ಕೊಪ್ಪ ಹೋಬಳಿ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಕೆ.ವಿವೇಕಾನಂದ

| Published : Sep 22 2025, 01:00 AM IST

ಸಾರಾಂಶ

ಕೊಪ್ಪ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ಮತ್ತು ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಪ್ರಯಾಣಿಕರ ತಂಗುದಾಣ ಹಾಗೂ ಅವೇರಹಳ್ಳಿಯಲ್ಲಿ 5 ಲಕ್ಷದಲ್ಲಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಿನಾಯಕ ದೇಗುಲದ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಚಾಲನೆ.

ಕನ್ನಡಪ್ರಭ ವಾರ್ತೆ ಮದ್ದೂರು

ತಾಲೂಕಿನ ಕೊಪ್ಪ ಹೋಬಳಿಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ವಿಧಾನ ಪರಿಷತ್ ಸದಸ್ಯ ಕೆ.ವಿವೇಕಾನಂದ ತಿಳಿಸಿದರು.

ತಾಲೂಕಿನ ಕೊಪ್ಪ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ಮತ್ತು ಸಾರಿಗೆ ಸಂಸ್ಥೆ ಬಸ್ ನಿಲ್ದಾಣದ ಪ್ರಯಾಣಿಕರ ತಂಗುದಾಣ ಹಾಗೂ ಅವೇರಹಳ್ಳಿಯಲ್ಲಿ 5 ಲಕ್ಷದಲ್ಲಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಿನಾಯಕ ದೇಗುಲದ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.

ತಮ್ಮ ಶಾಸಕರ ಕ್ಷೇತ್ರ ಅಭಿವೃದ್ಧಿಯ ವಿಶೇಷ ಅನುದಾನದಲ್ಲಿ ಕೊಪ್ಪ ಹೋಬಳಿಯ ವ್ಯಾಪ್ತಿಯಲ್ಲಿ ಪ್ರಯಾಣಿಕರ ತಂಗುದಾಣ ಸೇರಿದಂತೆ ಅಭಿವೃದ್ಧಿ ಕಾರ್ಯಕ್ರಮ ಕೈಗೊಳ್ಳುವಂತೆ ಹೋಬಳಿ ವ್ಯಾಪ್ತಿಯ ಗ್ರಾಮಸ್ಥರು ಬೇಡಿಕೆ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಶಾಸಕರ ವಿಶೇಷ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಈ ವೇಳೆ ಗ್ರಾಪಂ ಅಧ್ಯಕ್ಷ ಸಂತೋಷ್ ಕೊಟ್ಟಿಗೆ ಯಾರ್, ಮುಖಂಡರಾದ ಕೆ.ಟಿ.ಲಕ್ಷ್ಮಣ್, ಕೆ.ಟಿ.ಕೃಷ್ಣೇಗೌಡ, ಪೂರ್ಣಚಂದ್ರ, ಕೆ.ಜಿ.ಕೃಷ್ಣೇಗೌಡ, ಪ್ರದೀಪ್, ದೇವರಾಜು, ಕರಿಯಪ್ಪ ಮತ್ತಿತರರು ಇದ್ದರು.

ದಸರಾ ಕವಿಗೋಷ್ಠಿಗೆ ಸಿ.ಎಂ.ಕ್ರಾಂತಿಸಿಂಹ ಆಯ್ಕೆ

ಮದ್ದೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಭಾತ (ಪ್ರದೇಶಿಕ) ಕವಿಗೋಷ್ಠಿಗೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಯಡವನಹಳ್ಳಿಯ ಸಾಹಿತಿ ಸಿ.ಎಂ. ಕ್ರಾಂತಿಸಿಂಹ ಆಯ್ಕೆಯಾಗಿದ್ದಾರೆ. ಸೆ.23ರಂದು ಬೆಳಗ್ಗೆ 10-30ಕ್ಕೆ ಮೈಸೂರಿನ ಮಾನಸ ಗಂಗೋತ್ರಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬಿ.ಎಂ.ಶ್ರೀ ಸಭಾಂಗಣದಲ್ಲಿ ಸ್ವ ರಚಿತಾ ಕವನವನ್ನು ವಾಚನ ಮಾಡಲಿದ್ದಾರೆ.ಸೆ.24 ರಂದು ಮಹಾಸಭೆ

ಮಂಡ್ಯ: ನಗರದ ಕಲ್ಲಹಳ್ಳಿ ಎಪಿಎಂಸಿ ಮಾರುಕಟ್ಟೆ ರಸ್ತೆಯ ನಾಗಸಿರಿ ಕನ್ವೆಕ್ಷನ್ ಹಾಲ್ ಸೆ.24ರಂದು ಲೋಕಪಾವನಿ ಮಹಿಳಾ ಸಹಕಾರಿ ಬ್ಯಾಂಕ್ ನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ನಡೆಯಲಿದೆ. ಅಂದು ಬೆಳಗ್ಗೆ 10.30ಕ್ಕೆ ಸಂಘದ ಅಧ್ಯಕ್ಷೆ ಸಿ.ಜೆ.ಸುಜಾತ ಕೃಷ್ಣ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಎಲ್ಲಾ ಸದಸ್ಯರು ಸಭೆಯಲ್ಲಿ ಭಾಗವಹಿಸುವಂತೆ ಬ್ಯಾಂಕ್ ಪ್ರಭಾರ ವ್ಯವಸ್ಥಾಪಕರು ತಿಳಿಸಿದ್ದಾರೆ.