ರಾಮನಗರ: ನಗರಸಭೆ ವತಿಯಿಂದ ಅದ್ದೂರಿಯಾಗಿ ರೇಷ್ಮೆನಾಡ ಕನ್ನಡ ಹಬ್ಬದ ಸಮಾರಂಭವನ್ನು ಡಿ.22ರಂದು ಸಂಜೆ 5ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ತಿಳಿಸಿದರು.

ರಾಮನಗರ: ನಗರಸಭೆ ವತಿಯಿಂದ ಅದ್ದೂರಿಯಾಗಿ ರೇಷ್ಮೆನಾಡ ಕನ್ನಡ ಹಬ್ಬದ ಸಮಾರಂಭವನ್ನು ಡಿ.22ರಂದು ಸಂಜೆ 5ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಧ್ಯಾಹ್ನ 3 ಗಂಟೆಗೆ ಮಿನಿ ವಿಧಾನಸೌಧದಿಂದ ನಗರಸಭೆ ಪ್ರಗತಿ ಕುರಿತ ಆಕರ್ಷಕ ಸ್ತಬ್ಧಚಿತ್ರಗಳ ಮೆರವಣಿಗೆ ಪ್ರಾರಂಭವಾಗುತ್ತದೆ. ಮಡಿಕೇರಿಯ ಹೆಸರಾಂತ ಸ್ತಬ್ಧ ಚಿತ್ರವಾದ ಭುವನೇಶ್ವರಿ ದೇವಿಯ ಹಾಗೂ ಜಾನಪದ ಕಲಾಮೇಳಗಳ ವೈಭವಯುತ ಮೆರವಣಿಗೆ ನಡೆಯಲಿದೆ. ಸಂಜೆ 5 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹೆಸರಾಂತ ಚಲನಚಿತ್ರ ಸಂಗೀತ ನಿರ್ದೇಶಕರಾದ ಗುರುಕಿರಣ್ ಮತ್ತು ತಂಡದವರಿಂದ ರೇಷ್ಮೆನಾಡ ಕನ್ನಡ ಹಬ್ಬದ ಸಂಗೀತ ಸಂಜೆಯನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗರೆಡ್ಡಿ ಉಪಸ್ಥಿತಿ ವಹಿಸುವರು. ಶಾಸಕರಾದ ಇಕ್ಬಾಲ್‌ಹುಸೇನ್ ಅಧ್ಯಕ್ಷತೆ ವಹಿಸಲಿರುವ ಕಾರ್ಯಕ್ರಮದಲ್ಲಿ ಮಾಜಿ ಸಭಾಪತಿ ಕೆ.ಆರ್.ರಮೇಶ್ ಕುಮಾರ್ ಮುಖ್ಯ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ಪುಸ್ತಕ ಮಳಿಗೆ ಉದ್ಘಾಟಿಸಲಿದ್ದು, ಶಾಸಕರಾದ ಎಚ್.ಸಿ.ಬಾಲಕೃಷ್ಣ, ಸಿ.ಪಿ.ಯೋಗೇಶ್ವರ್, ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್ ಮೆರವಣಿಗೆಗೆ ಚಾಲನೆ ನೀಡುವರು. ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರು ಗೌರವ ಉಪಸ್ಥಿತಿ ವಹಿಸಲಿದ್ದು, ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯ ಅವರು ಕೆಂಗಲ್ ಹನುಮಂತಯ್ಯ ಪ್ರಶಸ್ತಿ ಪ್ರಧಾನ ಮಾಡುವರು. ನಗರಸಭೆ ಅಧ್ಯಕ್ಷರಾದ ಕೆ. ಶೇಷಾದ್ರಿ (ಶಶಿ) ಅವರು ಪ್ರಾಸ್ತಾವಿಕ ನುಡಿಗಳನ್ನಾಡುವರು.

ಈ ಸಮಾರಂಭಕ್ಕೆ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು, ಸಾಹಿತಿಗಳು, ಲೇಖಕರು, ಶಾಲಾ ಕಾಲೇಜುಗಳ ಮುಖ್ಯಸ್ಥರು, ಉಪನ್ಯಾಸಕರು, ಶಿಕ್ಷಕರು, ರೈತರು, ಕಾರ್ಮಿಕರು, ವರ್ತಕರು, ಆಟೋಚಾಲಕರು, ಚರ್ಚ್, ಮಸೀದಿ, ದೇವಸ್ಥಾನಗಳ ಸಮಿತಿ, ವಿವಿಧ ಕ್ಷೇತ್ರಗಳ ಗಣ್ಯರು, ಕನ್ನಡಪರ ಹೋರಾಟಗಾರರು ಹಾಗೂ ಜಿಲ್ಲೆಯ ನಾಗರೀಕರು ಭಾಗವಹಿಸಿ ಕಾರ್ಯಕ್ರಮ ವನ್ನು ಯಶಸ್ವಿಗೊಳಿಸುವಂತೆ ಕೆ.ಶೇಷಾದ್ರಿ (ಶಶಿ) ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ನಗರಸಭೆ ಉಪಾಧ್ಯಕ್ಷೆ ಆಯಿಷಾಬಾನು, ಸ್ಥಾಯಿ ಸಮಿತಿ ಅಧ್ಯಕ್ಷ ಪೈರೋಜ್‌ಪಾಷಾ, ಸದಸ್ಯರಾದ ಬಿ.ಸಿ.ಪಾರ್ವತಮ್ಮ, ಸೋಮಶೇಖರ್, ಪವಿತ್ರ, ನಿಜಾಂಷರೀಪ್, ಮಂಜುನಾಥ್, ರಮೇಶ್, ಗ್ಯಾಬ್ರಿಯಲ್, ಜಯಲಕ್ಷ್ಮಮ್ಮ, ಮಜದ್ ಷಹ, ಸಮದ್, ಗೋವಿಂದರಾಜು, ನಾಗಮ್ಮ, ಕರ್ನಾಟಕ ಪೌರ ಸೇವಾ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ನಾಗರಾಜು, ನಗರಸಭೆ ಮ್ಯಾನೇಜರ್ ರೇಖಾ ಇತರರಿದ್ದರು.ಬಾಕ್ಸ್ ..........

ಲಿಂಗಪ್ಪನವರಿಗೆ ಪೌರ ಸನ್ಮಾನ

ರೇಷ್ಮೆನಾಡ ಕನ್ನಡ ಹಬ್ಬದಲ್ಲಿ ಮಾಜಿ ಶಾಸಕರು, ರಾಜಕೀಯ ಮುತ್ಸದ್ಧಿಗಳಾದ ಸಿ.ಎಂ.ಲಿಂಗಪ್ಪರವರಿಗೆ ನಾಗರಿಕ ಸನ್ಮಾನ ಮಾಡಲಾಗುವುದು. ಇದಕ್ಕೂ ಮುನ್ನಾ ಶ್ರೀ ಭುವನೇಶ್ವರಿ ರಥ ಮೆರವಣಿಗೆ, ವಸ್ತು ಪ್ರದರ್ಶನ, ಪ್ರತಿಭಾ ಪುರಸ್ಕಾರ, ಪ್ರಭಂದಸ್ಪರ್ಧೆ ವಿಜೇತರಿಗೆ ಪುರಸ್ಕಾರ, ದಸರಾ ಮಾದರಿ ವಿದ್ಯುತ್ ಅಲಂಕಾರ, ಜನಪದ ಕಲಾಮೇಳ, ಕನ್ನಡ ಪುಸ್ತಕ ಮಾರಾಟ ಮಳಿಗೆ, ಸ್ಥಬ್ದಚಿತ್ರಗಳು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 15 ಸಾಧಕರಿಗೆ ಕೆಂಗಲ್ ಹನುಮಂತಯ್ಯ ಸ್ಮರಣಾರ್ಥ ಪ್ರಶಸ್ತಿ ಪ್ರದಾನ ನಡೆಯಲಿದೆ.19ಕೆಆರ್ ಎಂಎನ್ 2.ಜೆಪಿಜಿ

ರಾಮನಗರ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಉಪಾಧ್ಯಕ್ಷೆ ಆಯಿಷಾಬಾನು, ಸ್ಥಾಯಿ ಸಮಿತಿ ಅಧ್ಯಕ್ಷ ಪೈರೋಜ್‌ಪಾಷಾ, ಸದಸ್ಯರಾದ ಬಿ.ಸಿ.ಪಾರ್ವತಮ್ಮ, ಸೋಮಶೇಖರ್, ಪವಿತ್ರ ಇತರರಿದ್ದರು.