜಾನೆ ಹುಣ್ಣಿಮೆ ಅಂಗವಾಗಿ ಬೆಟ್ಟದ ಮೇಲೆ ಧ್ವಜಾರೋಹಣ, ಅಂಕುರಾರ್ಪಣೆ, ನೂರೊಂದೆಡೆ ಸೇವೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಲಿದೆ. ಸಂಜೆ ೭ ಗಂಟೆಗೆ ಬಸವೇಶ್ವರಸ್ವಾಮಿ ಉತ್ಸವ, ಗದ್ದುಗೆ ಮಂಟಪದಲ್ಲಿ ಸಾಮ್ರಾಜ್ಯೋತ್ಸವ, ಹುಲಿವಾಹನ, ಸೂರ್ಯಮಂಡಲೋತ್ಸವ, ಬೆಳ್ಳಿಪಲ್ಲಕ್ಕಿ ಉತ್ಸವ, ಬಿಲ್ವ ವೃಕ್ಷೆತ್ಸವ, ಹರಕೆ ತೀರಿಸುವವರಿಗೆ ಬಾಯಿಬೀಗ, ಚಂದ್ರ ಮಂಡಲೋತ್ಸವ, ಅಗ್ನಿಕುಂಡ ಸೇವೆ ಹಾಗೂ ಕೆಂಚಮ್ಮನವರ ಸನ್ನಿಧಿಯಲ್ಲಿ ಗುಗ್ಗಳಸೇವೆ ನೆರವೇರಲಿದೆ.
ಅರಸೀಕೆರೆ: ತಾಲೂಕಿನ ಇತಿಹಾಸ ಪ್ರಸಿದ್ದ ಯಾದಾಪುರ ಶ್ರೀಜೇನುಕಲ್ಲು ಸಿದ್ದೇಶ್ವರರಸ್ವಾಮಿ ರಥೋತ್ಸವವು ಏ.೧೨ರ ಶನಿವಾರದಿಂದ ೧೪ ಸೋಮವಾರ ಸಂಜೆಯವರೆಗೆ ಜರುಗಲಿದೆ.
ಏ.೧೨ರಂದು ಶನಿವಾರ ಮುಂಜಾನೆ ಹುಣ್ಣಿಮೆ ಅಂಗವಾಗಿ ಬೆಟ್ಟದ ಮೇಲೆ ಧ್ವಜಾರೋಹಣ, ಅಂಕುರಾರ್ಪಣೆ, ನೂರೊಂದೆಡೆ ಸೇವೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ನೆರವೇರಲಿದೆ. ಸಂಜೆ ೭ ಗಂಟೆಗೆ ಬಸವೇಶ್ವರಸ್ವಾಮಿ ಉತ್ಸವ, ಗದ್ದುಗೆ ಮಂಟಪದಲ್ಲಿ ಸಾಮ್ರಾಜ್ಯೋತ್ಸವ, ಹುಲಿವಾಹನ, ಸೂರ್ಯಮಂಡಲೋತ್ಸವ, ಬೆಳ್ಳಿಪಲ್ಲಕ್ಕಿ ಉತ್ಸವ, ಬಿಲ್ವ ವೃಕ್ಷೆತ್ಸವ, ಹರಕೆ ತೀರಿಸುವವರಿಗೆ ಬಾಯಿಬೀಗ, ಚಂದ್ರ ಮಂಡಲೋತ್ಸವ, ಅಗ್ನಿಕುಂಡ ಸೇವೆ ಹಾಗೂ ಕೆಂಚಮ್ಮನವರ ಸನ್ನಿಧಿಯಲ್ಲಿ ಗುಗ್ಗಳಸೇವೆ ನೆರವೇರಲಿದೆ.ಏ.೧೩ರಂದು ಭಾನುವಾರ ಬೆಳಗ್ಗೆ ಮಹಾಮಂಗಳಾರತಿ ನಂತರ ೭ರಿಂದ ೮ ಗಂಟೆಯವರೆಗೆ ಮಹಾದಿವ್ಯ ರಥೋತ್ಸವ ನಡೆಯಲಿದೆ. ಬಳಿಕ ಉಯ್ಯಾಲೆ ಸೇವೆಯೊಂದಿಗೆ ಮಹಾಮಂಗಳಾರತಿ ಮಾಡಲಾಗುವುದು. ಏ.೧೪ರ ಸೋಮವಾರ ಮಧ್ಯಾಹ್ನ ೨ ಗಂಟೆಯಿಂದ ಸ್ವಾಮಿಯವರ ಪಲ್ಲಕ್ಕಿ ಉತ್ಸವ, ಜೋಳಿಗೆ ಸೇವೆ ನಡೆಯಲಿದೆ. ಜಾತ್ರೆಗೆ ಆಗಮಿಸುವ ಭಕ್ತಾದಿಗಳಿಗಾಗಿ ಜಾತ್ರಾ ದಿನಗಳಂದು ದಿನವಿಡೀ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿದೆ.