(ಪ್ರತಿಭಟನೆ ಫೋಟೋ ದೊಂದಿಗೆ ಸಿ.ಟಿ.ರವಿ ಅವರ ಫೋಟೋ ಸಹ ಬಳಸಿ)

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ನೀಟ್‌ ಪರೀಕ್ಷೆ ಹೆಸರಲ್ಲಿ ನಡೆಯುತ್ತಿರುವ ಪ್ರತಿಭಟನೆ ಕೇವಲ ಒಂದು ಟೂಲ್‌ ಕಿಟ್‌ ರಾಜಕಾರಣ ಇದು ದೇಶದಲ್ಲಿ ಅರಾಜಕತೆ ಸೃಷ್ಟಿಸುವುದಾಗಿ ಎಂದು ವಿಧಾನಪರಿಷತ್‌ ಸದಸ್ಯ ಸಿ.ಟಿ.ರವಿ ಆರೋಪಿಸಿದರು.

ಭಾರತ ವಿರೋಧ ಶಕ್ತಿಗಳ ಸಂಸತ್‌ ಭವನದ ಮೇಲಿನ ದಾಳಿ ಖಂಡಿಸಿ ಜಿಲ್ಲಾ ಬಿಜೆಪಿಯಿಂದ ಗುರುವಾರ ಸಂಜೆ ನಗರದ ಹನುಮಂತಪ್ಪ ವೃತ್ತದಿಂದ ಅಜಾದ್‌ ಪಾರ್ಕ್‌ ವರೆಗೆ ಪ್ರತಿಭಟನಾ ರ್‍ಯಾಲಿ ನಡೆಸಲಾಯಿತು. ಪ್ರತಿಭಟನಾ ಮೆರವಣಿಗೆ ವೇಳೆ ಕಾಂಗ್ರೆಸ್‌ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಈ ವೇಳೆ ಮಾತನಾಡಿದ ವಿಧಾನಪರಿಷತ್‌ ಸದಸ್ಯ ಡಾ.ಸಿ.ಟಿ.ರವಿ ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೆಸರಿನಲ್ಲಿ ಕಾಂಕ್ರೋಚ್‌ ಜತನಾ ಪಕ್ಷ, ಕಾಂಗ್ರೆಸ್‌ ಹಾಗೂ ಎಡಪಂತೀಯ ಪಕ್ಷಗಳು ನಡೆಸುತ್ತಿರುವ ಹೋರಾಟ, ವಿದ್ಯಾರ್ಥಿಗಳಿಗೆ ನ್ಯಾಯಕೊಡಿಸುವ ಹೋರಾಟದ ಉದ್ದೇಶವಿಲ್ಲ. ವಿದ್ಯಾರ್ಥಿಗಳಿಗೆ ನ್ಯಾಯ ಕೊಡಿಸುವ ಉದ್ದೇಶವಾಗಿದ್ದರೆ ಹೈಡ್ರೋಜನ್‌ ರೈಲಿಗೆ ಮತ್ತು ಸರ್ಕಾರಿ ಆಸ್ಪತ್ರೆಗೆ ಕಲ್ಲು ಎಸೆಯುತ್ತಿರಲಿಲ್ಲ. ಅವರ ಉದ್ದೇಶ ಸ್ಪಷ್ಟವಾಗಿದ್ದು ದೇಶದಲ್ಲಿ ಅರಾಜಕಥೆ ಸೃಷ್ಟಿಸುವುದಾಗಿದೆ ಎಂದು ಆರೋಪಿಸಿದರು.


ದೇಶದಲ್ಲಿ ಸ್ಥಿರವಾಗಿರುವ ಸರ್ಕಾರ ಅಧಿಕಾರದಲ್ಲಿದೆ. ಆ ಸ್ಥಿರ ಸರ್ಕಾರ ಜಾಗತಿಕ ಸವಾಲುಗಳನ್ನು ಸಮರ್ಥವಾಗಿ ಎದುರಿಸಿ, ರಾಷ್ಟ್ರವಾಗಿಟ್ಟಿದೆ. ಕೋವಿಡ್ ಸಮಯದಲ್ಲಿ ದೇಶದ 140 ಕೋಟಿ ಜನರ ಜೀವ ರಕ್ಷಣೆ ಮಾಡಿದೆ. ಮೋದಿ ಅವರ ಸಮರ್ಥ ನಾಯಕತ್ವ ಜಾಗತಿಕ ಮಟ್ಟದಲ್ಲಿ ದೇಶಕ್ಕೆ ಗೌರವ ತಂದಿದೆ.

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ನೀಟ್‌ ಮರು ಪರೀಕ್ಷೆಯಲ್ಲಿ ಯಾವುದೇ ಲೋಪ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆ ಫಲಿತಾಂಶ ಸಹ ಪ್ರಕಟವಾಗಿದೆ. ಆದರೆ, ಈಗ ನೀಟ್‌ ಹೆಸರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಕೇವಲ ರಾಜಕೀಯ ಲಾಭಕ್ಕೆ ಎಂದು ದೂರಿದರು.

ಚುನಾವಣೆಯಲ್ಲಿ ಗೆಲ್ಲುವುದಕ್ಕೆ ಸಾಧ್ಯವಾಗದವರು ಸುಸ್ಥಿರ ಸರ್ಕಾರವನ್ನು ಅಸ್ಥಿರಗೊಳಿಸಬೇಕೆಂದು ಮಾಡಿರುವ ಸಂಚು. ಈ ಸಂಚಿನ ಹಿಂದೆ, ಅಂತಾರಾಷ್ಟ್ರೀಯ ಬೆಂಬಲವೂ ಇದೆ. ಶ್ರೀಲಂಕಾ, ನೇಪಾಳ, ಬಾಂಗ್ಲಾ ದೇಶದಲ್ಲಿ ಯಶಸ್ವಿಯಾದ ಪಿತೂರಿ ದೇಶದಲ್ಲಿ ಈಗ ನಡೆಯುತ್ತಿದೆ. ಯಾವುದೇ ಕಾರಣಕ್ಕೂ ಆ ಪಿತೂರಿ ಯಶಸ್ವಿಯಾಗಲು ಬಿಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯ ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಕಲ್ಮರುಡಪ್ಪ ಮಾತನಾಡಿ ಕಾಂಗ್ರೆಸ್‌ ಪಕ್ಷ ದೇಶ ದ್ರೋಹಿ ಪಾಕಿಸ್ತಾನ ಮತ್ತು ಚೀನಾದೊಂದಿಗೆ ಸೇರಿ ದೇಶದಲ್ಲಿ ಅರಾಜಕತೆ ಸೃಷ್ಟಿಸಲಾಗುತ್ತಿದೆ. ವಿದೇಶಿ ಹಣದ ನೆರವಿನಿಂದ ಕಾಂಕ್ರೋಚ್‌ ಜನತಾ ಪಕ್ಷ ಸ್ಥಾಪಿಸಲಾಗಿದೆ. ನೀಟ್‌ ಪರೀಕ್ಷೆ ನೆಪದಲ್ಲಿ ದೇಶದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ಮೋದಿ ದೇಶದ ಯಾವುದೇ ವಿದ್ಯಾರ್ಥಿಗಳಿಗೆ ತೊಂದರೆ ಆಗುವುದಕ್ಕೆ ಬಿಡುವುದಿಲ್ಲ ಎಂದರು.

ಪ್ರತಿಭಟನೆಯಲ್ಲಿ ಬಿಜೆಪಿ ನಗರ ಘಟಕ ಅಧ್ಯಕ್ಷ ಪುಷ್ಪರಾಜ್‌, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂತೋಷ್‌ ಕೋಟ್ಯಾನ್‌, ಬಿಜೆಪಿ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ಪ್ರಧಾನ ಕಾರ್ಯದರ್ಶಿ ರವೀಂದ್ರ ಬೆಳವಾಡಿ ಸೇರಿದಂತೆ ಮೊದಲಾದವರಿದ್ದರು.