ನಾಳೆ ವಿವಿಸಾಗರ ಡ್ಯಾಂಗೆ ಸಿಎಂ, ಡಿಸಿಎಂ ಬಾಗಿನ: ರಮೇಶ್ ಮಾಹಿತಿ

| Published : Jan 22 2025, 12:33 AM IST

ನಾಳೆ ವಿವಿಸಾಗರ ಡ್ಯಾಂಗೆ ಸಿಎಂ, ಡಿಸಿಎಂ ಬಾಗಿನ: ರಮೇಶ್ ಮಾಹಿತಿ
Share this Article
  • FB
  • TW
  • Linkdin
  • Email

ಸಾರಾಂಶ

ಜ.23ರಂದು ಸಿಎಂ ಮತ್ತು ಡಿಸಿಎಂ ಅವರಿಂದ ವಿ.ವಿ.ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಹೇಳಿದೆ

ಹಿರಿಯೂರು: ಜ.23ರಂದು ಸಿಎಂ ಮತ್ತು ಡಿಸಿಎಂ ಅವರಿಂದ ವಿ.ವಿ.ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಹೇಳಿದೆ.

ನಗರದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್ ಅವರು, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರ ಆಹ್ವಾನ ಮೇರೆಗೆ ವಿ.ವಿ.ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಲು ಸಿಎಂ ಹಾಗೂ ಡಿಸಿಎಂ ಆಗಮಿಸಲಿದ್ದಾರೆ ಎಂದರು.

ಜಿಲ್ಲೆಯ ಎಲ್ಲ ಹಾಲಿ, ಮಾಜಿ ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಮಾರಂಭಕ್ಕೆ ಸಕಲ ತಯಾರಿ ನಡೆಸಲಾಗಿದೆ. ತಾಲೂಕಿನಿಂದ ಸುಮಾರು 15ರಿಂದ 20 ಸಾವಿರ ಜನ ಸೇರುವ ನಿರೀಕ್ಷೆಯಿದೆ. ತಾಲೂಕಿನ ಎಲ್ಲ ಗ್ರಾಮಗಳಿಗೂ ಹಾಗೂ ಪಟ್ಟಣದ ಎಲ್ಲ ವಾರ್ಡ್‌ಗಳಿಗೆ 600 ವಾಹನ ವ್ಯವಸ್ಥೆ ಕಲ್ಪಿಸಲಾಗಿದೆ. ರಸ್ತೆಯುದ್ಧಕ್ಕೂ ಬಂಟಿಂಗ್ಸ್ ಅಳವಡಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲರಿಗೂ ಹೋಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಜಿಲ್ಲೆ ಹಾಗೂ ತಾಲೂಕಿನ ರೈತರು, ಸಾರ್ವಜನಿಕರು ಸಂಘ ಸಂಸ್ಥೆಯ ಪದಾಧಿಕಾರಿಗಳು, ವರ್ತಕರು, ಯುವಕ- ಯುವತಿಯರು, ಕಾಲೇಜು ವಿದ್ಯಾರ್ಥಿಗಳು, ಕಾರ್ಯಕರ್ತರು, ಮುಖಂಡರು ಬಾಗಿನ ಮತ್ತು ಗಂಗಾ ಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಲಿಂಗೇಗೌಡ, ನಗರಸಭಾ ಅಧ್ಯಕ್ಷ ಅಜಯ್ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್, ಗ್ಯಾರಂಟಿ ಯೋಜನೆ ಅಧ್ಯಕ್ಷ ಸೂರಗೊಂಡನಹಳ್ಳಿ ಕೃಷ್ಣಮೂರ್ತಿ, ಜಿಪಂ ಮಾಜಿ ಸದಸ್ಯ ನಾಗೇಂದ್ರ ನಾಯ್ಕ, ಕಂದಿಕೆರೆ ಸುರೇಶ್ ಬಾಬು, ಗಿಡ್ಡೋಬನಹಳ್ಳಿ ಅಶೋಕ್ ಇತರರು ಹಾಜರಿದ್ದರು.