ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಕ್ರಿಕೇಟಿಗ ಕೆ.ಎಲ್.ರಾಹುಲ್ ಭೇಟಿ

| Published : Jan 18 2024, 02:00 AM IST

ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳಕ್ಕೆ ಕ್ರಿಕೇಟಿಗ ಕೆ.ಎಲ್.ರಾಹುಲ್ ಭೇಟಿ
Share this Article
  • FB
  • TW
  • Linkdin
  • Email

ಸಾರಾಂಶ

ಕ್ರಿಕೆಟಿಗ ಮಂಗಳೂರು ಮೂಲದ ಕೆ.ಎಲ್. ರಾಹುಲ್ ಬುಧವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ಕ್ಷೇತ್ರಕ್ಕೆ ಭೇಟಿ ನೀಡಿದರು. ಭಿಮಾನಿಗಳು ರಾಹುಲ್ ಜೊತೆ ಫೊಟೊ ಕ್ಲಿಕ್ಕಿಸಿಕೊಂಡರು.

ಸುಬ್ರಹ್ಮಣ್ಯ: ಕ್ರಿಕೆಟಿಗ ಮಂಗಳೂರು ಮೂಲದ ಕೆ.ಎಲ್. ರಾಹುಲ್ ಬುಧವಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ಕ್ಷೇತ್ರಕ್ಕೆ ಭೇಟಿ ನೀಡಿದರು.

ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಕೆ.ಎಲ್.ರಾಹುಲ್ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಳದ ವತಿಯಿಂದ ಅವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ದೇವಳದ ಅಧಿಕಾರಿಗಳು, ಸಿಬ್ಬಂದಿಗಳು, ದೇವಳದವರು, ಸ್ನೇಹಿತರು ಜತೆಗಿದ್ದರು. ಅಭಿಮಾನಿಗಳು ರಾಹುಲ್ ಜೊತೆ ಫೊಟೊ ಕ್ಲಿಕ್ಕಿಸಿಕೊಂಡರು.

ಧರ್ಮಸ್ಥಳಕ್ಕೆ ಭೇಟಿ: ಕೆ.ಎಲ್. ರಾಹುಲ್ ಬುಧವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದರು. ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿದ್ದರು. ಬಳಿಕ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿ ತೆರಳಿದರು.