ನಾಳೆ ಮಹಾಂತಶ್ರೀ ಪ್ರಶಸ್ತಿ ಪ್ರದಾನ, ಜಾನಪದ ಸಂಭ್ರಮ

| Published : Mar 16 2024, 01:48 AM IST

ಸಾರಾಂಶ

ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ ಗೋನಾಳ ಪ್ರತಿಷ್ಠಾನ,ಪ್ರತಿಭಾ ಸುಗಮ ಸಂಗೀತ ಸಂಸ್ಥೆಯ 14ನೇ ವಾರ್ಷಿಕೋತ್ಸವ ನಿಮಿತ್ತ ಮಾ.17 ಭಾನುವಾರ ಸ್ಥಳೀಯ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮಹಾಂತಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಜಾನಪದ ಸಂಭ್ರಮವನ್ನು ಆಯೋಜಿಸಲಾಗಿದೆ.

ರಾಯಚೂರು: ಮಾತೋಶ್ರೀ ಮಹಾಂತಮ್ಮ ಶಿವಬಸ್ಸಪ್ಪ ಗೋನಾಳ ಪ್ರತಿಷ್ಠಾನ,ಪ್ರತಿಭಾ ಸುಗಮ ಸಂಗೀತ ಸಂಸ್ಥೆಯ 14ನೇ ವಾರ್ಷಿಕೋತ್ಸವ ನಿಮಿತ್ತ ಮಾ.17 ಭಾನುವಾರ ಸ್ಥಳೀಯ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಮಹಾಂತಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಜಾನಪದ ಸಂಭ್ರಮವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ ಡಾ.ಶರಣಪ್ಪ ಗೋನಾಳ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗ್ಗೆ 10:30ಕ್ಕೆ ನಡೆಯಲಿರುವ ಸಮಾರಂಭದ ಸಾನಿಧ್ಯವನ್ನು ಇಲಕಲ್ ಚಿತ್ತರಗಿ ಸಂಸ್ಥಾನ ಮಠದ ಶ್ರೀಗುರು ಮಹಾಂತ ಸ್ವಾಮಿಗಳು, ಚಿಕ್ಕಸೂಗೂರು ಚೌಕಿಮಠದ ಡಾ.ಸಿದ್ಧಲಿಂಗ ಸ್ವಾಮೀಜಿ ಅವರು ವಹಿಸಲಿದ್ದು, ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಬೋಸರಾಜು ಉದ್ಘಾಟನೆ ನೆರವೇರಿಸಲಿದ್ದಾರೆ. ಅಧ್ಯಕ್ಷತೆ ನಗರ ಶಾಸಕ ಡಾ.ಶಿವರಾಜ್ ಪಾಟೀಲ್‌ವಹಿಸಲಿದ್ದಾರೆ. ವಿವಿಧ ಸಂಘ-ಸಂಸ್ಥೆಗಳು, ಸಂಘಟನೆಗಳ ಅಧ್ಯಕ್ಷರುಗಳು, ಸಾಹಿತಿಗಳು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಹೈಕೋರ್ಟ್‌ನ ವಿಶ್ರಾಂತ ನ್ಯಾಯಧೀಶ ಅರಳಿ ನಾಗರಾಜ ಅವರಿಗೆ ವಿಜಯ ಮಹಾಂತ ಅನುಗ್ರಹ ಪ್ರಶಸ್ತಿ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿ ಗೌರವಿಸಲಾಗುತ್ತಿದೆ ಎಂದರು.

ಸಂಸ್ಥೆ ಪ್ರಧಾನ ಕಾರ್ಯದರ್ಶಿ ಪ್ರತಿಭಾ ಗೋನಾಳ ಮಾತನಾಡಿ, ಸಂಜೆ 6:30ಕ್ಕೆ ನಡೆಯಲಿರುವ ಜಾನಪದ ಸಂಭ್ರಮದಲ್ಲಿ ಸಂಗೀತ ಹಾಗೂ ಹಾಸ್ಯಮಯ ಕಾರ್ಯಕ್ರಮದ ಸಾನಿಧ್ಯವನ್ನು ಸೋಮವಾರಪೇಟೆ ಹಿರೇಮಠದ ಅಭಿನವ ರಾಚೋಟಿ ವೀರಶಿವಾಚಾರ್ಯ ಸ್ವಾಮಿಗಳುವಹಿಸಲಿದ್ದು, ಉದ್ಘಾಟನೆಯನ್ನು ಮಾಜಿ ಶಾಸಕ ಎ.ಪಾಪರೆಡ್ಡಿ ಹಾಗೂ ಅಧ್ಯಕ್ಷತೆಯನ್ನು ಗ್ರಾಮೀಣ ಶಾಸಕ ಬಸವನಗೌಡ ದದ್ದಲ್ ಅವರು ವಹಿಸಲಿದ್ದಾರೆ. ಮುಖಂಡರಾದ ಮಹಾಂತೇಶ ಪಾಟೀಲ್ ಅತ್ತನೂರು, ಎ.ವಸಂತ ಕುಮಾರ ಸೇರಿದಂತೆ ಹಲವಾರು ಪಾಲ್ಗೋಳಲಿದ್ದಾರೆ ಎಂದು ವಿವರಿಸಿದರು.