ಸಾರಾಂಶ
ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಚಿನ್ಮಯ ಮಯೂರ ಯೋಗ ಕ್ರೀಡಾ ಸಾಂಸ್ಕೃತಿಕ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಸಂಭ್ರಮ-50, ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಧ್ಯೇಯ ವಾಕ್ಯದೊಂದಿಗೆ ನಾಡಗೀತೆ, ರಾಷ್ಟ್ರಗೀತೆ, ರೈತಗೀತೆ ಪ್ರಾಯೋಗಿಕ ತರಬೇತಿ ಕನ್ನಡ ಗೀತಗಾಯನ, ಯೋಗ ತರಬೇತಿ ಮತ್ತು ಕವಿಕಾವ್ಯ ಪರಿಚಯ ಕಾರ್ಯಕ್ರಮವನ್ನು ಅ. 4ರ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ನಗರದ ಶಿಕ್ಷಕರ ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯದ ಆವರಣದಲ್ಲಿ ಆಯೋಜಿಲಾಗಿದೆ.ಕಾರ್ಯಕ್ರಮವನ್ನು ಪದನಿಮಿತ್ತ ಸಹನಿರ್ದೇಶಕಿ ಹಾಗೂ ಸರ್ಕಾರಿ ಬಿ.ಇಡಿ ಕಾಲೇಜಿನ ಪ್ರಾಚಾರ್ಯೆ ಟಿ.ಜಿ. ಲೀಲಾವತಿ ಉದ್ಘಾಟಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ. ಚಿತ್ರದುರ್ಗ ಸಹಾಯಕ ನಿರ್ದೇಶಕ ರವಿಚಂದ್ರ ಅಧ್ಯಕ್ಷತೆ ವಹಿಸುವರು. ಪ್ರವಾಚಕರಾದ ಎನ್.ಜೆ. ಗುರುಪ್ರಸಾದ್, ಎ. ಹನುಮಂತರಾಯ, ಉಪನ್ಯಾಸಕರಾದ ವಿಜಯ್ ಕುಮಾರ್, ಡಿ. ನರಸಿಂಹಪ್ಪ, ಕೆ. ಕಲೀಲುರ್ ರಹಮಾನ್, ಪಿ. ರಾಜಣ್ಣ, ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಯೋಗ ತರಬೇತುದಾರ ಎಂ.ಬಿ. ಮುರುಳಿ, ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ತರಬೇತಿ ಸಂಪನ್ಮೂಲಗಳಾಗಿ ಭಾಗವಹಿಸುವರು.ಪ್ರಶಿಕ್ಷಣಾರ್ಥಿಗಳಿಗೆ ಸರ್ಕಾರ ನಿಗದಿಪಡಿಸಿದ ನಾಡಗೀತೆ, ರಾಷ್ಟ್ರಗೀತೆ, ರೈತಗೀತೆ, ಹುಯಿಲುಗೋಳ ನಾರಾಯಣರಾಯರ ದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಕುವೆಂಪು ವಿರಚಿತ ಎಲ್ಲಾದರು ಇರು ಎಂತಾದರು ಇರು, ದ.ರಾ.ಬೇಂದ್ರೆ ಅವರ ಒಂದೇ ಒಂದೇ ಕರ್ನಾಟಕ ಒಂದೇ, ಸಿದ್ಧಯ್ಯ ಪುರಾಣಿಕ್ ಬರೆದ ಹೊತ್ತಿತೋ ಹೊತ್ತಿತೂ ಕನ್ನಡದ ದೀಪ, ಚನ್ನವೀರ ಕಣವಿಯವರ ಹೆಸರಾಯಿತು ಕರ್ನಾಟಕ ಉಸಿರಾಗಲಿ, ಕನ್ನಡದ ಧ್ವನಿಮುದ್ರಿತ ಗೀತೆಗಳೊಂದಿಗೆ ಯೋಗ ತರಬೇತಿ ಹಾಗೂ ಸಾಹಿತ್ಯ ಕ್ಷೇತ್ರದ ಅಶ್ವಿನಿ ದೇವತೆ ಟಿ.ಎಸ್. ವೆಂಕಣ್ಣಯ್ಯ ಇವರ ಕವಿಕಾವ್ಯ ಪರಿಚಯ ನೀಡಲಾಗುವುದು ಎಂದು ಚಿನ್ಮಯ ಮಯೂರ ಯೋಗ, ಕ್ರೀಡಾ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ಎಂ.ಬಿ. ಮೋಹನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.