ಸಾರಾಂಶ
ಉಡುಪಿ: ಭಾರತದ ಮೊದಲ ಉಪಪ್ರಧಾನಿ, ಗೃಹ ಸಚಿವರಾಗಿದ್ದ, ರಾಷ್ಟ್ರೀಯ ಏಕೀಕರಣದ ರೂವಾರಿ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ 150ನೇ ಜನ್ಮ ದಿನವನ್ನು ಶುಕ್ರವಾರ ‘ಏಕತಾ ನಡಿಗೆ’ ಎಂದು ಆಚರಿಸಲು ನಿರ್ಧರಿಸಲಾಗಿದೆ. ಅಂದು ಬೆಳಗ್ಗೆ 7.30ಕ್ಕೆ ಉಡುಪಿ ಕಲ್ಸಂಕ ರಾಜಾಂಗಣ ಪಾರ್ಕಿಂಗ್ ರಸ್ತೆಯ ಬಳಿಯಿಂದ ಕಡಿಯಾಳಿಯ ಬಿಜೆಪಿ ಜಿಲ್ಲಾ ಕಚೇರಿಯವರೆಗೆ ಈ ನಡಿಗೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ತಿಳಿಸಿದರು.ಅವರು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು ಅಧ್ಯಕ್ಷತೆಯಲ್ಲಿ ನಡೆದ ‘ಏಕತಾ ನಡಿಗೆ’ಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಂಸದರು, ಶಾಸಕರು, ಪಕ್ಷದ ಪ್ರಮುಖರು ಪಾಲ್ಗೊಳ್ಳುವರು ಎಂದು ಮಾಹಿತಿ ನೀಡಿದರು.ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್, ಕಾರ್ಯದರ್ಶಿಗಳಾದ ಗಿರೀಶ್ ಎಂ. ಅಂಚನ್, ಶಿವಕುಮಾರ್ ಅಂಬಲಪಾಡಿ, ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ ಉಪಸ್ಥಿತರಿದ್ದರು.
;Resize=(128,128))
;Resize=(128,128))