ಸಾರಾಂಶ
ಸಭೆಯಲ್ಲಿ ಮಂಗಲ ಗ್ರಾಮ ಪಂಚಾಯಿತಿಯಲ್ಲಿ ಕೇವಲ ಶೇ.20 ರಷ್ಟು ತೆರಿಗೆ ವಸೂಲಾತಿ ಆಗಿರುವ ಹಿನ್ನೆಲೆ ಮುಂದಿನ ದಿನಗಳಲ್ಲಿ ಶೇ.80ರಷ್ಟು ವಸೂಲಾತಿ ಸಾಧಿಸುವಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು.
ಕನ್ನಡಪ್ರಭ ವಾರ್ತೆ ಹನೂರು
ಚಾಮರಾಜನಗರ ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಹನೂರು ತಾಲೂಕಿನ ಮಂಗಲ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರೊಂದಿಗೆ ಸಭೆ ನಡೆಸಿದರು.ಬಳಿಕ ಅವರು ಮಾತನಾಡಿ, ಮುಖ್ಯಮಂತ್ರಿಗಳ ಆಶಯ ಗ್ರಾಮಾಭಿವೃದ್ಧಿ ವೇಗವಾಗಿ ನಡೆಯಬೇಕು ಎಂಬುದಾಗಿದೆ, ಈ ಯೋಜನೆಯಡಿ ಮಂಗಲ ಗ್ರಾಮವನ್ನು ದತ್ತು ಪಡೆದು, ಅದರ ಸಮಗ್ರ ಅಭಿವೃದ್ಧಿಗೆ ತೊಡಗಿಕೊಳ್ಳಬೇಕು. ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಜೊತೆಗೆ ಶಿಕ್ಷಣ, ಆರೋಗ್ಯ, ಕುಡಿಯುವ ನೀರು ಮತ್ತು ಸ್ವಚ್ಛತೆಯ ಮೇಲೂ ಹೆಚ್ಚಿನ ಒತ್ತು ನೀಡಲಾಗುವುದು ಹಾಗೂ
ಜನರ ಅಭಿಪ್ರಾಯ ಆಲಿಸಿ, ಸ್ಥಳೀಯ ಅಗತ್ಯಗಳನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯ ಯೋಜನೆ ರೂಪಿಸುವ ಭರವಸೆ ನೀಡಿದರು.ಜನಸಹಭಾಗಿತ್ವದ ಮೂಲಕ ಗ್ರಾಮಾಭಿವೃದ್ಧಿ ಕಾರ್ಯಕ್ರಮಗಳು ಯಶಸ್ವಿಯಾಗಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಮಂಗಲ ಗ್ರಾಮ ಪಂಚಾಯಿತಿಯಲ್ಲಿ ಕೇವಲ ಶೇ.20 ರಷ್ಟು ತೆರಿಗೆ ವಸೂಲಾತಿ ಆಗಿರುವ ಹಿನ್ನೆಲೆ ಮುಂದಿನ ದಿನಗಳಲ್ಲಿ ಶೇ.80ರಷ್ಟು ವಸೂಲಾತಿ ಸಾಧಿಸುವಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು ಎಂದು ಅವರು ಸೂಚಿಸಿದರು. ಗ್ರಾಮ ಪಂಚಾಯಿತಿಗಳ ಆರ್ಥಿಕ ಸ್ಥಿರತೆ ತೆರಿಗೆ ವಸೂಲಾತಿಯ ಮೇಲೆಯೇ ಅವಲಂಬಿತವಾಗಿದೆ. ಮನೆಮನೆಗೂ ತೆರಿಗೆ ಸಂಗ್ರಹಣೆಗಾಗಿ ಜನರಲ್ಲಿ ಜಾಗೃತಿ ಮೂಡಿಸಿ, ನಿಗದಿತ ಗುರಿ ಸಾಧಿಸಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಇಒ ಉಮೇಶ್, ಪಿಡಿಒ ದೊರೆ, ಅಧ್ಯಕ್ಷ ಉಮಾ ಹಾಜರಿದ್ದರು.
;Resize=(128,128))
;Resize=(128,128))