ಮಂಗ್ಳೂರಲ್ಲಿ ಉನ್ನತ ದರ್ಜೆಯ ಒಳಾಂಗಣ ಕ್ರೀಡಾಂಗಣ: ಸ್ಪೀಕರ್ ಯು.ಟಿ.ಖಾದರ್‌

| Published : Jan 04 2025, 12:33 AM IST

ಮಂಗ್ಳೂರಲ್ಲಿ ಉನ್ನತ ದರ್ಜೆಯ ಒಳಾಂಗಣ ಕ್ರೀಡಾಂಗಣ: ಸ್ಪೀಕರ್ ಯು.ಟಿ.ಖಾದರ್‌
Share this Article
  • FB
  • TW
  • Linkdin
  • Email

ಸಾರಾಂಶ

ಕ್ರೀಡಾ ಚಟುವಟಿಕೆಗಳಿಗೆ ಸಂಬಂಧಿಸಿರುವುದರಿಂದ ಕಾಮಗಾರಿಯ ಅತ್ಯಂತ ಸೂಕ್ಷ್ಮತೆಯಿಂದ ನಡೆಸಬೇಕು. ಗುಣಮಟ್ಟದ ಸಾಮಗ್ರಿಗಳನ್ನು ಬಳಸಿಕೊಂಡು ಉನ್ನತ ತಂತ್ರಜ್ಞಾನದ ಸಹಾಯದಿಂದ ಕಾಮಗಾರಿ ನಿರ್ವಹಿಸಬೇಕು ಎಂದು ಸ್ಪೀಕರ್ ಸೂಚಿಸಿದರು.

ಕನ್ನಡಪ್ರಭ ವಾರ್ತೆ ಮಂಗಳೂರು

ನಗರದ ಉರ್ವ ಮಾರ್ಕೆಟ್‍ನಲ್ಲಿ ನಿರ್ಮಾಣಗೊಳ್ಳುತ್ತಿರುವ ಒಳಾಂಗಣ ಕ್ರೀಡಾಂಗಣ ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಮಹತ್ತರ ಕೊಡುಗೆಯಾಗಲಿದೆ ಎಂದು ಸ್ಪೀಕರ್ ಯು.ಟಿ ಖಾದರ್ ತಿಳಿಸಿದರು. ಅವರು ಶುಕ್ರವಾರ ಒಳಾಂಗಣ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲಿಸಿದರು.

ಗುಣಮಟ್ಟದಲ್ಲಿ ರಾಜಿಯಾಗದೆ ಈ ಕ್ರೀಡಾಂಗಣದ ಕಾಮಗಾರಿಯನ್ನು ನಡೆಸಬೇಕು. ಕ್ರೀಡಾ ಚಟುವಟಿಕೆಗಳಿಗೆ ಸಂಬಂಧಿಸಿರುವುದರಿಂದ ಕಾಮಗಾರಿಯ ಅತ್ಯಂತ ಸೂಕ್ಷ್ಮತೆಯಿಂದ ನಡೆಸಬೇಕು. ಗುಣಮಟ್ಟದ ಸಾಮಗ್ರಿಗಳನ್ನು ಬಳಸಿಕೊಂಡು ಉನ್ನತ ತಂತ್ರಜ್ಞಾನದ ಸಹಾಯದಿಂದ ಕಾಮಗಾರಿ ನಿರ್ವಹಿಸಬೇಕು ಎಂದು ಸ್ಪೀಕರ್ ಸೂಚಿಸಿದರು.

ಕಬಡ್ಡಿ ಮತ್ತು ಬ್ಯಾಡ್ಮಿಂಟನ್ ಕ್ರೀಡೆಗಳಿಗೆ ಕ್ರೀಡಾಂಗಣವನ್ನು ಬಳಸಿಕೊಳ್ಳಲಾಗುವುದು. ಈ ನಿಟ್ಟಿನಲ್ಲಿ ಮುತುವರ್ಜಿಯಿಂದ ಕಾಮಗಾರಿ ನಿರ್ವಹಿಸಬೇಕು. ಆದಷ್ಟು ಬೇಗನೆ ಕ್ರೀಡಾಂಗಣವನ್ನು ಉದ್ಘಾಟಿಸಿ ಕ್ರೀಡಾ ಚಟುವಟಿಕೆಗಳಿಗೆ ಸಮರ್ಪಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಮುಲೈ ಮುಗಿಲನ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರಾಜು, ಕ್ರೀಡಾ ಸಂಘಟನೆಗಳ ಪದಾಧಿಕಾರಿಗಳು ಇದ್ದರು.